ದಾಳಿಗೆ ಒಳಗಾದವರಿಗೆ ಕ್ಲಿನ್‌ಚಿಟ್‌ ಭರವಸೆ; ಎಸಿಬಿ ನೆಪದಲ್ಲಿ ಅಧಿಕಾರಿಗಳಿಗೆ ವಂಚನೆ

Team Udayavani, Mar 18, 2022, 9:34 AM IST

a-c-b

ಬೆಂಗಳೂರು: ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ದ ಅಧಿಕಾರಿಗಳಿಂದ ದಾಳಿಗೊಳಗಾಗಿದ್ದ ಬಿಡಿಎ ಅಧಿಕಾರಿಗಳಿಗೆ ಪ್ರಕರಣದಲ್ಲಿ ಆರೋಪ ಮುಕ್ತಗೊಳಿಸುವುದಾಗಿ ನಂಬಿಸಿ 10 ಲಕ್ಷ ರೂ. ವಂಚಿಸಿದ ಮೂವರು ಹೈಗ್ರೌಂಡ್ಸ್‌ ಠಾಣೆ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಬನಶಂಕರಿ ನಿವಾಸಿ ಪ್ರವೀಣ್‌ (27), ನಾಗರ ಭಾವಿ ನಿವಾಸಿ ಚೇತನ್‌(33) ಮತ್ತು ದೊಮ್ಮಲೂರು ನಿವಾಸಿ ಮನೋಜ್‌ ಕುಮಾರ್‌ (46) ಬಂಧಿತರು. ವಿಜಯ್‌ಕುಮಾರ್‌ ಎಂಬಾತ ತಲೆಮರೆಸಿಕೊಂಡಿದ್ದು, ಶೋಧ ಕಾರ್ಯ ಮುಂದುವರಿದಿದೆ ಎಂದು ಪೊಲೀಸರು ಹೇಳಿದರು.

ಆರೋಪಿಗಳ ಪೈಕಿ ಚೇತನ್‌ ಬಿಡಿಎ ಕಚೇರಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಕಂಪ್ಯೂಟರ್‌ ಆಪರೇಟರ್‌ ಆಗಿ ಕೆಲಸ ಮಾಡುತ್ತಿದ್ದಾನೆ. ಇತರೆ ಆರೋಪಿಗಳು ರಿಯಲ್‌ ಎಸ್ಟೇಟ್‌ ವ್ಯವಹಾರ ನಡೆಸುತ್ತಿದ್ದಾರೆ.

ಇತ್ತೀಚೆಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಮೇಲೆ ಎಸಿಬಿ ಅಧಿಕಾರಿಗಳು, ಮಹದೇವಗೌಡ, ಮನೋಜ್‌ಎಂಬುವವರ ಮೇಲೆ ದಾಳಿ ನಡೆಸಿದ್ದರು. ಈ ವಿಚಾರ ತಿಳಿದ ಆರೋಪಿ ಚೇತನ್‌, ತನ್ನ ಸಹಚರರಿಗೆ ತಮ್ಮ ಕಚೇರಿಯ ಅಧಿಕಾರಿಗಳ ಮೊಬೈಲ್‌ ನೀಡಿ, ವಂಚನೆಗೆ ಸಂಚು ರೂಪಿಸಿದ್ದ. ಹೀಗಾಗಿ ಆರೋಪಿಗಳು ಕೆಲ ದಿನಗಳ ಹಿಂದೆ ಮೂವರು ದಾಳಿಗೊಳಗಾದ ಬಿಡಿಎ ಅಧಿಕಾರಿಗಳ ಪೈಕಿ ಅರವಿಂದ್‌ ಅವರನ್ನು ಸಂಪರ್ಕಿಸಿದ್ದು, ಎಸಿಬಿಯಲ್ಲಿ ಹಿರಿಯ ಅಧಿಕಾರಿಗಳ ಪರಿಚಯವಿದ್ದು, ತಮ್ಮ ಮೇಲಿನ ಆರೋಪ ಮುಕ್ತಗೊಳಿಸುತ್ತೇವೆ.

