ಟಿಕೆಟ್‌ ಕೊಡಿಸದೆ ವಂಚನೆ: ಸಚಿವ ಜೋಶಿ ಸೋದರ, ಸೋದರಿ, ಅಳಿಯನ ವಿರುದ್ಧ ಕೇಸ್‌

ಸದ್ಯ ನಮ್ಮ ಬಳಿ ಹಣ ಇಲ್ಲ. ಕೋರ್ಟ್‌ನಲ್ಲಿ ಕೇಸ್‌ ಹಾಕಿಕೊಳ್ಳಿ...

Team Udayavani, Oct 18, 2024, 5:32 PM IST

ಟಿಕೆಟ್‌ ಕೊಡಿಸದೆ ವಂಚನೆ: ಸಚಿವ ಜೋಶಿ ಸೋದರ, ಸೋದರಿ, ಅಳಿಯನ ವಿರುದ್ಧ ಕೇಸ್‌

■ ಉದಯವಾಣಿ ಸಮಾಚಾರ
ಬೆಂಗಳೂರು: ಲೋಕಸಭಾ ಚುನಾವಣೆಗೆ ಬಿಜೆಪಿ-ಜೆಡಿಎಸ್‌ ಮೈತ್ರಿ ಅಭ್ಯರ್ಥಿಯಾಗಿ ಟಿಕೆಟ್‌ ಕೊಡಿಸುವುದಾಗಿ ನಂಬಿಸಿ ಎರಡು ಕೋಟಿ ರೂ.ಪಡೆದು ವಂಚಿಸಿದ ಆರೋಪದಡಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸಹೋದರ ಮತ್ತು ಸಹೋದರಿ ಸೇರಿ ಮೂವರ ವಿರುದ್ಧ ವಿಜಯಪುರ ಜಿಲ್ಲೆ ನಾಗಠಾಣಾದ ಮಾಜಿ ಶಾಸಕ ದೇವಾನಂದ ಪುಲ್‌ಸಿಂಗ್‌ ಚವ್ಹಾಣ್‌ ಪೊಲೀಸ್‌ ಠಾಣೆ
ಮೆಟ್ಟಿಲೇರಿದ್ದಾರೆ.

ಈ ವಂಚನೆ ಕುರಿತು ದೇವಾನಂದ ಚವ್ಹಾಣ್‌ ಅವರ ಪತ್ನಿ ಸುನೀತಾ ಚವ್ಹಾಣ್‌ ನೀಡಿದ ದೂರಿನ ಮೇರೆಗೆ ಬಸವೇಶ್ವರನಗರ ಠಾಣೆ ಪೊಲೀಸರು, ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸಹೋದರ ಗೋಪಾಲ್‌ ಜೋಶಿ, ಸಹೋದರಿ ವಿಜಯಲಕ್ಷ್ಮೀ ಜೋಶಿ ಹಾಗೂ ಗೋಪಾಲ್‌ ಜೋಶಿ ಪುತ್ರ ಅಜಯ್‌ ಜೋಶಿ ವಿರುದ್ಧ ವಂಚನೆ ಹಾಗೂ ಜಾತಿ ನಿಂದನೆ ಆರೋಪದಡಿ ಎಫ್ಐಆರ್‌ ದಾಖಲಿಸಿದ್ದಾರೆ.

ಪರಿಚಯಸ್ಥರೊಬ್ಬರ ಮೂಲಕ ಗೋಪಾಲ್‌ ಜೋಶಿ ಪರಿಚಯವಾಗಿದ್ದು, ಈ ವೇಳೆ ಲೋಕಸಭಾ ಚುನಾವಣೆಗೆ ಮೈತ್ರಿ ಅಭ್ಯರ್ಥಿಯಾಗಿ ಟಿಕೆಟ್‌ ಕೊಡಿಸುತ್ತೇನೆ. ಐದು ಕೋಟಿ ರೂ. ಕೊಡಬೇಕೆಂದು ಬೇಡಿಕೆ ಇಟ್ಟಿದ್ದರು. ಅದಕ್ಕೆ ನಿರಾಕರಿಸಿದಾಗ 25 ಲಕ್ಷ ರೂ. ಮುಂಗಡ ಕೊಡಿ, ಬಾಕಿ ಹಣಕ್ಕೆ ಚೆಕ್‌ ಕೊಡುವಂತೆ ಹೇಳಿದ್ದರು. ಅದರಂತೆ ಐದು ಕೋಟಿ ರೂ. ಮೊತ್ತದ ಚೆಕ್‌ ಹಾಗೂ 25 ಲಕ್ಷ ರೂ. ಅನ್ನು ಗೋಪಾಲ್‌ ಸೂಚನೆ ಮೇರೆಗೆ ಬಸವೇಶ್ವರ ನಗರದಲ್ಲಿರುವ ಸಹೋದರಿ ವಿಜಯಲಕ್ಷ್ಮೀ ಜೋಶಿಗೆ ನೀಡಲಾಗಿತ್ತು.

