ಹೊಸ ವರ್ಷಕ್ಕೆ ಪುಷ್ಪಾಲಂಕೃತ ಧರ್ಮಸ್ಥಳ: ಒಂದು ಟನ್ ಹಣ್ಣು, ವಿವಿಧ ಬಗೆಯ ಹೂಗಳಿಂದ ಸಿಂಗಾರ
Team Udayavani, Jan 1, 2025, 7:05 AM IST
ಬೆಳ್ತಂಗಡಿ: ಹೊಸ ಕ್ಯಾಲೆಂಡರ್ ವರ್ಷವನ್ನು ಬರಮಾಡಿಕೊಳ್ಳುವ ಸುಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿಯ ಸನ್ನಿಧಾನಕ್ಕೆ ಪ್ರತೀ ವರ್ಷದಂತೆ ಈ ವರ್ಷವೂ ಭಕ್ತರು ವಿಶೇಷವಾಗಿ ಹೂವಿನ ಅಲಂಕಾರ ಮಾಡಿದ್ದಾರೆ.
ಬೆಂಗಳೂರಿನ ಟಿವಿಎಸ್ ಕಂಪೆನಿ ಉದ್ಯಮಿ ಗೋಪಾಲ್ ರಾವ್ ಹಾಗೂ ಆನಂದ ಮೂರ್ತಿ ಅವರ ತಂಡವು ದೇಗುಲ, ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಬೀಡು, ಅನ್ನಛತ್ರ ಸಹಿತ ಮುಂಭಾಗ, ಒಳಾಂಗಣ, ಹೊರಾಂಗಣ, ಗೋಪುರ, ಮುಖಮಂಟಪವನ್ನು ಸಂಪೂರ್ಣವಾಗಿ ಸಿಂಗರಿಸಿದ್ದಾರೆ.
ಡಿ. 25ರಿಂದ 80 ಮಂದಿಯ ತಂಡವು ಸತತವಾಗಿ ಅಲಂಕಾರದಲ್ಲಿ ತೊಡಗಿದ್ದು, ಈ ಬಾರಿ ಮುಂಭಾಗವನ್ನು ಆದಿಯೋಗಿ ಪ್ರತಿಮೆಯೊಂದಿಗೆ ಅತ್ಯದ್ಭುತವಾಗಿ ಸಿದ್ಧಗೊಳಿಸಲಾಗಿದೆ. 16 ವರ್ಷಗಳಿಂದ ಈ ತಂಡ ಅಲಂಕಾರ ಮಾಡುತ್ತಿದ್ದು, ಪ್ರಸಕ್ತ ವರ್ಷ 20 ಲಕ್ಷ ರೂ. ವೆಚ್ಚದಲ್ಲಿ ಅಲಂಕರಿಸಲಾಗಿದೆ.
ಸ್ವದೇಶಿ, ವಿದೇಶಿ ಹೂವುಗಳು, ಅಡಿಕೆ, ಭತ್ತದ ತೆನೆ, ಹೊಂಬಾಳೆ, ದಾಳಿಂಬೆ, ತೆಂಗಿನಕಾಯಿ, ಬಾಳೆಹಣ್ಣು, ಮೂಸಂಬಿ, ಕಬ್ಬು ಸಹಿತ 1 ಟನ್ ಹಣ್ಣು ಬಳಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.