ಅದಕ್ಕಾಗಿ 10 ಲಕ್ಷ ರೂ. ಕೊಡಬೇಕೆಂದು ಬೇಡಿಕೆ ಇಟ್ಟಿದ್ದರು. ಬಳಿಕ ಅರವಿಂದ್‌ ಇತರೆ ಇಬ್ಬರು ಅಧಿಕಾರಿಗಳ ಜತೆ ಚರ್ಚಿಸಿ, ಆರೋಪಿಗಳಿಗೆ ಸದಾಶಿವ ನಗರದ ಹೋಟೆಲ್‌ವೊಂದರಲ್ಲಿ 10 ಲಕ್ಷ ರೂ. ನೀಡಿದ್ದರು. ಕೆಲ ದಿನಗಳ ನಂತರ ಆರೋಪಿಗಳಿಗೆ ಎಸಿಬಿಯಲ್ಲಿ ಯಾವುದೇ ಅಧಿಕಾರಿಗಳು ಪರಿಚಯವಿಲ್ಲ ಎಂಬುದು ಗೊತ್ತಾಗಿದೆ. ಹಣ ವಾಪಸ್‌ಗೆ ಕರೆ ಮಾಡಿದಾಗ, ಬೆದರಿಕೆ ಹಾಕಿದ್ದಾರೆ. ನಂತರ ಫೋನ್‌ ಸ್ವಿಚ್‌x ಆಫ್ ಮಾಡಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಆರೋಪಿಗಳ ವಿರುದ್ಧ ಅರವಿಂದ್‌ ದೂರು ನೀಡಿದ್ದರು. ಮೂವರ ಬಂಧಿಲಾಗಿದೆ. ಮತ್ತೂಬ್ಬನಿಗಾಗಿ ಶೋಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಕೆಐಎಡಿಬಿ ಅಧಿಕಾರಿಗೂ ವಂಚನೆ

ಮತ್ತೂಂದು ಪ್ರಕರಣದಲ್ಲಿ ಎಸಿಬಿ ದಾಳಿಗೊಳಗಾಗಿದ್ದ ಕೆಐಎಡಿಬಿ ಅಧಿಕಾರಿಯೊಬ್ಬರಿಗೆ ಪ್ರಕರಣದಲ್ಲಿ ಆರೋಪ ಮುಕ್ತಗೊಳಿಸುವುದಾಗಿ ನಂಬಿಲಿ ಒಂದೂವರೆ ಲಕ್ಷ ರೂ. ಪಡೆದುಕೊಂಡಿದ್ದ ಆರೋಪಿ ಯನ್ನು ಬಂಧಿಸಲಾಗಿದೆ. ಸ್ಥಳೀಯ ನಿವಾಸಿ ಧರ್ಮೇಂದ್ರ (35) ಬಂಧಿತ. ಇತ್ತೀಚೆಗೆ ಕೆಐಎಡಿಬಿ ಅಧಿಕಾರಿಯೊಬ್ಬರ ಮೇಲೆ ದಾಳಿ ನಡೆಸಲಾಗಿತ್ತು. ಅವರನ್ನು ಸಂಪರ್ಕಿಸಿದ ಧರ್ಮೇಂದ್ರ ಒಂದೂವರೆ ಲಕ್ಷ ರೂ. ನೀಡಿದರೆ ಆರೋಪ ಮುಕ್ತಗೊಳಿಸಲು ಸಹಾಯ ಮಾಡುತ್ತೇನೆ ಎಂದು ಹಣ ಪಡೆದುಕೊಂಡು ವಂಚಿಸಿದ್ದ ಎಂದು ಪೊಲೀಸರು ಹೇಳಿದರು.

