ಫ್ರಾನ್ಸ್ : ಸುರಕ್ಷಿತ ಯೋಜನೆಗೆ ಪ್ರಾಶಸ್ತ್ಯ
Team Udayavani, Apr 29, 2020, 4:01 PM IST
ಫ್ರಾನ್ಸ್ : ಫ್ರಾನ್ಸ್ ದೇಶವೂ ಲಾಕ್‌ಡೌನ್ ಅನಂತರದ ಯೋಜನೆಗಳನ್ನು ರೂಪಿಸತೊಡಗಿದೆ. ಈ ಸಂಬಂಧ ಸಂಸತ್ತಿಗೆ ಹೇಳಿಕೆ ನೀಡಿರುವ ಪ್ರಧಾನಿ ಎಡೋರ್ಡ್ ಫಿಲಿಪ್ಪಿ, ಶಾಲೆಗಳು, ರೆಸ್ಟೋರೆಂಟ್‌ಗಳು, ಎಲ್ಲ ಬಗೆಯ ವ್ಯವಹಾರಗಳು, ಗ್ರಂಥಾಲಯಗಳು, ಕಡಲ ತೀರಗಳು-ಎಲ್ಲವನ್ನೂ ಮುಚ್ಚುವ ಸ್ಥಿತಿ ಯುದ್ಧದ ಸಂದರ್ಭದಲ್ಲು ಬಂದಿರಲಿಲ್ಲ. ಈ ಹಿಂದೆ ಸಾಂಕ್ರಾಮಿಕ ರೋಗಗಳು ಬಾಧಿಸಿದಾಗಲೂ ಇಂಥ ಸ್ಥಿತಿ ಒದಗಿರಲಿಲ್ಲ. ಆದ ಕಾರಣ ಇದೊಂದು ವಿಚಿತ್ರ ಸ್ಥಿತಿ ಎಂದು ಹೇಳಿದ್ದಾರೆ.
ವೈರಸ್ ಎದುರು ಸೆಣಸಲು ಲಾಕ್‌ಡೌನ್ ಒಂದು ಅತ್ಯಂತ ಪರಿಣಾಮಕಾರಿ ತಂತ್ರವೆನ್ನುವುದು ನಿಜ. ಆದರೆ ದೇಶ ಇನ್ನಷ್ಟು ದಿನ ಇದೇ ಸ್ಥಿತಿಯಲ್ಲಿ ಮುಂದುವರಿಯಲಾಗದು ಎಂದ ಅವರು, ಸದ್ಯದ ಪರಿಸ್ಥಿತಿಯಲ್ಲಿ ಲಸಿಕೆ ಸಿಗುವುದು ಕಷ್ಟ. ಹಾಗಾಗಿ ವೈರಸ್‌ನೊಂದಿಗೆ ಬದುಕುವುದನ್ನು ಕಲಿಯಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ.
ಇದೇ ಸಂದರ್ಭದಲ್ಲಿ ಲಾಕ್‌ಡೌನ್‌ನಿಂದ ಹೊರ ಬರಲು ಅತ್ಯಂತ ಸುರಕ್ಷಿತ ಯೋಜನೆಯನ್ನು ರೂಪಿಸಲಾಗುತ್ತಿದೆ. ಜನರ ಆರೋಗ್ಯವನ್ನೂ ದೃಷ್ಟಿಯಲ್ಲಿಟ್ಟುಕೊಂಡು ಹಾಗೂ ದೇಶದ ಆರ್ಥಿಕ ಆರೋಗ್ಯವನ್ನೂ ಗಮನದಲ್ಲಿಟ್ಟುಕೊಂಡೇ ಈ ಯೋಜನೆ ಸಿದ್ಧಪಡಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sri Lanka Election Result:ಸಂಸತ್ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
America: ಬೋಯಿಂಗ್ ಸಂಸ್ಥೆಯ 17,000 ಉದ್ಯೋಗಿಗಳು ಶೀಘ್ರವೇ ವಜಾ
MUST WATCH
ಹೊಸ ಸೇರ್ಪಡೆ
Udupi: ಮೀನುಗಾರರಿಗೆ ಎನ್‌ಎಫ್ಡಿಪಿ ಪೋರ್ಟಲ್‌ನಲ್ಲಿ ಶುಲ್ಕರಹಿತ ನೋಂದಣಿ
ಏಕನಿವೇಶನ ನಕ್ಷೆ ಅನುಮೋದನೆ ಅಧಿಕಾರ ಗ್ರಾಮ ಪಂಚಾಯತ್‌ಗೆ ನೀಡಲು ಸಿಎಂಗೆ ಸಂಸದ ಕೋಟ ಪತ್ರ
ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು
Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್. ಅಶೋಕ್
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್‌ಗಳಿಗೆ ನಿರ್ಬಂಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.