ಗದಗ: ತುಂಗಭದ್ರಾ ನದಿಗೆ ಬಿದ್ದು ನಾಪತ್ತೆಯಾಗಿದ್ದ ಯುವಕನ ಶವ ಪತ್ತೆ
Team Udayavani, Oct 22, 2024, 11:06 AM IST
ಗದಗ: ವಿಜಯನಗರ ಜಿಲ್ಲೆ ಹೂವಿನ ಹಡಗಲಿ ವ್ಯಾಪ್ತಿಯ ತುಂಗಭದ್ರಾ ನದಿಗೆ ಬಿದ್ದು ನಾಪತ್ತೆಯಾಗಿದ್ದ ಯುವಕ ದಿನೇಶ್ ಮೃತದೇಹ ಮಂಗಳವಾರ(ಅ.22) ತೀರದಲ್ಲಿ ಪತ್ತೆಯಾಗಿದೆ.
ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಹಮ್ಮಿಗಿ ಬ್ಯಾರೇಜ್ ಮೇಲಿಂದ ತುಂಗಭದ್ರಾ ನದಿಗೆ ಹಾರಿ ದಿನೇಶ್ ಆತ್ಮಹತ್ಯೆಗೆ ಯತ್ನಿಸಿದ್ದ ಎಂದು ವರದಿ ತಿಳಿಸಿದೆ.
ಮುಂಡರಗಿ ತಾಲೂಕು ಮುರಡಿ ತಾಂಡಾದ ಯುವಕ ದಿನೇಶ ಸಾಲದ ಸುಳಿಗೆ ಸಿಲುಕಿದ್ದು, ಇದರಿಂದಾಗಿ ಅಕ್ಟೋಬರ್ 20 (ಭಾನುವಾರ)ದಂದು ನದಿಗೆ ಹಾರಿದ್ದ.
ನೀರಿನ ಸೆಳೆತ ಹೆಚ್ಚಾಗಿದ್ದರಿಂದ ದಿನೇಶ್ ಕೊಚ್ಚಿಕೊಂಡು ಹೋಗಿದ್ದ. ಎರಡು ದಿನಗಳಿಂದ ಆತನ ಶವಕ್ಕಾಗಿ ಶೋಧ ನಡೆಸಲಾಗುತ್ತಿತ್ತು. ಇಂದು ಬೆಳಗ್ಗೆ ಮೃತದೇಹ ಪತ್ತೆಯಾಗಿದೆ.
ಸ್ಥಳಕ್ಕೆ ಮುಂಡರಗಿ ತಹಶಿಲ್ದಾರ ಯರಿಸ್ವಾಮಿ ಭೇಟಿ ನೀಡಿದ್ದು, ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸುವುದಾಗಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gajendragad: ಮನೆಯಲ್ಲೇ ಮುಖ್ಯ ಶಿಕ್ಷಕಿಯ ಹ*ತ್ಯೆ
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Gadag: ಬಡವರಿಗೆ ಶಕ್ತಿ ತುಂಬುವ ಗ್ಯಾರಂಟಿ ಯೋಜನೆಗಳಿಗೆ ವಿಪಕ್ಷಗಳಿಂದ ವಿರೋಧ: ಸಿದ್ದರಾಮಯ್ಯ
CM Siddaramaiah: ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಿ ನುಡಿದಂತೆ ನಡೆದ ಸರ್ಕಾರ ನಮ್ಮದು
Gadag: ಬಿಂಕದಕಟ್ಟಿ ಮೃಗಾಲಯದಲ್ಲಿ 16 ವರ್ಷದ ಹೆಣ್ಣು ಹುಲಿ ಅನುಸೂಯ ನಿಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.