Mangaluru: ಮಕ್ಕಳಲ್ಲಿ ಹೆಚ್ಚುತ್ತಿದೆ ಶೀತ, ಕೆಮ್ಮು , ಜ್ವರ
ಹವಾಮಾನ ಬದಲಾವಣೆಯಿಂದ ಸಾಂಕ್ರಾಮಿಕ ರೋಗ ಭೀತಿ !
Team Udayavani, Aug 8, 2024, 1:18 PM IST
ಮಹಾನಗರ: ಕೆಲವು ದಿನಗಳಿಗೆ ಹೋಲಿಸಿದರೆ ಮಳೆ ತುಸು ಬಿಡುವು ನೀಡಿದ್ದು, ಸಾಂಕ್ರಾಮಿಕ ರೋಗಗಳ ಆತಂಕ ಎದುರಾಗಿದೆ. ಅದರಲ್ಲೂ ಕಳೆದ ಕೆಲವು ದಿನಗಳಲ್ಲಿ ಶೀತ, ಜ್ವರ, ಕೆಮ್ಮು ಮುಂತಾದ ರೋಗಗಳು ಕಾಣಿಸಿಕೊಳ್ಳುತ್ತಿವೆ.
ಕಳೆದೆರಡು ದಿನಗಳಿಂದ ಜಿಲ್ಲೆಯಾದ್ಯಂತ ಬಿಸಿಲು, ಮೋಡದ ವಾತಾವರಣ ಇದ್ದು, ಬಿಟ್ಟು ಬಿಟ್ಟು ಮಳೆಯಾಗುತ್ತಿದೆ. ಈ ವಾತಾವರಣ ಬದಲಾವಣೆ ಜನರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ. ಮಕ್ಕಳಲ್ಲಿ ಹೆಚ್ಚಾಗಿ ವೈರಲ್ ಫೀವರ್ ಹೆಚ್ಚಾಗುತ್ತಿದ್ದು, ವೈದ್ಯರ ಬಳಿ ಬರುವವರ ಸಂಖ್ಯೆಯೂ ಏರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ವಹಿಸಬೇಕಾದ ಅನಿವಾರ್ಯವಿದೆ. ಜ್ವರ ಸೇರಿದಂತೆ ಸಾಂಕ್ರಾಮಿಕ ರೋಗ ಮಕ್ಕಳಲ್ಲಿ ಕಂಡುಬಂದರೆ ಅವರನ್ನು ಶಾಲೆಗೆ ಕಳುಹಿಸದೇ ಇರುವುದು ಉತ್ತಮ. ಇಲ್ಲವಾದರೆ ಅದು ಬೇರೊಬ್ಬರಿಗೆ ಹರಡುವ ಸಾಧ್ಯತೆ ಹೆಚ್ಚಿರುತ್ತದೆ.
ಕೆಲವು ದಿನಗಳಿಂದ ಮಕ್ಕಳಲ್ಲಿ ಕಾಲು ಬಾಯಿ ರೋಗ (ಹ್ಯಾಂಡ್ ಫೂಟ್ ಆ್ಯಂಡ್ ಮೌತ್ ಡಿಸೀಸ್) ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ. ಸುಮಾರು 5ರಿಂದ 10 ವರ್ಷದ ಮಕ್ಕಳಲ್ಲಿ ಈ ರೋಗ ಕಂಡುಬರುತ್ತಿದ್ದು, ಇದು ಸಾಂಕ್ರಾಮಿಕ ರೋಗವಾಗಿದೆ. ಶಾಲೆಗಳಲ್ಲಿ ಮಕ್ಕಳಲ್ಲಿ ಒಬ್ಬರಿಂದೊಬ್ಬರಿಗೆ ಹರಡುವ ಸಾಧ್ಯತೆ ಇರುವ ಕಾರಣ ಹೆಚ್ಚಿನ ಅಂಗನವಾಡಿ, ನರ್ಸರಿ ವಿದ್ಯಾರ್ಥಿಗಳ ಹೆತ್ತವರಿಗೆ ಆಯಾ ಸಂಸ್ಥೆಯು ಸೂಚನೆ ನೀಡುತ್ತಿದೆ.