ಹಣಕ್ಕೆ ಬೇಡಿಕೆ ಇಟ್ಟರೆ ಮಾಹಿತಿ ನೀಡಿ

ಈ ರೀತಿಯ ವಂಚನೆಗಳ ಬಗ್ಗೆ ಸರ್ಕಾರಿ ಅಧಿಕಾರಿಗಳು ಮತ್ತು ಸಾರ್ವಜನಿಕರು ಎಚ್ಚರಿಕೆ ವಹಿಸಬೇಕು ಎಂದು ಎಸಿಬಿ ಮನವಿ ಮಾಡಿದೆ. ಇತ್ತೀಚೆಗೆ ಎಸಿಬಿ ಹೆಸರಿನಲ್ಲಿ ಕೆಲ ವ್ಯಕ್ತಿಗಳು ಎಸಿಬಿ ದಾಳಿಗೊಳಗಾದ ಅಧಿಕಾರಿಗಳನ್ನು ಸಂಪರ್ಕಿಸಿ, ಪ್ರಕರಣದಲ್ಲಿ ಸಹಾಯ ಮಾಡುವುದಾಗಿ ನಂಬಿಸಿ ವಂಚಿಸುತ್ತಿದ್ದಾರೆ. ಹೀಗಾಗಿ ಸರ್ಕಾರಿ ಅಧಿಕಾರಿಗಳು ಇಂತಹ ವ್ಯಕ್ತಿಗಳ ಬಗ್ಗೆ ಜಾಗೃತರಾಗಿರಬೇಕು. ಯಾರಾದರೂ ಅಪರಿಚಿತ ವ್ಯಕ್ತಿಗಳು ಹಣಕ್ಕೆ ಬೇಡಿಕೆ ಇಟ್ಟರೆ ಕಚೇರಿಗೆ ಮಾಹಿತಿ ನೀಡುವಂತೆ ಎಸಿಬಿ ಅಧಿಕಾರಿಗಳು ಮನವಿ ಮಾಡಿದ್ದಾರೆ. ಕೆಲ ದಿನಗಳ ಹಿಂದೆ ನಿರ್ಮಿತಿ ಕೇಂದ್ರದ ಅಧಿಕಾರಿಯೊಬ್ಬರಿಗೆ ಅಪರಿಚಿತ ವ್ಯಕ್ತಿಯೊಬ್ಬ ಎಸಿಬಿಯಲ್ಲಿ ದೂರು ನೀಡುವುದಾಗಿ ಬ್ಲ್ಯಾಕ್‌ಮೇಲ್‌ ಮಾಡಿದ್ದಾನೆ. ಈ ಸಂಬಂಧ ಹಲಸೂರು ಗೇಟ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಎಸಿಬಿ ತಿಳಿಸಿದೆ

ಟಾಪ್ ನ್ಯೂಸ್

BJP-JDS-congress-Party

By Election: ರಾಜ್ಯದ ಮೂರು ಕ್ಷೇತ್ರಗಳ ಪೈಕಿ ಎನ್‌ಡಿಎಗೆ ಯಾವುದು? ಕಾಂಗ್ರೆಸ್‌ಗೆ ಎಷ್ಟು?

55th IFFI Goa: 55ನೇ ಭಾರತೀಯ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ವಿಧ್ಯುಕ್ತ ಚಾಲನೆ

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

Maharashtra Polls: ಪ್ರಾಣ ಬೆದರಿಕೆ ನಡುವೆ ಮತ ಹಾಕಿ ಫೋಟೋ ತೆಗೆಸಿದ ಸಲ್ಮಾನ್‌!

Aircel-Maxis Case: ಏರ್‌ಸೆಲ್‌-ಮ್ಯಾಕ್ಸಿಸ್‌ ಕೇಸಿನಲ್ಲಿ ಚಿದಂಬರಂ ವಿರುದ್ಧ ವಿಚಾರಣೆ ತಡೆ

Bhagyanagar: ಹೈದರಾಬಾದ್‌ ಅಲ್ಲ, ಭಾಗ್ಯನಗರ: ಆರೆಸ್ಸೆಸ್‌ ಮತ್ತೆ ಹಕ್ಕೊತ್ತಾಯ

Mahayuthi

Exit Poll: ಮಹಾರಾಷ್ಟ್ರ: ಬಿಜೆಪಿ ನೇತೃತ್ವಕ್ಕೆ ಮತ್ತೆ ಅಧಿಕಾರ, ಜಾರ್ಖಂಡ್‌ನಲ್ಲಿ ಪೈಪೋಟಿ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP-JDS-congress-Party

