Safety: ಸುರಕ್ಷ ಕ್ರಮಗಳನ್ನು ಪಾಲಿಸಿ, ಅಮಾಯಕರ ಜೀವ ಉಳಿಸಿ


Team Udayavani, Oct 11, 2023, 12:12 AM IST

Crackers

ದೀಪಾವಳಿ ಹಬ್ಬದ ಸಂಭ್ರಮಕ್ಕೆ ತಿಂಗಳಷ್ಟೇ ಬಾಕಿ ಉಳಿದಿದೆ. ದೀಪಾವಳಿ ಸಮೀಪಿಸಿತೆಂದರೆ ಸಾಕು ದೇಶದ ಅಲ್ಲಲ್ಲಿ ಪಟಾಕಿ ದುರಂತಗಳು ಸಂಭವಿಸಿ ಪ್ರಾಣ ಹಾನಿ, ಆಸ್ತಿಪಾಸ್ತಿ ನಷ್ಟ ಸಂಭವಿಸುವುದು ಸರ್ವೇ­ಸಾಮಾನ್ಯ ಎಂಬಂ­ತಾಗಿದೆ. ಇದನ್ನು ತಪ್ಪಿಸುವ ನಿಟ್ಟಿನಲ್ಲಿ ಕಳೆದ ಹಲವಾರು ವರ್ಷಗಳಿಂದ ಸರಕಾರ ಪ್ರಯತ್ನಿಸುತ್ತಲೇ ಬಂದಿದ್ದರೂ ನಿರೀಕ್ಷಿತ ಯಶಸ್ಸು ಲಭಿಸಿಲ್ಲ. ಈ ಬಾರಿ ತಿಂಗಳಿಗೂ ಮುನ್ನವೇ ಪಟಾಕಿ ಗೋದಾಮುಗಳು, ಉತ್ಪಾದನ ಘಟಕ­ಗಳಲ್ಲಿ ದುರಂತಗಳು ಸಂಭವಿಸಿ ಅಮಾಯಕರ ಸಾವಿಗೆ ಕಾರಣವಾಗಿವೆ.

ಆಗಸ್ಟ್‌ ಕೊನೆಯಲ್ಲಿ ಹಾವೇರಿಯ ಗ್ರಾಮವೊಂದರ ಪಟಾಕಿ ಗೋದಾಮಿ ನಲ್ಲಿ ಸ್ಫೋಟ ಸಂಭವಿಸಿ ನಾಲ್ವರು ಕಾರ್ಮಿಕರು ಸಾವನ್ನಪ್ಪಿದ್ದರು. ಶನಿವಾರ ಸಂಜೆ ಬೆಂಗಳೂರು ಹೊರವಲಯದ ಆನೇಕಲ್‌ ತಾಲೂಕಿನ ಅತ್ತಿಬೆಲೆ ಗೋದಾಮಿನಲ್ಲಿ ಪಟಾಕಿ ದುರಂತ ಸಂಭವಿಸಿ 14 ಮಂದಿ ಮೃತಪಟ್ಟಿದ್ದರು. ಸೋಮವಾರ ಬೆಳಗ್ಗೆ ತಮಿಳುನಾಡಿನ ಅರಿಯಲೂರಿನಲ್ಲಿನ ಪಟಾಕಿ ತಯಾರಿಕ ಘಟಕದಲ್ಲಿ ಸಂಭವಿಸಿದ ಬೆಂಕಿ ಆಕಸ್ಮಿಕದಲ್ಲಿ 9 ಮಂದಿ ಸಾವಿಗೀಡಾಗಿದ್ದಾರೆ. ಈ ಎಲ್ಲ ಘಟನೆಗಳು ಪಟಾಕಿ ತಯಾರಿಕ ಘಟಕಗಳು, ಸಂಗ್ರಹಿಸಿಡಲಾಗುವ ಗೋದಾಮುಗಳು, ಮಾರಾಟ ಮಳಿಗೆಗಳ ಸುರಕ್ಷೆಯ ಕುರಿತಂತೆ ಜನರಲ್ಲಿ ಅನುಮಾನ ಮೂಡಿಸಿವೆ.

ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪಟಾಕಿಗಳಿಗೆ ಭಾರೀ ಬೇಡಿಕೆ ಇರುವುದರಿಂದ ಸಹಜವಾಗಿಯೇ ಪಟಾಕಿ ಉತ್ಪಾದನ ಘಟಕಗಳು ಪಟಾಕಿ ತಯಾರಿಯಲ್ಲಿ ಬಿರುಸಿನಿಂದ ತೊಡಗಿಕೊಳ್ಳುತ್ತವೆ. ಅಷ್ಟು ಮಾತ್ರವಲ್ಲದೆ ಹೀಗೆ ಉತ್ಪಾದನೆಯಾದ ಪಟಾಕಿಗಳನ್ನು ವಿವಿಧ ಸ್ಥಳಗಳಿಗೆ ರವಾನಿಸಿ ಅಲ್ಲಿನ ಗೋದಾಮುಗಳಲ್ಲಿ ದಾಸ್ತಾನು ಇರಿಸಲಾಗುತ್ತದೆ. ಹಬ್ಬ ಸಮೀಪಿಸುತ್ತಿದ್ದಂತೆಯೇ ಪಟಾಕಿಗಳನ್ನು ಮಾರಾಟ ಮಳಿಗೆಗಳಿಗೆ ಪೂರೈಸಲಾಗುತ್ತದೆ. ನಿಯಮಾವಳಿಗಳಿಗನುಸಾರವಾಗಿಯೇ ಇವೆಲ್ಲವೂ ನಡೆಯುತ್ತವೆ. ಇಷ್ಟೆಲ್ಲ ಆಗಿಯೂ ಪಟಾಕಿ ದುರಂತಗಳು ಸಂಭವಿಸಿ ಬಡ ಕಾರ್ಮಿಕರ ಮತ್ತು ಅಮಾಯಕರ ಪ್ರಾಣಕ್ಕೆ ಸಂಚಕಾರ ತಂದೊ ಡ್ಡುತ್ತಿರುವುದು ನಿಜಕ್ಕೂ ತೀರಾ ಕಳವಳಕಾರಿ ಸಂಗತಿ.

