ನಾಳೆ ಹುಬ್ಬಳ್ಳಿಯಲ್ಲಿ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಸಭೆ
Team Udayavani, Aug 1, 2022, 6:40 AM IST
ಬೆಂಗಳೂರು: ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಆ. 2ರಂದು ಹುಬ್ಬಳ್ಳಿಗೆ ಆಗಮಿಸಲಿದ್ದು, ಪಕ್ಷದ ರಾಜಕೀಯ ವ್ಯವಹಾರಗಳ ಸಮಿತಿಯ ಸಭೆ ನಡೆಸಲಿದ್ದಾರೆ.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ 75ನೇ ಜನ್ಮದಿನಾಚರಣೆ ಸಿದ್ದರಾಮೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ದಾವಣಗೆರೆಗೆ ಆಗಮಿಸುತ್ತಿರುವ ರಾಹುಲ್ ಗಾಂಧಿ ಆ. 2ರಂದು ದಿಲ್ಲಿಯಿಂದ ಹುಬ್ಬಳ್ಳಿಗೆ ಆಗಮಿಸಿ, ಹುಬ್ಬಳ್ಳಿಯಲ್ಲಿ ರಾಜಕೀಯ ವ್ಯವಹಾರಗಳ ಸಮಿತಿ ಸಭೆ ನಡೆಸುತ್ತಿರುವುದು ಸಾಕಷ್ಟು ಕುತೂಹಲ ಮೂಡಿಸಿದೆ.
ಹಲವು ವಿಷಯ ಚರ್ಚೆ
ಮುಂಬರುವ ಎಂಟು ತಿಂಗಳಲ್ಲಿ ರಾಜ್ಯ ವಿಧಾನಸಭೆಗೆ ಚುನಾವಣೆ ನಡೆಯಲಿದ್ದು, ಈ ಸಂದರ್ಭ ರಾಜ್ಯ ಕಾಂಗ್ರೆಸ್ ನಾಯಕರಲ್ಲಿ ಮುಂದಿನ ಮುಖ್ಯಮಂತ್ರಿ ಯಾರಾಗುತ್ತಾರೆ ಎನ್ನುವ ಬಗ್ಗೆ ಬಹಿರಂಗವಾಗಿಯೇ ಹೇಳಿಕೆಗಳನ್ನು ನೀಡುತ್ತಿರುವುದು. ಕಾಂಗ್ರೆಸ್‌ನಲ್ಲಿ ಸಾಕಷ್ಟು ಗೊಂದಲಕ್ಕೆ ಕಾರಣವಾಗಿದೆ.
ಗೊಂದಲ ನಿವಾರಣೆಗೆ ರಾಹುಲ್ ಗಾಂಧಿ ಮುಂದಾಗಿದ್ದಾರೆ ಎನ್ನಲಾಗಿದ್ದು, ಇದೇ ಕಾರಣಕ್ಕೆ ರಾಜಕೀಯ ವ್ಯವಹಾರಗಳ ಸಮಿತಿಯ ಸಭೆ ಕರೆದಿದ್ದಾರೆಂದು ಕಾಂಗ್ರೆಸ್ ಉನ್ನತ ಮೂಲಗಳು ತಿಳಿಸಿವೆ.
ರಾಜಕೀಯ ವ್ಯವಹಾರಗಳ ಸಮಿತಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಕೆಪಿಸಿಸಿ ಕಾರ್ಯಾಧ್ಯಕ್ಷರು, ರಾಜ್ಯದಿಂದ ನೇಮಕಗೊಂಡಿರುವ ಎಐಸಿಸಿ ಕಾರ್ಯ ದರ್ಶಿಗಳು ಸೇರಿ ಮೂವತ್ತಕ್ಕೂ ಹೆಚ್ಚು ಪ್ರಮುಖ ನಾಯಕರು ಇದ್ದಾರೆ.
ಮಠಗಳ ಭೇಟಿಗೆ ರಾಹುಲ್‌ಗೆ ಬೇಡಿಕೆ
ರಾಹುಲ್ ಗಾಂಧಿ ಎರಡು ದಿನ ರಾಜ್ಯ ಪ್ರವಾಸದಲ್ಲಿದ್ದು, ರಾಜ್ಯದ ಪ್ರಮುಖ ವೀರಶೈವ ಲಿಂಗಾಯತ ಮಠಗಳಿಗೆ ಭೇಟಿ ನೀಡುವಂತೆ ಅವರಿಗೆ ಮನವಿ ಮಾಡಿಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ. ಹುಬ್ಬಳ್ಳಿಗೆ ಆಗಮಿಸಿದ ಸಂದರ್ಭ ಮೂರುಸಾವಿರ ಮಠಕ್ಕೆ ಭೇಟಿ ನೀಡಲು ಮನವಿ ಮಾಡಿಕೊಳ್ಳಲಾಗಿದ್ದು, ರಾಹುಲ್ ಗಾಂಧಿ ಭೇಟಿ ನೀಡುವ ಸಾಧ್ಯತೆ ಇದೆ. ಅನಂತರ ಸಿದ್ದರಾಮೋತ್ಸವ ಕಾರ್ಯಕ್ರಮದ ದಿನ ಚಿತ್ರದುರ್ಗದ ಮುರುಘಾ ಮಠ, ಸಾಣೆಹಳ್ಳಿ ಮಠಗಳಿಗೆ ಭೇಟಿ ನೀಡುವಂತೆ ರಾಜ್ಯ ನಾಯಕರು ಮನವಿ ಮಾಡಿಕೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Guarantee schemes; ಸಿದ್ದರಾಮಯ್ಯ ವಿರುದ್ಧದ ಅರ್ಜಿ: ವಿಚಾರಣೆ ಡಿ. 6ಕ್ಕೆ ಮುಂದೂಡಿಕೆ
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
MUST WATCH
ಹೊಸ ಸೇರ್ಪಡೆ
Chennai: ಲಾಟರಿ ಕಿಂಗ್ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ
Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು
Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್ ಠಾಕ್ರೆ
Congress: ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ
Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್ ಪವಾರ್ ಟೀಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.