ಒಣ ಬೇಸಾಯ ಪದ್ದತಿಯಲ್ಲಿ ರೈತರ ಜೀವನ ಮಟ್ಟ ಸುಧಾರಿಸುತ್ತದೆ : ಡಾ.ಜಿ.ಪರಮೇಶ್ವರ್

Team Udayavani, Jan 12, 2022, 7:10 PM IST

ಒಣ ಬೇಸಾಯ ಪದ್ದತಿಯಲ್ಲಿ ರೈತರ ಜೀವನ ಮಟ್ಟ ಸುಧಾರಿಸುತ್ತದೆ : ಡಾ.ಜಿ.ಪರಮೇಶ್ವರ್

ಕೊರಟಗೆರೆ: ತಾಲ್ಲೂಕಿನ ಡಿ.ನಾಗೇನಹಳ್ಳಿ ಗ್ರಾಮದಲ್ಲಿ ಕೇಂದ್ರ ಕೃಷಿ ವಿಜ್ಞಾನ ಕೇಂದ್ರದ ನಿಕ್ರಾ ಯೋಜನೆಯನ್ನು ಹೀರೆಹಳ್ಳಿಯ ಕೆವಿಕೆ ವಿಜ್ಞಾನಿಗಳು ಮತ್ತು ನಮ್ಮ ರೈತರು ಶ್ರಮವಹಿಸಿ ಯಶಸ್ವಿಗೊಳಿಸಿರುವುದು, ಒಣ ಬೇಸಾಯ ಪದ್ದತಿಯಲ್ಲಿ ರೈತರ ಜೀವನ ಮಟ್ಟ ಸುಧಾರಿಸುತ್ತದೆ ಎಂದು ಮಾಜಿ. ಉಪ ಮುಖ್ಯಮಂತ್ರಿ ಹಾಗೂ ಡಾ.ಜಿ.ಪರಮೇಶ್ವರ ತಿಳಿಸಿದರು.

ಅವರು ತಾಲ್ಲೂಕಿನ ಕೋಳಾಲ ಹೋಬಳಿಯ ಡಿ.ನಾಗೇನಹಳ್ಳಿ ಗ್ರಾಮದಲ್ಲಿ ಭಾರತೀಯ ಕೃಷಿ ವಿಜ್ಞಾನ ಕೇಂದ್ರದ ನಿಕ್ರಾ ಯೋಜನೆಗೆ ಎಲೆರಾಂಪುರ ಗ್ರಾಮ ಪಂಚಾಯತಿಗೆ ಕೇಂದ್ರ ಸರ್ಕಾರದ ಉತ್ತಮ ಪಂಚಾಯತಿ ಪ್ರಶಸ್ತಿ ದೊರೆತ ಹಿನ್ನಲೆಯಲ್ಲಿ ಡಿ.ನಾಗೇನಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಯೋಜನೆಯ ಸಮಗ್ರ ಅಭಿವೃದ್ಧಿಯನ್ನು ಪರಿಶೀಲಿಸಿ ಮಾತನಾಡಿ 2010ರಲ್ಲಿ ಪ್ರಾರಂಭವಾದ ಈ ಯೋಜನೆ ಇಲ್ಲಿಯವರೆಗೂ ಬಹಳ ವ್ಯವಸ್ಥಿತವಾಗಿ ನಡೆದಿದೆ. ಹೀರೆಹಳ್ಳಿಯ ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿಗಳು ಈ ಯೋಜನೆಯನ್ನು ಉತ್ತಮವಾಗಿ ಸಾಕಾರ ಮಾಡಿದ್ದಾರೆ. ನಮ್ಮ ರೈತರು ಇದನ್ನು ಒಪ್ಪಿಕೊಂಡು ಯಶಸ್ವಿಗೊಳಿಸಿದ್ದಾರೆ. ಈ ಯೋಜನೆ ಮಳೆಯಾಧಾರಿತ ಖುಷ್ಕಿ ಬೇಸಾಯದ ರೈತರಿಗೆ ಅತ್ಯುತ್ತಮವಾಗಿ ಉಪಯುಕ್ತವಾಗಿದೆ. ಒಣ ಪ್ರದೇಶದಲ್ಲಿ ಲಾಭದಾಯಕ ಬೆಳೆ ಗೋಡಂಬಿ, ಬೆಟ್ಟದ ನೆಲ್ಲಿ, ಹುಣಸೆ ಸೇರಿದಂತೆ ಇತರೆ ವಾಣಿಜ್ಯ ಬೆಳೆಗಳನ್ನು ಸಹ ಇಳಿಜಾರಿನ ಮಳೆನೀರನ್ನು ಉಪಯೋಗಿಸಿಕೊಂಡು ಬೆಳೆದಿರುವುದು.