ಆದರೆ, ಲೋಕಸಭಾ ಚುನಾವಣೆಯಲ್ಲಿ ಟಿಕೆಟ್‌ ಕೊಡಿಸಿಲ್ಲ. ಅದನ್ನು ಪ್ರಶ್ನಿಸಿದಾಗ ಐದು ಕೋಟಿ ರೂ. ಮೊತ್ತದ ಚೆಕ್‌ ವಾಪಸ್‌ ನೀಡಿದ್ದಾರೆ. ಆದರೆ, 25 ಲಕ್ಷ ರೂ. ಕೊಡಲಿಲ್ಲ. ಅನಂತರ 200 ಕೋಟಿ ರೂ. ಮೌಲ್ಯದ ಪ್ರಾಜೆಕ್ಟ್ ಬಿಲ್‌ ಬಾಕಿ ಇದ್ದು, ಅದು ಬರಬೇಕಿದೆ. ಹೀಗಾಗಿ ಹೆಚ್ಚುವರಿಯಾಗಿ 1.75 ಕೋಟಿ ರೂ. ಕೊಡಿ ಎಂದು ಕೇಳಿದಾಗ, ನಮ್ಮ ಪತಿ ದೇವಾನಂದ್‌, ಸಂಬಂಧಿಕರು
ಹಾಗೂ ಸ್ನೇಹಿತರ ಬಳಿ ಪಡೆದು ಕೊಟ್ಟಿದ್ದಾರೆ. ಈ ವೇಳೆ ಗೋಪಾಲ್‌ ಪುತ್ರ ಅಜಯ್‌, ಈ ಹಣಕ್ಕೆ ನಾನೇ ಶ್ಯೂರಿಟಿ ಎಂದು ಹೇಳಿದ್ದರು. ಆದರೆ, ಇದುವರೆಗೂ ಹಣ ನೀಡಿಲ್ಲ. ಅದನ್ನು ಕೇಳಿದಾಗ ವಿಜಯಲಕ್ಷ್ಮೀ ಅವರು, ಸದ್ಯ ನಮ್ಮ ಬಳಿ ಹಣ ಇಲ್ಲ. ಕೋರ್ಟ್‌ನಲ್ಲಿ ಕೇಸ್‌ ಹಾಕಿಕೊಳ್ಳಿ ಎಂದೆಲ್ಲ ಧಮ್ಕಿ ಹಾಕಿದ್ದಾರೆ.

ಅಲ್ಲದೇ, ನನ್ನನ್ನು ತಮ್ಮ ಮನೆಯಿಂದ ರಸ್ತೆಗೆ ತಳ್ಳಿ ಹಲ್ಲೆ ಮಾಡಿ ಆವಾಚ್ಯವಾಗಿ ಬೈದು ಜಾತಿ ನಿಂದನೆ ಮಾಡಿದ್ದಾರೆ. ನಾನು ಹಾಗೂ ನನ್ನ ಮಗ ಇಬ್ಬರು ಏನಾದರೂ ಸರಿಯೆಂದು ಮನೆಯ ಮುಂಭಾಗ ನಿಂತಿದ್ದೆವು. ಆಗ ಕೆಲ ಗೂಂಡಾಗಳು ಬಂದು ಹೆದರಿಸಿದ್ದಾರೆ ಎಂದು ಸುನೀತಾ ದೂರಿದ್ದಾರೆ.

