G-20: ಭಾರತದಲ್ಲಿ ಜಾಗತಿಕ AI ಶೃಂಗ- ವರ್ಚುವಲ್ ಸಭೆಯಲ್ಲಿ ಪ್ರಧಾನಿ ಮೋದಿ ಘೋಷಣೆ
Team Udayavani, Nov 22, 2023, 11:57 PM IST
ಹೊಸದಿಲ್ಲಿ: ಬುಧವಾರ ವರ್ಚುವಲ್ ಮೂಲಕ ಜಿ20 ನಾಯಕರ ಸಭೆ ನಡೆಯಿತು. ಇದರಲ್ಲಿ ಭಾಗವಹಿಸಿದ್ದ ಪ್ರಧಾನಿ ನರೇಂದ್ರ ಮೋದಿ, ಜಾಗತಿಕ ದಕ್ಷಿಣ ದೇಶಗಳಲ್ಲಿ ಡಿಜಿಟಲ್ ಮೂಲಭೂತ ಸೌಕರ್ಯ ರೂಪಿಸಲು, ಒಂದು ಸಾಮಾಜಿಕ ಪರಿಣಾಮ ನಿಧಿಯನ್ನು ಸ್ಥಾಪಿಸಲು ಶಿಫಾರಸು ಮಾಡಿದರು. ಅಷ್ಟು ಮಾತ್ರವಲ್ಲ ಇದರ ಸಾಕಾರಕ್ಕೆ ಭಾರತ 25 ಮಿಲಿಯನ್ ಡಾಲರ್ ಹಣವನ್ನು ಪ್ರಾಥಮಿಕ ನಿಧಿಯಾಗಿ ನೀಡಲಿದೆ ಎಂದಿದ್ದಾರೆ. ಇದೇ ವೇಳೆ ಅವರು ಕೃತಕ ಬುದ್ಧಿಮತ್ತೆಯ ಅಪಾಯಗಳ ಬಗ್ಗೆಯೂ ಗಮನ ಸೆಳೆದಿದ್ದಾರೆ.
ಜಾಗತಿಕ ದಕ್ಷಿಣ ದೇಶಗಳಲ್ಲಿ ಡಿಜಿಟಲ್ ಮೂಲಸೌಕರ್ಯ ನಿರ್ಮಾಣಕ್ಕಾಗಿ, ನಾನು ಸಾಮಾಜಿಕ ಪರಿಣಾಮ ನಿಧಿ ಸ್ಥಾಪಿಸಬೇಕೆಂದು ಬಯಸುತ್ತೇನೆ. ಭಾರತದ ಪರವಾಗಿ ಪ್ರಾಥಮಿಕ ನಿಧಿಯಾಗಿ 25 ಮಿಲಿಯನ್ ಡಾಲರ್ ನೀಡಲಾಗುತ್ತದೆ. ನೀವೆಲ್ಲರೂ ಇದರಲ್ಲಿ ಪಾಲ್ಗೊಳ್ಳುತ್ತೀರೆಂಬ ಭರವಸೆಯಿದೆ ಎಂದು ಮೋದಿ ಹೇಳಿದ್ದಾರೆ. ಕೃತಕ ಬುದ್ಧಿಮತ್ತೆಯ ಅಪಾಯದ ಬಗ್ಗೆ ಮಾತನಾಡಿದ ಅವರು, ಕೃತಕ ಬುದ್ಧಿಮತ್ತೆಯನ್ನು ಋಣಾತ್ಮಕವಾಗಿ ಬಳಸಿಕೊಳ್ಳುತ್ತಿರುವ ಬಗ್ಗೆ ಇಡೀ ಜಗತ್ತಿನಲ್ಲಿ ಆತಂಕ ಶುರುವಾಗಿದೆ.
ಜಾಗತಿಕವಾಗಿ ಎಐಗಾಗಿ ನಿಯಮಾವಳಿ ರೂಪಿಸಬೇಕೆಂದು ಭಾರತ ಸ್ಪಷ್ಟವಾಗಿ ಹೇಳುತ್ತದೆ. ಡೀಪ್ಫೇಕ್ನ ಗಂಭೀರತೆಯನ್ನು ಅರ್ಥ ಮಾಡಿಕೊಳ್ಳುವುದು ಅಗತ್ಯವಾಗಿದೆ. ಇದು ಸಮಾಜಕ್ಕೆ, ವ್ಯಕ್ತಿಗಳಿಗೆ ಎಷ್ಟು ಅಪಾಯಕಾರಿ ಎಂದು ಅರಿಯಬೇಕಿದೆ. ಇದೇ ಹಿನ್ನೆಲೆಯಲ್ಲಿ ಜಾಗತಿಕ ಕೃತಕ ಬುದ್ಧಿಮತ್ತೆ (ಎಐ) ಶೃಂಗ ಮುಂದಿನ ತಿಂಗಳು ಭಾರತದಲ್ಲಿ ನಡೆಯಲಿದೆ. ಇದಕ್ಕೆ ನೀವೆಲ್ಲ ಸಹಕರಿಸುತ್ತೀರೆಂಬ ಭರವಸೆಯಿದೆ ಎಂದು ಮೋದಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.