By Election: ರಾಜ್ಯದ ಮೂರು ಕ್ಷೇತ್ರಗಳ ಪೈಕಿ ಎನ್‌ಡಿಎಗೆ ಯಾವುದು? ಕಾಂಗ್ರೆಸ್‌ಗೆ ಎಷ್ಟು?

55th IFFI Goa: 55ನೇ ಭಾರತೀಯ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ವಿಧ್ಯುಕ್ತ ಚಾಲನೆ

55th IFFI Goa: 55ನೇ ಭಾರತೀಯ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ವಿಧ್ಯುಕ್ತ ಚಾಲನೆ

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

Maharashtra Polls: ಪ್ರಾಣ ಬೆದರಿಕೆ ನಡುವೆ ಮತ ಹಾಕಿ ಫೋಟೋ ತೆಗೆಸಿದ ಸಲ್ಮಾನ್‌!

Maharashtra Polls: ಪ್ರಾಣ ಬೆದರಿಕೆ ನಡುವೆ ಮತ ಹಾಕಿ ಫೋಟೋ ತೆಗೆಸಿದ ಸಲ್ಮಾನ್‌!

Aircel-Maxis Case: ಏರ್‌ಸೆಲ್‌-ಮ್ಯಾಕ್ಸಿಸ್‌ ಕೇಸಿನಲ್ಲಿ ಚಿದಂಬರಂ ವಿರುದ್ಧ ವಿಚಾರಣೆ ತಡೆ

Aircel-Maxis Case: ಏರ್‌ಸೆಲ್‌-ಮ್ಯಾಕ್ಸಿಸ್‌ ಕೇಸಿನಲ್ಲಿ ಚಿದಂಬರಂ ವಿರುದ್ಧ ವಿಚಾರಣೆ ತಡೆ

MUST WATCH

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

ಹೊಸ ಸೇರ್ಪಡೆ

BJP-JDS-congress-Party

By Election: ರಾಜ್ಯದ ಮೂರು ಕ್ಷೇತ್ರಗಳ ಪೈಕಿ ಎನ್‌ಡಿಎಗೆ ಯಾವುದು? ಕಾಂಗ್ರೆಸ್‌ಗೆ ಎಷ್ಟು?

55th IFFI Goa: 55ನೇ ಭಾರತೀಯ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ವಿಧ್ಯುಕ್ತ ಚಾಲನೆ

55th IFFI Goa: 55ನೇ ಭಾರತೀಯ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ವಿಧ್ಯುಕ್ತ ಚಾಲನೆ

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

Maharashtra Polls: ಪ್ರಾಣ ಬೆದರಿಕೆ ನಡುವೆ ಮತ ಹಾಕಿ ಫೋಟೋ ತೆಗೆಸಿದ ಸಲ್ಮಾನ್‌!

Maharashtra Polls: ಪ್ರಾಣ ಬೆದರಿಕೆ ನಡುವೆ ಮತ ಹಾಕಿ ಫೋಟೋ ತೆಗೆಸಿದ ಸಲ್ಮಾನ್‌!

Aircel-Maxis Case: ಏರ್‌ಸೆಲ್‌-ಮ್ಯಾಕ್ಸಿಸ್‌ ಕೇಸಿನಲ್ಲಿ ಚಿದಂಬರಂ ವಿರುದ್ಧ ವಿಚಾರಣೆ ತಡೆ

Aircel-Maxis Case: ಏರ್‌ಸೆಲ್‌-ಮ್ಯಾಕ್ಸಿಸ್‌ ಕೇಸಿನಲ್ಲಿ ಚಿದಂಬರಂ ವಿರುದ್ಧ ವಿಚಾರಣೆ ತಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.