ಸರಕಾರಗಳೇನೋ ಪಟಾಕಿ ದುರಂತ ಸಂಭವಿಸಿದಾಗಲೆಲ್ಲ ಸಾವನ್ನಪ್ಪಿದ­ವರ ಕುಟುಂಬಗಳಿಗೆ ಪರಿಹಾರವನ್ನು ನೀಡಿ, ಘಟನೆ ಸಂಬಂಧ ಉನ್ನತ ಮಟ್ಟದ ತನಿಖೆ ನಡೆಸಿ ತಪ್ಪಿತಸ್ಥರನ್ನು ಕಾನೂನಿನ ಕಟಕಟೆಗೆ ತಂದು ನಿಲ್ಲಿಸು ವುದರೊಂದಿಗೆ ತನ್ನ ಹೊಣೆಗಾರಿಕೆ ಮುಗಿಯಿತು ಎಂದು ಕೈತೊಳೆದು ಕೊಳ್ಳುತ್ತವೆ.

ಪಟಾಕಿ, ಸುಡುಮದ್ದು ತಯಾರಿಕ ಘಟಕಗಳು, ಗೋದಾಮುಗಳ ಸುರಕ್ಷೆ, ಕಾರ್ಮಿಕರ ರಕ್ಷಣೆಯಂಥ ಸೂಕ್ಷ್ಮ ವಿಷಯಗಳಲ್ಲಿ ಕಾನೂನು ನಿಯಮಾವಳಿಗಳಲ್ಲಿ ಎಲ್ಲೂ ರಾಜಿಯಾಗದಂತೆ ಸರಕಾರಗಳು ಕಟ್ಟೆಚ್ಚರ ವಹಿಸಬೇಕು. ಕಾನೂನು, ನಿಯಮಾವಳಿಗಳನ್ನು ಉಲ್ಲಂ ಸಿ ಕಾರ್ಯಾ ಚರಿಸುತ್ತಿರುವ ಪಟಾಕಿ ಘಟಕಗಳು ಅಥವಾ ಗೋದಾಮುಗಳ ಮಾಲಕರು, ನಿರ್ವಾಹಕರ ಮೇಲೆ ಕ್ರಮ ಕೈಗೊಳ್ಳುವುದರ ಜತೆಯಲ್ಲಿ ಕಣ್ಣಿದ್ದೂ ಕುರುಡರಂತೆ ವರ್ತಿಸುವ ಸಂಬಂಧಿತ ಇಲಾಖೆಗಳ ಅಧಿಕಾರಿಗಳ ವಿರುದ್ಧವೂ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು. ಪಟಾಕಿಗಳ ಉತ್ಪಾದನೆ, ದಾಸ್ತಾನು, ಸಾಗಾಟ, ಸಾಗಾಟ ವ್ಯವಸ್ಥೆ… ಹೀಗೆ ಪ್ರತೀ ಹಂತದಲ್ಲಿಯೂ ಸೂಕ್ತ ಮುಂಜಾಗ್ರತ ಮತ್ತು ಸುರಕ್ಷ ನಿಯಮಗಳ ಪಾಲನೆಯನ್ನು ಖಾತರಿಪಡಿಸಿಕೊಳ್ಳುವ ಹೊಣೆಗಾರಿಕೆ ಸರಕಾರದ ಸಂಬಂಧಪಟ್ಟ ಇಲಾಖೆಗಳದ್ದಾಗಿದೆ. ಹೀಗಾದಲ್ಲಿ ಮಾತ್ರವೇ ಇಂಥ ದುರಂತಗಳನ್ನು ತಪ್ಪಿಸಿ ನೂರಾರು ಅಮಾಯಕ ಜೀವಗಳನ್ನು ಉಳಿಸಲು ಸಾಧ್ಯ.

ಟಾಪ್ ನ್ಯೂಸ್

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-s-v

ಜನಪ್ರತಿನಿಧಿಗಳು ಆತ್ಮವಿಮರ್ಶೆ ಮಾಡಿಕೊಳ್ಳಲು ಇದು ಸಕಾಲ

hdd

Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ

ಹೈನುಗಾರರ ಅಳಲಿಗೆ ಸರಕಾರ ತತ್‌ಕ್ಷಣ ಸ್ಪಂದಿಸಲಿ

Karnataka Govt.,: ಹೈನುಗಾರರ ಅಳಲಿಗೆ ಸರಕಾರ ತತ್‌ಕ್ಷಣ ಸ್ಪಂದಿಸಲಿ

ಪಡಿತರ ವ್ಯವಸ್ಥೆ ಸಮರ್ಪಕವಾಗಲಿ

ಪಡಿತರ ವ್ಯವಸ್ಥೆ ಸಮರ್ಪಕವಾಗಲಿ

MONEY (2)

Loan; ಅಡಮಾನ ರಹಿತ ಸಾಲ ಹೆಚ್ಚಳ: ಬ್ಯಾಂಕ್‌ಗಳ ಸ್ಪಂದನೆ ಮುಖ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

3(1

Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ

Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು

Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು

Gurunandan

Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್‌ ಬಾಂಡ್‌’ ಚಿತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.