![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Oct 4, 2021, 5:38 AM IST
ಹೊಸಪೇಟೆ: ವಿಜಯನಗರ ಜಿಲ್ಲೆ ಉದ್ಘಾಟನೆ ಹಾಗೂ ವಿಜಯನಗರ ವೈಭವ ಉತ್ಸವಕ್ಕೆ ರವಿವಾರ ತೆರೆ ಬಿದ್ದಿತು.
ನಗರದ ಜಿಲ್ಲಾ ಕ್ರೀಡಾಂಗಣ ಆವರಣದಲ್ಲಿ ಹಂಪಿ ಪ್ರಸಿದ್ಧ ಸ್ಮಾರಕಗಳನ್ನೊಳಗೊಂಡ ವಿದ್ಯಾರಣ್ಯ ವೇದಿಕೆಯಲ್ಲಿ ರವಿವಾರ ಜರಗಿದ ಸಮಾರೋಪ ಸಮಾರಂಭದಲ್ಲಿ ಪ್ರವಾಸೋದ್ಯಮ, ಪರಿಸರ ಹಾಗೂ ಜೀವಿಶಾಸ್ತ್ರ ಸಚಿವ ಆನಂದ ಸಿಂಗ್ ಮಾತನಾಡಿ, ಅಧಿಕಾರ ಶಾಶ್ವತ ವಲ್ಲ. ಅಧಿಕಾರದಲ್ಲಿದ್ದಾಗ ನಾವು ಮಾಡಿದ ಉತ್ತಮ ಕಾರ್ಯಗಳು ಇತಿಹಾಸದಲ್ಲಿ ಉಳಿಯುವಂತಾಗಬೇಕು. ಈ ಉದ್ದೇಶ ದಿಂದ ವಿಜಯನಗರ ಜಿಲ್ಲೆ ರಚನೆಗಾಗಿ ನಾನು ಅಧಿಕಾರ ತ್ಯಾಗ ಮಾಡಿದ್ದೆ ಎಂದರು.
ಸಹಕಾರ ಸಚಿವ ಎಸ್.ಟಿ. ಸೋಮಶೇಖರ ಮಾತನಾಡಿ, ಹೊಸ ಜಿಲ್ಲೆಯ ದೀರ್ಘ ಕಾಲದ ಕನಸನ್ನು ನನಸು ಮಾಡಿದ ಶ್ರೇಯ ಆನಂದ ಸಿಂಗ್‌ಗೆ ಸಲ್ಲುತ್ತದೆ ಎಂದರು.
ಸಚಿವರಾದ ಬಿ.ಸಿ.ಪಾಟೀಲ್, ಶಿವರಾಂ ಹೆಬ್ಟಾರ್, ಡಾ| ಕೆ.ಸಿ.ನಾರಾಯಣಗೌಡ, ಚಲನಚಿತ್ರ ನಟ ಅಜಯ ರಾವ್ ಮೊದಲಾದವರು ಮಾತನಾಡಿ ದರು. ರಾಜನಹಳ್ಳಿ ಮಹರ್ಷಿ ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದ ಮಹಾಸ್ವಾಮೀಜಿ ವೀಡಿಯೋ ಸಂದೇಶದ ಮೂಲಕ ಶುಭ ಹಾರೈಸಿದರು. ಜಿಲ್ಲೆಯ ಹಿರಿಮೆ ಸಾರುವ ವಿಡಿಯೋ ಪ್ರದರ್ಶಿಸಲಾಯಿತು.
ಇದನ್ನೂ ಓದಿ:ಕಾಬೂಲ್ ಮಸೀದಿಯಲ್ಲಿ ಬಾಂಬ್ ಸ್ಫೋಟ: ಇಬ್ಬರು ಸಾವು, ಹಲವರಿಗೆ ಗಾಯ
ರಾಜಬೀದಿಯಲ್ಲಿ ಭವ್ಯ ಮೆರವಣಿಗೆ
ಡೊಳ್ಳು ಕುಣಿತ, ಪೂಜೆ ಕುಣಿತ, ಪಟ ಕುಣಿತ, ಕಂಸಾಳೆ ಕುಣಿತ, ಹಗಲುವೇಷಧಾರಿಗಳ ವಿಭಿನ್ನ ವೇಷ ಹಾಗೂ ಕಹಳೆ ನಾದಕ್ಕೆ ಸಾಕ್ಷಿಯಾಗಿ 101 ಜೋಡಿಗಳ ಎತ್ತಿನ ಬಂಡಿಯ ಮೆರವಣಿಗೆ ನಗರದ ರಾಜಬೀದಿಯಲ್ಲಿ ನಡೆಯಿತು.
Hosapete: ತುಂಬಿದ ಕೊಡ ತುಳುಕಿತಲೇ ಪರಾಕ್.. ಶ್ರೀಮೈಲಾರಲಿಂಗೇಶ್ವರ ಕಾರ್ಣಿಕೋತ್ಸವ
Kampli: ಕಣವಿ ತಿಮ್ಮಾಪುರದಲ್ಲಿ ಶ್ರೀ ಕೃಷ್ಣದೇವರಾಯನ ಕಾಲದ ತೆಲುಗು ಶಾಸನ ಪತ್ತೆ
BJP: ರಾಜ್ಯಾಧ್ಯಕ್ಷ ಸ್ಥಾನ ಕೊಟ್ಟರೆ ಎಲ್ಲರನ್ನೂ ಒಂದುಗೂಡಿಸುವೆ: ಬಿ.ಶ್ರೀರಾಮುಲು
Prayagraj: ಕುಂಭಮೇಳದಲ್ಲಿ ಶ್ರೀರಾಮುಲು ದಂಪತಿಯಿಂದ ಪುಣ್ಯಸ್ನಾನ
Siruguppa: ತಹಶೀಲ್ದಾರ್ ಗೆ ಬೆದರಿಕೆ ಪ್ರಕರಣ, ಕೇಸು ದಾಖಲು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.