ಸಹಕಾರ ಕ್ಷೇತ್ರಕ್ಕೆ ಕೇಂದ್ರದ ಪೂರ್ಣ ಸಹಕಾರ!
ಸಹಕಾರಿ ಸಂಘಗಳನ್ನು ಉತ್ತೇಜಿಸಲು ಹಲವು ಕ್ರಮಗಳ ಘೋಷಣೆ
Team Udayavani, Feb 2, 2023, 6:40 AM IST
ಕೇಂದ್ರ ಸರ್ಕಾರ ಸಹಕಾರಿ ಸಂಸ್ಥೆಗಳ ಮೇಲೆ ಹೆಚ್ಚಿನ ನಿಗಾವಹಿಸಿದೆ. ಇತ್ತೀಚೆಗೆ ಸಹಕಾರಿ ಸಂಸ್ಥೆಗಳಲ್ಲಿ ಭ್ರಷ್ಟಾಚಾರದ ಪ್ರಕರಣಗಳು ಆಗಾಗ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಅದನ್ನು ನಿಯಂತ್ರಣಕ್ಕೆ ತರುವ ಉದ್ದೇಶವನ್ನೂ ಹೊಂದಿದೆ. ಮಾತ್ರವಲ್ಲ ಆಕರ್ಷಕ ತೆರಿಗೆಗಳನ್ನು ಘೋಷಿಸುವ ಮೂಲಕ ಸಹಕಾರ ವಲಯವನ್ನು ಉತ್ತೇಜಿಸುವ ಗುರಿಯನ್ನೂ ಹೊಂದಿದೆ.
ಬುಧವಾರ ನಿರ್ಮಲಾ ಸೀತಾರಾಮನ್ ಮಾಡಿದ ಬಜೆಟ್ ಭಾಷಣದಲ್ಲಿ ಸಹಕಾರ ಕ್ಷೇತ್ರಕ್ಕೆ ಹಲವು ಸಹಕಾರಗಳನ್ನು ಪ್ರಕಟಿಸಿದ್ದಾರೆ.
ಮುಂದಿನ ವರ್ಷ ಮಾರ್ಚ್ 31ರವರೆಗೆ ಉತ್ಪಾದನಾ ಚಟುವಟಿಕೆ ಆರಂಭಿಸುವ ಹೊಸ ಸಹಕಾರಿ ಸಂಸ್ಥೆಗಳಿಗೆ ಕಡಿಮೆ ತೆರಿಗೆಯಿರುತ್ತದೆ. ಅಂದರೆ ಶೇ.15 ತೆರಿಗೆ ಹಾಕಲಾಗುತ್ತದೆ. ಪ್ರಸ್ತುತ ಈ ಸೌಲಭ್ಯವನ್ನು ಹೊಸ ಉತ್ಪಾದನಾ ಕಂಪನಿಗಳಿಗೆ ಮಾತ್ರ ನೀಡಲಾಗಿತ್ತು.
2016-17ರ ವಿತ್ತೀಯವರ್ಷಕ್ಕೂ ಹಿಂದಿನ ಅವಧಿಗೆ ಸೇರಿದಂತೆ ಕಬ್ಬು ಬೆಳೆಗಾರರಿಗೆ ಹಣ ಪಾವತಿ ಮಾಡಿದರೆ, ಅದನ್ನು ವೆಚ್ಚದ ಲೆಕ್ಕಕ್ಕೆ ಸೇರಿಸಿಕೊಳ್ಳಲು ಸಕ್ಕರೆ ಸಹಕಾರಿ ಸಂಘಗಳಿಗೆ ಅವಕಾಶ ನೀಡುವ ಉದ್ದೇಶವಿದೆ. ಇದರಿಂದ ಈ ವಲಯಕ್ಕೆ 10,000 ಕೋಟಿ ರೂ.ಗಳಷ್ಟು ಉಳಿತಾಯವಾಗಬಹುದು ಎನ್ನುವುದು ನಿರ್ಮಲಾ ಅಭಿಮತ.
ಪ್ರಾಥಮಿಕ ಕೃಷಿ ಸಹಕಾರಿ ಸಂಘಗಳಲ್ಲಿ (ಪ್ಯಾಕ್ಸ್), ಪ್ರಾಥಮಿಕ ಕೃಷಿ ಸಹಕಾರ ಸಂಘಗಳು-ಗ್ರಾಮೀಣಾಭಿವೃದ್ಧಿ ಬ್ಯಾಂಕ್‌ಗಳಲ್ಲಿ (ಪಿಸಿಎಆರ್‌ಡಿಬಿಎಸ್), 2 ಲಕ್ಷ ರೂ.ವರೆಗೆ ನಗದನ್ನು ಠೇವಣಿಯಾಗಿ ಪಾವತಿಸುವ, ಅಷ್ಟೇ ಮೊತ್ತದ ಸಾಲವನ್ನು ನಗದಿನ ರೂಪದಲ್ಲಿ ಪಡೆಯುವ ಅವಕಾಶ ನೀಡಲಾಗುತ್ತದೆ.
ಹಾಗೆಯೇ ಟಿಡಿಎಸ್ ಪಾವತಿಸಿ 3 ಕೋಟಿ ರೂ.ವರೆಗೆ ನಗದನ್ನು ಪಡೆದುಕೊಳ್ಳಲು ಸಹಕಾರಿ ಸಂಘಗಳಿಗೆ ಅವಕಾಶ ನೀಡಲಾಗಿದೆ.
ಸಹಕಾರಿ ಸಂಸ್ಥೆಗಳ ಪಕ್ಕಾ ಮಾಹಿತಿಗೆ ಕ್ರಮ
ರಾಷ್ಟ್ರೀಯ ಸಹಕಾರಿ ಸಂಸ್ಥೆಗಳ ಪಕ್ಕಾ ಮಾಹಿತಿಯನ್ನು ಸಿದ್ಧಪಡಿಸಲು ಕೇಂದ್ರ ತೀರ್ಮಾನಿಸಿದೆ. ಎಲ್ಲೆಲ್ಲಿ ಎಷ್ಟು ಸಂಸ್ಥೆಗಳಿವೆ ಎಂದು ಲೆಕ್ಕವಿಡುವುದು ಇಲ್ಲಿನ ಉದ್ದೇಶ. ಸದ್ಯದ ಮಾಹಿತಿ ಪ್ರಕಾರ ದೇಶದಲ್ಲಿ 8.6 ಲಕ್ಷ ಸಹಕಾರಿ ಸಂಸ್ಥೆಗಳಿವೆ. ಈ ಪೈಕಿ ಮೂಲಭೂತ ಕೃಷಿ ಸಂಸ್ಥೆಗಳು 63,000.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.