ಇತಿಹಾಸದಲ್ಲೇ ಮೊದಲ ಬಾರಿಗೆ ಏರ್ ಇಂಡಿಯಾದಿಂದ ಬರೋಬ್ಬರಿ 500 ವಿಮಾನ ಖರೀದಿ
Team Udayavani, Feb 12, 2023, 7:30 AM IST
ಹೊಸದಿಲ್ಲಿ: ವೈಮಾನಿಕ ಕ್ಷೇತ್ರದ ಇತಿಹಾಸದಲ್ಲೇ ಮೊದಲ ಬಾರಿಗೆ ಬರೋಬ್ಬರಿ 500 ವಿಮಾನಗಳ ಖರೀದಿಗೆ ಏರ್ ಇಂಡಿಯಾ ಮುಂದಾಗಿದೆ ಎಂದು ಮೂಲಗಳು ತಿಳಿಸಿವೆ. ಇತ್ತೀಚಿನ ವರ್ಷಗಳಲ್ಲಿ ವಿಮಾನಯಾನ ಕಂಪೆನಿಯೊಂದರ ಅತೀ ದೊಡ್ಡ ಡೀಲ್ ಇದಾಗಿದೆ.
12,378 ಕೋಟಿ ರೂ.(150 ಬಿಲಿಯನ್ ಡಾಲರ್) ವೆಚ್ಚದಲ್ಲಿ 500 ವಿಮಾನಗಳ ಖರೀದಿಗಾಗಿ ಟಾಟಾ ಸನ್ಸ್ ಮಾಲಕತ್ವದ ಏರ್ ಇಂಡಿಯಾ ಕಂಪೆನಿಯು ವಿಮಾನ ತಯಾರಿಕಾ ಸಂಸ್ಥೆ ಬೋಯಿಂಗ್ ಮತ್ತು ಏರ್ಬಸ್ನೊಂದಿಗೆ ಒಪ್ಪಂದ ಮಾಡಿಕೊಳ್ಳಲು ಸಿದ್ಧತೆ ನಡೆಸಿದೆ ಎನ್ನಲಾಗಿದೆ.
500 ವಿಮಾನಗಳಲ್ಲಿ 430 ನ್ಯಾರೋ ಬಾಡಿ ವಿಮಾನಗಳು, 70 ವೈಡ್ ಬಾಡಿ ವಿಮಾನಗಳು ಸೇರಿವೆ. ಈ ಪೈಕಿ 250 ವಿಮಾನಗಳು ಏರ್ಬಸ್ ಮತ್ತು 250 ಬೋಯಿಂಗ್ ತಯಾರಿಸಿ ಕೊಡಲಿವೆ. ಮುಂದಿನ ಎಂಟು ವರ್ಷಗಳ ಅವಧಿಯಲ್ಲಿ ಏರ್ ಇಂಡಿ ಯಾಕ್ಕೆ ಈ ವಿಮಾನಗಳು ಸಿಗುವ ಸಾಧ್ಯತೆ ಇದೆ. ಕಳೆದ ವರ್ಷ ಏರ್ ಇಂಡಿಯಾ ಖರೀದಿಸಿದ ಟಾಟಾ ಸನ್ಸ್, ಏರ್ಏಶಿಯಾ ಇಂಡಿಯಾ, ವಿಸ್ತಾರ ಏರ್ಲೈನ್ಸ್ ಅನ್ನು ಏರ್ ಇಂಡಿಯಾದೊಂದಿಗೆ ವಿಲೀನಗೊಳಿಸುವ ಪ್ರಕ್ರಿಯೆ ಚಾಲ್ತಿಯಲ್ಲಿದೆ.
ಹಿಂದಿನ ದಾಖಲೆ: 2011ರಲ್ಲಿ ಅಮೆರಿಕನ್ ಏರ್ಲೈನ್ಸ್ 460 ವಿಮಾನಗಳನ್ನು ಖರೀದಿ, 2019ರಲ್ಲಿ ಇಂಡಿಗೋ ಏರ್ಲೈನ್ಸ್ 300 ವಿಮಾನ ಖರೀದಿಗೆ ತೀರ್ಮಾನಿಸಿದ್ದು ಇದುವರೆಗಿನ ದಾಖಲೆಯಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.