ಡೆಂಗ್ಯೂ ಹೆಚ್ಚಳದ ಭೀತಿ
ಭಾರೀ ಮಳೆಯಾಗುತ್ತಿದ್ದರೆ ನೀರು ಹರಿದುಹೋಗುವುದರಿಂದ ಡೆಂಗ್ಯೂ ಪ್ರಕರಣ ತುಸು ಕಡಿಮೆ ಇತ್ತು. ಇದೀಗ ಸ್ವತ್ಛ ನಿಂತ ನೀರಿನಲ್ಲಿ ಡೆಂಗ್ಯೂ ಹರಡುವ ಸೊಳ್ಳೆ ಉತ್ಪತ್ತಿಯಾಗುವ ಸಾಧ್ಯತೆ ಹೆಚ್ಚು ಇದೆ. ಜಿಲ್ಲೆಯಲ್ಲಿ ಸದ್ಯ 418 ಪ್ರಕರಣಗಳಿವೆ.
ಮುನ್ನೆಚ್ಚರಿಕೆ ಅಗತ್ಯ
ಕೈಕಾಲುಗಳನ್ನು ಚೆನ್ನಾಗಿ ತೊಳೆದುಕೊಳ್ಳಿ
ಮನೆಯಿಂದ ಹೊರಗಡೆ ಹೋಗುವಾಗ ಮಾಸ್ಕ್ ಧರಿಸಿ
ಕುಡಿಯಲು ಕುದಿಸಿ ಆರಿಸಿದ ನೀರನ್ನು ಉಪಯೋಗಿಸಿ
ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಆಹಾರಗಳನ್ನು ಸೇವನೆ ಮಾಡಿ
ಜ್ವರ ಸಹಿತ ರೋಗ ಲಕ್ಷಣ ಕಂಡುಬಂದರೆ ವೈದ್ಯರನ್ನು ಸಂಪರ್ಕಿಸಿ
ವೈದ್ಯರ ಸಲಹೆಯಿಲ್ಲದೆ ಯಾವುದೇ ಮಾತ್ರೆ ಸೇವಿಸಬೇಡಿ
ಮಕ್ಕಳಲ್ಲಿ ಸಾಂಕ್ರಾಮಿಕ ರೋಗ ಬಂದರೆ ಶಾಲೆಗೆ ಕಳುಹಿಸದಿರುವುದು ಉತ್ತಮ
ವೈದ್ಯರ ಸಲಹೆ ಇಲ್ಲದೆ ಮಾತ್ರೆ ಸೇವಿಸದಿರಿ
ಕೆಲವು ದಿನಗಳಿಂದ ವೈರಲ್ ಫೀವರ್ ಹೆಚ್ಚಾಗಿ ಕಂಡುಬರುತ್ತಿದೆ. ಮಕ್ಕಳಲ್ಲಿ ಶೀತ, ಜ್ವರ ಸಹಿತ ಸಾಂಕ್ರಾಮಿಕ ರೋಗಗಳು ಕಂಡುಬಂದರೆ ಶಾಲೆಗೆ ಕಳುಹಿಸಬೇಡಿ. ಈ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಅಧಿಕಾರಿಗಳ ಜತೆಗೂ ಸಭೆ ನಡೆಸುತ್ತೇವೆ. ಜ್ವರ ಇರುವ ಸಂದರ್ಭದಲ್ಲಿ ವೈದ್ಯರ ಸಲಹೆ ಇಲ್ಲದೆ ನೋವು ನಿವಾರಕ ಮಾತ್ರೆಗಳನ್ನು ತೆಗೆದುಕೊಳ್ಳಬೇಡಿ. ಇದರಿಂದ ಗಂಭೀರ ಅಡ್ಡ ಪರಿಣಾಮಗಳು ಉಂಟಾಗಬಹುದು. ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಿ.
– ಡಾ| ತಿಮ್ಮಯ್ಯ, ದ.ಕ. ಜಿಲ್ಲಾ ಆರೋಗ್ಯಾಧಿಕಾರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.