ರೈತನ ಜೀವನ ಮಟ್ಟವನ್ನು ಸುಧಾರಿಸುತ್ತದೆ. ವ್ಯರ್ಥವಾಗಿ ಹರಿದು ಹೋಗುವ ನೀರನ್ನು ತಡೆದು ನಿಲ್ಲಿಸಿ ಉಪಯೋಗ ಮಾಡಿ ಕೊಂಡಿದ್ದು, ಕಡಿಮೆ ಮಳೆಯಲ್ಲಿಯೇ ಸಹ ನೀರನ್ನು ಸಂರಕ್ಷಣೆ ಮಾಡಿ ಬೇಸಾಯ ಮಾಡಿದ್ದು ಸುಮಾರು 85 ಕೃಷಿ ಹೊಂಡಗಳನ್ನು, 15 ಚೆಕ್ ಡ್ಯಾಂ, ನಾಲಾ ಬದು, ಹೂಳೆತ್ತುವಿಕೆ, ಕೊಳವೆ ಬಾವಿ ಅಭಿವೃದ್ಧಿ ಸೇರಿದಂತೆ ಮಾಡಿರುವ, ಈ ಕೆಲಸಗಳು ನಿಜಕ್ಕೂ ಅಕಾಲಿಕ ಮಳೆಯನ್ನು ಕಡಿಮೆ ನೀರಿನ ಪ್ರಮಾಣವನ್ನು ತಡೆದುಕೊಳ್ಳುವ ಕೃಷಿ ಪದ್ದತಿಯಾಗಿದ್ದು, ಕೊರಟಗೆರೆ ವಿಧಾನಸಭಾ ಕ್ಷೇತ್ರ ಸೇರಿದಂತೆ ಬಯಲು ಸೀಮೆಯ ಮಳೆಯಾದಾರಿತ ಪ್ರದೇಶಗಳ ಒಣ ಬೇಸಾಯಕ್ಕೆ, ಈ ಯೋಜನೆ ವಿಸ್ತಾರವಾಗಬೇಕಿದ್ದು, ರಾಜ್ಯ ಸರ್ಕಾರವು ಇದಕ್ಕೆ ಕೈ ಜೋಡಿಸಬೇಕಾಗಿದೆ. ಯೋಜನೆ ಯಶಸ್ವಿಗೆ ಕೃಷಿ ವಿಜ್ಞಾನಿಗಳು ರೈತರು ಗ್ರಾಮ ಪಂಚಾಯತಿಯವರಿಗೆ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದರು.

ಇದನ್ನೂ ಓದಿ : ಬೆಲೆ ಕುಸಿತ ; ಸಂಕಷ್ಟದಲ್ಲಿ ಬಾಳೆ ಬೆಳೆದ ರೈತ  ; ಒಂದು ಕೆ.ಜಿ. ಬಾಳೆ ಹಣ್ಣಿಗೆ ಕೇವಲ ರೂ. 2

ಹೀರೆಹಳ್ಳಿಯ ಕೆವಿಕೆ ವಿಜ್ಞಾನಿ ಹಾಗೂ ಆಡಳಿತಾಧಿಕಾರಿ ಲೋಗಾನಂದನ್ ಮಾತನಾಡಿ, ಈ ಯೋಜನೆ ಜಲಾನಯನ ಅಭಿವೃದ್ಧಿಗೆ ಪ್ರಾಮುಖ್ಯತೆ ನೀಡಿದ್ದು 2010 ರಲ್ಲಿ ನಮ್ಮ ಇಲಾಖೆಯಡಿ ಉದ್ಘಾಟನೆ ಮಾಡಿದ್ದು ಯಶಸ್ವಿಗೆ ಎಲ್ಲರೂ ಕಾರಣರಾಗಿದ್ದಾರೆ. ಈ ಯೋಜನೆಯಲ್ಲಿ200 ಲಕ್ಷ ಕ್ಯೂಬಿಕ್ ಲೀಟರ್ ನೀರನ್ನು ಸಂರಕ್ಷಿಸಲಾಗಿದೆ. ಯೋಜನೆಯಲ್ಲಿ ಕಡಿಮೆ ನೀರಿನ ವಾಣಿಜ್ಯ ಬೆಳೆಗಳ ಕೃಷಿಯೊಂದಿಗೆ ನೂತನ ಸಂಶೋಧನೆಯ ಭತ್ತ, ರಾಗಿ, ತೊಗರಿ, ಬೆಳೆಗಳನ್ನು ಬೆಳೆಯಲಾಗಿದೆ. ಕಷ್ಟಕರ ವಾತಾವರಣದಲ್ಲಿಯು ಸಹ ಕೃಷಿ ಮಾಡುವ ಸಂಶೋಧನೆಯ ಬೆಳೆಗಳನ್ನು ಬೆಳೆಯಲು ಆದ್ಯತೆ ನೀಡಲಾಗಿದೆ ಎಂದರು.

