ಗೂಳೂರು ಗಣಪನ ಅದ್ಧೂರಿ ವಿಸರ್ಜನೋತ್ಸವ : ಸಹಸ್ರಾರು ಭಕ್ತರ ನಡುವೆ ಅದ್ಧೂರಿ ಮೆರವಣಿಗೆ
Team Udayavani, Jan 25, 2021, 7:07 PM IST
ತುಮಕೂರು: ನಾಡಿನ ಐತಿಹಾಸಿಕ ಗೂಳೂರು ಮಹಾಗಣಪತಿಯ ವಿಸರ್ಜನಾ ಮಹೋತ್ಸವ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ವೈಭವಯುತವಾಗಿ ನಡೆದ ನಂತರ ಭಾನುವಾರ ಸಂಜೆ ಅಪಾರ ಭಕ್ತರ ಸಮ್ಮುಖದಲ್ಲಿ ಗೂಳೂರು ಕೆರೆಯಲ್ಲಿ ವಿಸರ್ಜಿಸಲಾಯಿತು.
ಅನಾದಿ ಕಾಲದಿಂದಲೂ ವಿಶೇಷ ರೀತಿಯಲ್ಲಿಯೇ ಮಹಾಗಣಪತಿ ವಿಸರ್ಜನಾ ಮಹೋತ್ಸವ ನಡೆದುಕೊಂಡು ಬಂದಿದ್ದು ದೀಪಾವಳಿ ಹಬ್ಬದಂದು 18 ಕೋಮಿನ ಸಮ್ಮುಖದಲ್ಲಿ ಪ್ರತಿಷ್ಠಾಪನೆಗೊಂಡು ಒಂದು ತಿಂಗಳ ಕಾಲ ಪೂಜಿಸಿ ಆರಾಧಿಸಿ ನಂತರ
ವಿಸರ್ಜನೆ ಮಾಡುವುದು ಮೊದಲಿನಿಂದಲೂ ನಡೆದುಕೊಂಡು ಬಂದಿದೆ.
ಕಳೆದ 15 ದಿನಗಳ ಹಿಂದೆಯೇ ನಡೆಯಬೇಕಾಗಿದ್ದ ಮಹಾಗಣಪತಿ ವಿಸರ್ಜನಾ ಮಹೋತ್ಸವ ಅಕಾಲಿಕ ಮಳೆಯಿಂದ ರದ್ದಾಗಿತ್ತು. ಮತ್ತೆ ಶನಿವಾರ ರಾತ್ರಿ ಮತ್ತು ಭಾನುವಾರ ಐತಿಹಾಸಿಕ ಪ್ರಸಿದ್ಧ ಗೂಳೂರುಶ್ರೀ ಮಹಾಗಣಪತಿಯ ವಿಸರ್ಜನಾ ಮಹೋತ್ಸವ
ಸಹಸ್ರಾರು ಭಕ್ತಾದಿಗಳ ಸಮ್ಮುಖದಲ್ಲಿ ವೈಭವಯುತವಾಗಿ ನಡೆಯಿತು.
ಬಲಿಪಾಡ್ಯಮಿಯಂದು ಆರಂಭವಾದ ಗೂಳೂರು ಗಣಪನ ಪೂಜಾ ಕೈಂಕರ್ಯ ಸಂಪೂರ್ಣಗೊಂಡು, ಸಕಲ ಧಾರ್ಮಿಕ ವಿಧಿ ವಿಧಾನಗಳ ಮೂಲಕ ಗೂಳೂರು ಕೆರೆಯಲ್ಲಿ ವರ್ಣರಂಜಿತ ಸಿಡ್ಡಿಮದ್ದಿನ ಅಬ್ಬರದ ನಡುವೆ ವಿಸರ್ಜಿಸಲಾಯಿತು.
ಇದನ್ನೂ ಓದಿ:ರೈತರ ಹೋರಾಟದಲ್ಲಿ ಕೆಲವು ಪಕ್ಷಗಳು ರಾಜಕೀಯ ಬೇಳೆ ಬೇಯಿಸಲು ಪ್ರಯತ್ನಿಸುತ್ತಿವೆ : HDK
ವಿಶೇಷ ಪೂಜೆ ಸಲ್ಲಿಕೆ: ಎರಡು ದಿನಗಳ ಕಾಲ ನಡೆದ ಗೂಳೂರು ಗಣೇಶ ಜಾತ್ರೆಯಲ್ಲಿ ನಾಡಿನ ವಿವಿಧೆಡೆ ಗಳಿಂದ ಸಹಸ್ರಾರು ಭಕ್ತಾದಿಗಳು ಪಾಲ್ಗೊಂಡು ಸ್ವಾಮಿಯ ದರ್ಶನ ಪಡೆದು ಪುನೀತರಾದರು. ಶನಿವಾರ ಸಂಜೆ 7 ಗಂಟೆಗೆ ಊರಿನ ಯಜಮಾನರ
ಮನೆಯಿಂದ ನಂದಿಧ್ವಜ ಮತ್ತು ಕರಡಿ ವಾದ್ಯದೊಂದಿಗೆ ಗಣಪತಿ ದೇವಾಲಯಕ್ಕೆ ಕಳಸ ತಂದು ಮಹಾಗಣಪತಿಗೆ ಮಹಾ ಮಂಗಳಾರತಿ ನೆರವೇರಿಸಲಾಯಿತು.
