Manipal: ಶಿವಮೊಗ್ಗದಿಂದ ಮೊದಲ ಬಾರಿಗೆ ಏರ್ಆ್ಯಂಬುಲೆನ್ಸ್ನಲ್ಲಿ ಮಣಿಪಾಲಕ್ಕೆ
Team Udayavani, Jan 12, 2024, 12:58 AM IST
ಶಿವಮೊಗ್ಗ: ಎದೆನೋವಿನಿಂದ ಬಳಲುತ್ತಿದ್ದ ಶಿವಮೊಗ್ಗದ ಗಾಂಧಿ ಬಜಾರ್ ನಿವಾಸಿಯೊಬ್ಬರನ್ನು ಗುರುವಾರ ಏರ್ ಆ್ಯಂಬುಲೆನ್ಸ್ ಮೂಲಕ ಮಣಿಪಾಲ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಇದೇ ಮೊದಲ ಬಾರಿಗೆ ಶಿವಮೊಗ್ಗ ವಿಮಾನ ನಿಲ್ದಾಣವನ್ನು ಏರ್ ಆ್ಯಂಬುಲೆನ್ಸ್ಗಾಗಿ ಬಳಸಿಕೊಳ್ಳಲಾಗಿದೆ.
ಚೇತನ್ ಎಂಬವರು ಜ.8ರಂದು ನೆಹರು ಕ್ರೀಡಾಂಗಣದಲ್ಲಿ ಜಾಗಿಂಗ್ ವೇಳೆ ಕುಸಿದು ಬಿದ್ದಿದ್ದರು. ತತ್ಕ್ಷಣ ಅವರನ್ನು ಸಮೀಪದ ಮೆಟ್ರೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರಿಗೆ ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದ ಕಾರಣ ಮಣಿಪಾಲದ ಆಸ್ಪತ್ರೆಗೆ ಕರೆದೊಯ್ಯಲಾಯಿತು.
ಇದಕ್ಕಾಗಿ ಚೆನ್ನೈಯಲ್ಲಿರುವ ಏರ್ ಆ್ಯಂಬುಲೆನ್ಸ್ ಅನ್ನು ಸಂಪರ್ಕಿಸಲಾಗಿತ್ತು. ಬುಧವಾರ ಸಂಜೆ ವೇಳೆಗೆ ಏರ್ ಆ್ಯಂಬುಲೆನ್ಸ್ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಆಗಮಿಸಿತ್ತು. ಬೆಳಗ್ಗೆ ವಿಸಿಬಿಲಿಟಿ ಸಮಸ್ಯೆಯಿಂದಾಗಿ ಏರ್ ಆ್ಯಂಬುಲೆನ್ಸ್ ಟೇಕ್ ಆಫ್ ಆಗಲಿಲ್ಲ. ಮಧ್ಯಾಹ್ನ 1.05ಕ್ಕೆ ಶಿವಮೊಗ್ಗ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆಗಿದೆ. ಮಧ್ಯಾಹ್ನ 1.40ಕ್ಕೆ ಮಂಗಳೂರು ವಿಮಾನ ನಿಲ್ದಾಣ ತಲುಪಿದೆ. ಅಲ್ಲಿಂದ ವಿಶೇಷ ಆ್ಯಂಬುಲೆನ್ಸ್ ಮೂಲಕ ಮಣಿಪಾಲದ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.