ಟಾಪ್ ನ್ಯೂಸ್

CM-Panchamsali

Reservation: ಪಂಚಮಸಾಲಿ ಮೀಸಲು ವಿಚಾರ ತಜ್ಞರು, ಸಂಪುಟದಲ್ಲಿ ಚರ್ಚಿಸಿ ಕ್ರಮ: ಸಿಎಂ

K. S. Eshwarappa: ಬ್ರಿಗೇಡ್ ನಿಂದ ಸರ್ಕಾರಗಳನ್ನು ಜಾಗೃತಗೊಳಿಸೋಣ

K. S. Eshwarappa: ಬ್ರಿಗೇಡ್ ನಿಂದ ಸರ್ಕಾರಗಳನ್ನು ಜಾಗೃತಗೊಳಿಸೋಣ

ISREL-3

Israel ಗಾಜಾದಲ್ಲಿ ಕಾರ್ಯಾಚರಣೆ ನಿಲ್ಲಿಸದೆ ಒತ್ತೆಯಾಳುಗಳ ಬಿಡುಗಡೆ ಇಲ್ಲ: ಹಮಾಸ್!

1-a-cm-bai

ED ತನಿಖೆಗೆ ಮುಡಾ ಎಲ್ಲಾ ದಾಖಲೆ ನೀಡಲಿದೆ: ಸಚಿವ ಬೈರತಿ ಸುರೇಶ್ ಹೇಳಿಕೆ

3

La Tomatina: ಏನಿದು ಲಾ ಟೊಮಾಟಿನಾ ಹಬ್ಬ…ಈ ಹಬ್ಬದ ವಿಶೇಷತೆ ಏನು ಗೊತ್ತಾ?

1-dog

Police dog; ರೈತನ ಮನೆಯಿಂದ ಕಳವಾಗಿದ್ದ 1.07 ಕೋಟಿ ರೂ.ಹಣ ಪತ್ತೆಗೆ ನೆರವಾದ ಶ್ವಾನ

Train

Train; ದೀಪಾವಳಿಗೆ ಬೆಂಗಳೂರು- ಕಾರವಾರ ವಿಶೇಷ ರೈಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16-bng

Bengaluru: ರಾಜಧಾನಿಯ ಬೀದಿ ನಾಯಿಗಳಿಗೆ ಅಕ್ಕರೆಯ ತುತ್ತು

15-

Bengaluru: ಎಎಸ್‌ಐ ಶಿವಶಂಕರಾಚಾರಿ ಹೃದಯಾಘಾತದಿಂದ ಸಾವು

14-bng

Namma Metro ಬಗ್ಗೆ ಸಿಎಜಿ ಆಡಿಟ್‌ ನಡೆಸಿ: ಸಂಸದ ತೇಜಸ್ವಿ

13-bng

Bengaluru: ವಿದ್ಯುತ್‌ ಕಂಬಕ್ಕೆ ಬೈಕ್‌ ಡಿಕ್ಕಿ ಹೊಡೆದು ಸಹೋದರರ ಸಾವು

12-bng

Bengaluru: ಜೂಜಾಟದಿಂದ ಮಾಡಿದ್ದ ಭಾರೀ ಸಾಲ ತೀರಿಸಲು ಮನೆ ಕಳ್ಳತನ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Udupi: ವಂಚನೆ ಪ್ರಕರಣ: ಅ.21ಕ್ಕೆ ಜಾಮೀನು ಅರ್ಜಿ ವಿಚಾರಣೆ

Udupi: ವಂಚನೆ ಪ್ರಕರಣ: ಅ.21ಕ್ಕೆ ಜಾಮೀನು ಅರ್ಜಿ ವಿಚಾರಣೆ

CM-Panchamsali

Reservation: ಪಂಚಮಸಾಲಿ ಮೀಸಲು ವಿಚಾರ ತಜ್ಞರು, ಸಂಪುಟದಲ್ಲಿ ಚರ್ಚಿಸಿ ಕ್ರಮ: ಸಿಎಂ

K. S. Eshwarappa: ಬ್ರಿಗೇಡ್ ನಿಂದ ಸರ್ಕಾರಗಳನ್ನು ಜಾಗೃತಗೊಳಿಸೋಣ

K. S. Eshwarappa: ಬ್ರಿಗೇಡ್ ನಿಂದ ಸರ್ಕಾರಗಳನ್ನು ಜಾಗೃತಗೊಳಿಸೋಣ

ISREL-3

Israel ಗಾಜಾದಲ್ಲಿ ಕಾರ್ಯಾಚರಣೆ ನಿಲ್ಲಿಸದೆ ಒತ್ತೆಯಾಳುಗಳ ಬಿಡುಗಡೆ ಇಲ್ಲ: ಹಮಾಸ್!

1-a-cm-bai

ED ತನಿಖೆಗೆ ಮುಡಾ ಎಲ್ಲಾ ದಾಖಲೆ ನೀಡಲಿದೆ: ಸಚಿವ ಬೈರತಿ ಸುರೇಶ್ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.