ಸಿಡಿಮದ್ದು ಸಿಡಿಸಿ ಸಂಭ್ರಮ: ಗಣೇಶಮೂರ್ತಿಯ ಮೆರವಣಿಗೆ ಸಾಗಿದ ದಾರಿಯುದ್ದಕ್ಕೂ ಗ್ರಾಮದ ಜನತೆ ಮತ್ತು ಭಕ್ತಾದಿಗಳು ವಿN°àಶ್ವರಿಗೆ ಪೂಜೆ ಸಲ್ಲಿಸಿ ಧನ್ಯತೆ ಮೆರೆದರು. ವೈಭವೋಪೇತ ಮೆರವಣಿಗೆ ಮುಖೇನ ಗೂಳೂರು ಕೆರೆ ಬಳಿ ಸಾಗಿದ ಗಣೇಶಮೂರ್ತಿಯನ್ನು ಆಕರ್ಷಕ ಸಿಡಿಮದ್ದನ್ನು ಸಿಡಿಸಿ ಸಂಭ್ರಮಿಸಿದ ನಂತರ ಕೆರೆಯಲ್ಲಿ ವಿಸರ್ಜಿಸಲಾಯಿತು.
ಗೂಳೂರು ಶ್ರೀಮಹಾಗಣಪತಿ ಭಕ್ತಮಂಡಳಿಯ ಶಿವಕುಮಾರ್ ನೇತೃತ್ವದಲ್ಲಿ ನಡೆದ ಈ ವಿಸರ್ಜನಾ ಮಹೋತ್ಸವದಲ್ಲಿ ನಾಡಿನ ವಿವಿಧೆಡೆಗಳಿಂದ ಅಪಾರ ಸಂಖ್ಯೆಯಲ್ಲಿ ಭಕ್ತಾದಿಗಳು ಭಾಗವಹಿಸಿದ್ದರು.
ಪಾನಕ ಮಜ್ಜಿಗೆ ವಿತರಣೆ: ಮಹಾಗಣಪತಿ ಉತ್ಸವಕ್ಕೆ ನಾಡಿನ ವಿವಿಧ ಭಾಗಗಳಿಂದ ಅಪಾರ ಸಂಖ್ಯೆಯ ಭಕ್ತರು ಭಾಗವಹಿಸಿದ್ದರು. ಸುಡುಬಿಸಿಲಿನಲ್ಲಿ ನಡೆದ ಮೆರವಣಿಗೆಯಲ್ಲಿ ಭಕ್ತರಿಗೆ ಹೆಸರು ಬೇಳೆ ಮಜ್ಜಿಗೆ, ಪಾನಕ, ನೀರು ವಿತರಿಸುತ್ತಿದ್ದರು. ಮುಸ್ಲಿಮರು ಸೇರಿ ಅನೇಕ ಭಕ್ತರು ಸಾಮೂಹಿಕ ವಾಗಿ ಸೇವೆ ಸಲ್ಲಿಸಿದರು.
ಗುಂಪು ಗಲಭೆ: ಜಾತ್ರಾ ಮಹೋತ್ಸವ ಆರಂಭವಾದಾಗ ಶನಿವಾರ ರಾತ್ರಿ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ನಡೆದಿದೆ ಎಂದು ಸ್ಥಳೀಯರು ತಿಳಿಸಿದ್ದು ಉಳಿದಂತೆ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಗಣೇಶ ಮಹೋತ್ಸವ ಯಶಸ್ವಿಯಾಗಿ ನಡೆಯಿತು.
ಬಿಗಿ ಭದ್ರತೆ: ಮಹಾಗಣಪತಿ ವಿಸರ್ಜನಾ ಮಹೋತ್ಸವದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Session: ಕಾಂಗ್ರೆಸಿಗರ ವೀಡಿಯೋಗೆ ಯಾವ ಬೆಲೆಯೂ ಇಲ್ಲ: ಎಂಎಲ್‌ಸಿ ರವಿಕುಮಾರ್
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Session: ಕಾಂಗ್ರೆಸಿಗರ ವೀಡಿಯೋಗೆ ಯಾವ ಬೆಲೆಯೂ ಇಲ್ಲ: ಎಂಎಲ್‌ಸಿ ರವಿಕುಮಾರ್
Parliament: ಸಂಸದರ ತಳ್ಳಾಟ: ಇಂದು ಸಂಸತ್ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?
Former Supreme Court Judge ವಿ.ಸುಬ್ರಹ್ಮಣಿಯನ್ ಎನ್‌ಎಚ್‌ಆರ್‌ಸಿ ಮುಖ್ಯಸ್ಥ
Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್ ವಿವಾದಾಸ್ಪದ ಹೇಳಿಕೆ
Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್ ರೈಲು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.