ಈ ಸಂದರ್ಭದಲ್ಲಿ ಡಿ.ನಾಗೇನಹಳ್ಳಿಯ ರೈತರ ಗ್ರಾಮ ವಿಕಾಸ ಚೇತನಕ್ಕೆ ಅರ್ಧ ಎಕರೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ 1 ಎಕರೆ ಹಾಗೂ ಸ್ರೀ ಶಕ್ತಿ ಕೇಂದ್ರಕ್ಕೆ ಅರ್ಧ ಎಕರೆ ಜಮೀನನ್ನು ಮಂಜೂರು ಮಾಡಿಸಿ ಕೊಡುವುದಾಗಿ ಶಾಸಕರು ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ಕೆವಿಕೆಯ ಮಣ್ಣು ತಜ್ಞ ವಿಜ್ಞಾನಿ ರಮೇಶ್, ತೋಟಗಾರಿಕಾ ವಿಜ್ಞಾನಿ, ಪ್ರಶಾಂತ್, ತಾಪಂ ಇಒ ದೊಡ್ಡಸಿದ್ದಯ್ಯ,ಸಹಾಯಕ ಕೃಷಿ ನಿರ್ದೇಶಕ ನಾಗರಾಜ.ಹೆಚ್, ಅರಣ್ಯಾಧಿಕಾರಿ ಸುರೇಶ್, ತೋಟಗಾರಿಕೆ ಸಹಾಯಕ ನಿರ್ದೇಶಕಿ ಪುಷ್ಪಲತಾ, ಕೆಪಿಸಿಸಿ ಕಾರ್ಯದರ್ಶಿ ದಿನೇಶ್ .ಬಿ.ಎಸ್, ಬ್ಲಾಕ್ ಕಾಂಗ್ರೆಸ್ ಅದ್ಯಕ್ಷರುಗಳಾದ ಅರಕೆರೆ ಶಂಕರ್, ಕೋಡ್ಲಹಳ್ಳಿ ಅಶ್ವಥ್ ನಾರಾಯಣ್, ಯುವ ಕಾಂಗ್ರೆಸ್ ಅದ್ಯಕ್ಷ ವಿನಯ್ ಕುಮಾರ್, ಮಹಿಳಾ ಕಾಂಗ್ರೆಸ್ ಅದ್ಯಕ್ಷೆ ಜಯಮ್ಮ ಗ್ರಾಪಂ ಅದ್ಯಕ್ಷೆ ಗಂಗಾದೇವಿ, ಉಪಾಧ್ಯಕ್ಷ ಉಮೇಶ್ ಚಂದ್ರ, ಸದಸ್ಯರುಗಳಾದ ಸರ್ವೇಶ್, ಚಂದ್ರಯ್ಯ, ರಂಗಶ್ಯಾಮಯ್ಯ, ಕೆ.ಎಲ್ ಮಂಜುನಾಥ್, ರೈತ ಮುಖಂಡರುಗಳಾದ ಮಹೇಶ್, ಯೋಗೇಶ್ ಲೋಕೇಶ್, ರಾಕೇಶ್ ಅರವಿಂದ್, ಸೇರಿದಂತೆ ಇತರರು ಹಾಜರಿದ್ದರು.

ಟಾಪ್ ನ್ಯೂಸ್

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

“ರವಿ ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

“CT Ravi ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

“ರವಿ ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

“CT Ravi ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.