ವಿಶ್ವಕರ್ಮ ಯೋಜನೆ ಸಮರ್ಪಕ ಅನುಷ್ಠಾನಕ್ಕೆ : ರಾಜ್ಯದ ಮುಖ್ಯ ಕಾರ್ಯದರ್ಶಿಗೆ ಸಂಸದ ಕೋಟ ಪತ್ರ
Team Udayavani, Dec 31, 2024, 11:50 PM IST
ಉಡುಪಿ: ವಿಶ್ವಕರ್ಮ ಯೋಜನೆಯ ಸಮರ್ಪಕ ಅನುಷ್ಠಾನಕ್ಕಾಗಿ ಜಿಲ್ಲಾಧಿಕಾರಿಗಳ ಸಭೆ ಕರೆಯುವಂತೆ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಪತ್ರ ಬರೆದಿದ್ದಾರೆ.
ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ 60 ಸಾವಿರಕ್ಕೂ ಮಿಕ್ಕಿದ ಫಲಾನುಭವಿಗಳು ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸಿದ್ದು, ಇಲಾಖೆಗಳ ಸಂಪರ್ಕದ ಕೊರತೆಯಿಂದ ಯೋಜನೆ ಬಡವರಿಗೆ ತಲುಪಲು ವಿಳಂಬವಾಗುತ್ತಿದೆ.
ಕೌಶಲಾಭಿವೃದ್ಧಿ ಮತ್ತು ಕೈಗಾರಿಕ ಇಲಾಖೆಗಳೊಂದಿಗೆ ರಾಷ್ಟ್ರೀಕೃತ ಬ್ಯಾಂಕ್ಗಳ ಸಹಯೋಗ ದಲ್ಲಿ ಪ್ರಕಟಿತ ಸಾಂಪ್ರದಾಯಿಕ ಕುಲಕಸುಬುದಾರರಿಗೆ ಸಿಗುವ ವಿಶ್ವಕರ್ಮ ಯೋಜನೆಯ ಜಿಲ್ಲಾಅನುಷ್ಠಾನಾಧಿಕಾರಿಯಾಗಿ ಪ್ರತೀ ಜಿಲ್ಲೆಯ ಜಿಲ್ಲಾಧಿಕಾರಿ ಗಳಿರುತ್ತಾರೆ. ಆದರೆ, ಜಿಲ್ಲಾಧಿ ಕಾರಿಗಳು ಮತ್ತು ಇತರ ಇಲಾಖಾಧಿಕಾರಿಗಳ ಸಮನ್ವ ಯದ ಕೊರತೆಯಿಂದ, ಕೇಂದ್ರ ಸರಕಾರದ 13 ಸಾವಿರ ಕೋಟಿ ರೂ. ಭದ್ರತೆ ಹೊಂದಿರುವ ವಿಶ್ವಕರ್ಮ ಯೋಜನೆಯ ಪ್ರಗತಿಯಲ್ಲಿ ಹಿನ್ನಡೆ ಕಾಣುತ್ತಿದೆ.
ಈ ಯೋಜನೆ ಬಡವರ ಕಲ್ಯಾಣ ಯೋಜನೆ ಎಂಬ ಮಾಹಿತಿಯನ್ನು ಪ್ರತೀ ಜಿಲ್ಲಾಧಿಕಾರಿಗಳಿಗೆ ಮಾಹಿತಿ ಒದಗಿಸಿ, ವಿಶ್ವಕರ್ಮ ಯೋಜನೆಯ ಬಗ್ಗೆ ಜಿಲ್ಲೆಯಲ್ಲಿ ಪ್ರತೀ 15 ದಿನಗಳಿಗೊಮ್ಮೆ ಪ್ರಗತಿ ಪರಿಶೀಲನೆ ಮಾಡಲು ಆದೇಶ ನೀಡಬೇಕು, ರಾಜ್ಯದ ಎಲ್ಲ ಜಿಲ್ಲಾಧಿಕಾರಿ ಗಳು ಹಾಗೂ ಸಂಬಂಧಿತ ಅಧಿಕಾರಿಗಳ ಜತೆ ವಿಧಾನಸೌಧದಲ್ಲಿ ಸಭೆ ಕರೆದು ಅಗತ್ಯ ನಿರ್ದೇಶನ ನೀಡಬೇಕೆಂದು ಅವರು ಬರೆದ ಪತ್ರದಲ್ಲಿ ಕೋರಿದ್ದಾ ರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.