Belthangady ಅರಣ್ಯ ಇಲಾಖೆಯ ನರ್ಸರಿಗೆ ಕಾಡಾನೆಗಳ ದಾಳಿ!
3,200ಕ್ಕೂ ಅಧಿಕ ಗಿಡಗಳು ಧ್ವಂಸ
Team Udayavani, Sep 23, 2023, 10:36 PM IST
ಬೆಳ್ತಂಗಡಿ: ಕಾಡಾನೆಗಳ ಹಿಂಡು ಮುಂಡಾಜೆಯ ಕಾಪುವಿನಲ್ಲಿರುವ ಅರಣ್ಯ ಇಲಾಖೆಯ ನರ್ಸರಿಯನ್ನೂ ಬಿಟ್ಟಿಲ್ಲ. ಶುಕ್ರವಾರ ರಾತ್ರಿ ಕಾಡಾನೆಗಳು ನರ್ಸರಿಯ ಗಿಡಗಳಿಗೆ ಅಪಾರ ಪ್ರಮಾಣದ ಹಾನಿ ಉಂಟು ಮಾಡಿವೆ.
ನಾಟಿ ಮಾಡಲೆಂದು ಬೆಳೆಸಲಾಗಿದ್ದ ಹಲಸು, ಬಿದಿರು, ಗಾಳಿ, ಹೆಬ್ಬಲಸು, ಬಲಿಂದ್ರ ಪಾಲೆ ಜಾತಿಯ 3,200ಕ್ಕಿಂತ ಅಧಿಕ ಗಿಡಗಳನ್ನು ತುಳಿದು ಸಂಪೂರ್ಣ ಧ್ವಂಸ ಮಾಡಿವೆ.
ಮರಿ ಸಹಿತ ಎರಡು ಆನೆಗಳು ದಾಳಿ ಇಟ್ಟಿರಬಹುದೆಂದು ಶಂಕಿಸಲಾಗಿದೆ. ಕಳೆದ ಕೆಲವು ದಿನಗಳ ಹಿಂದೆ ಧರ್ಮಸ್ಥಳದ ನೇರ್ತನೆಯಲ್ಲಿ ಕಂಡುಬಂದಿದ್ದ ಕಾಡಾನೆಗಳು ಇಲ್ಲಿಯೂ ದಾಳಿ ನಡೆಸಿರುವ ಸಾಧ್ಯತೆ ಇದೆ.
ಕಳೆದ ವರ್ಷವೂ ಈ ನರ್ಸರಿಗೆ ಕಾಡಾನೆಗಳು ದಾಳಿ ಇಟ್ಟು ಸಾವಿರಾರು ಗಿಡ ಹಾಗೂ ನರ್ಸರಿ ಸೊತ್ತುಗಳಿಗೆ ಹಾನಿ ಮಾಡಿದ್ದವು. ಅರಣ್ಯ ಇಲಾಖೆಯ ಈ ನರ್ಸರಿ ರಾಷ್ಟ್ರೀಯ ಹೆದ್ದಾರಿಯಿಂದ ಕೇವಲ 20 ಮೀ. ಅಂತರದಲ್ಲಿದೆ. ಆನೆಗಳು ಹೆದ್ದಾರಿ ಬದಿ ಸುಳಿದಾಡಿರುವ ಹೆಜ್ಜೆ ಗುರುತು, ಲದ್ದಿ ಹಾಕಿರುವುದು ಕಂಡುಬಂದಿದೆ.
15 ದಿನಗಳಿಂದ ತಾಲೂಕಿನ ಒಂದಲ್ಲ ಒಂದು ಕಡೆ ಕಾಡಾನೆಗಳ ಉಪಟಳ ನಿರಂತರವಾಗಿದೆ. ಸ್ಥಳಕ್ಕೆ ಉಪವಲಯ ಅರಣ್ಯ ಅಧಿಕಾರಿ ಹರಿಪ್ರಸಾದ್, ಸಿಬಂದಿ ಸದಾನಂದ, ಉಮೇಶ್ ನರ್ಸರಿ ವಾಚರ್ ಭೇಟಿ ನೀಡಿ ವಲಯ ಅರಣ್ಯ ಅಧಿಕಾರಿ ಮೋಹನ್ ಕುಮಾರ್‌ಗೆ ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.