ಎರಡನೇ ಪಟ್ಟಿಯಲ್ಲಿ ಹೆಸರು ಖಂಡಿತ: ಸಾಮಾಜಿಕ ಜಾಲತಾಣದಲ್ಲಿ ಮಾಜಿ ಸಚಿವ ಅನ್ಸಾರಿ ಆಡಿಯೋ ವೈರಲ್
ಶೀಘ್ರವೇ ಹೊರಗೆ ಬರುವುದಾಗಿ ಅಭಿಮಾನಿಗಳಿಗೆ ಅಭಯ
Team Udayavani, Mar 28, 2023, 11:12 AM IST
ಗಂಗಾವತಿ: ಕಾಂಗ್ರೆಸ್ ಪಕ್ಷದ ಮೊದಲ ಪಟ್ಟಿಯಲ್ಲಿ ನನ್ನ ಹೆಸರಿಲ್ಲ ಎಂದು ಕಾಂಗ್ರೆಸ್ ಕಾರ್ಯಕರ್ತರು ಮತ್ತು ಅಭಿಮಾನಿಗಳು ಬೇಸರ ಅಥವಾ ಆತಂಕಗೊಳ್ಳುವುದು ಬೇಡ ಎರಡನೇ ಪಟ್ಟಿಯಲ್ಲಿ ಇಕ್ಬಾಲ್ ಅನ್ಸಾರಿ ಹೆಸರು ಖಂಡಿತವಾಗಲೂ ಬರಲಿದೆ. ಈಗಾಗಲೇ ಕ್ಷೇತ್ರದಾದ್ಯಂತ ಕಾಂಗ್ರೆಸ್ ಪಕ್ಷದ ಸಂಘಟನೆ ಮಾಡಿ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಜನರ ಆಶೀರ್ವಾದದಿಂದ ಗೆಲುವು ಪಡೆಯಲಾಗುತ್ತದೆ ಎಂದು ಇಕ್ಬಾಲ್ ಅನ್ಸಾರಿ ಹೇಳಿದ್ದಾರೆ.
ಅವರು ಸಾಮಾಜಿಕ ಜಾಲತಾಣದಲ್ಲಿ ತಮ್ಮ ಕಾರ್ಯಕರ್ತರು ಮತ್ತು ಅಭಿಮಾನಿಗಳನ್ನುದ್ದೇಶಿಸಿ ಮಾತನಾಡಿದ ಆಡಿಯೋವನ್ನು ಹರಿಬಿಟ್ಟು ಮೊದಲ ಪಟ್ಟಿಯಲ್ಲಿ ಅನ್ಸಾರಿ ಹೆಸರು ಇಲ್ಲದ್ದಕ್ಕಾಗಿ ಅಭಿಮಾನಿಗಳು ಮತ್ತು ಕಾಂಗ್ರೆಸ್ ಕಾರ್ಯಕರ್ತರು ಬೇಜಾರು ಆತಂಕ ಮಾಡಿಕೊಂಡಿರುವುದು ಕುರಿತು ಅವರಿಗೆ ಸಮಾಧಾನದ ಮಾತುಗಳನ್ನು ಹೇಳಿದ್ದಾರೆ.
ಕೆಲವು ಕಾರಣಕ್ಕಾಗಿ ಮೊದಲಿನ ಕಾಂಗ್ರೆಸ್ ಪಟ್ಟಿಯಲ್ಲಿ ತಮ್ಮ ಹೆಸರು ಪ್ರಸ್ತಾಪವಾಗಿಲ್ಲ. ಎರಡನೇ ಪಟ್ಟಿಯಲ್ಲಿ ಖಂಡಿತವಾಗಿ ಇಕ್ಬಾಲ್ ಅನ್ಸಾರಿ ಹೆಸರು ಇರಲಿದೆ. ಗಂಗಾವತಿ ಕ್ಷೇತ್ರದಲ್ಲಿ ಈಗಾಗಲೇ ಕೆಲವು ಅನ್ಯ ಊರುಗಳಿಂದ ಆಗಮಿಸಿದ ವ್ಯಕ್ತಿಗಳು ಬಟ್ಟೆ ಹಾವು ಬಿಡುತ್ತಿದ್ದಾರೆ. ಅವರು ಖಾಲಿ ಡಬ್ಬ ಖಾಲಿಡಬ್ಬ ಹೆಚ್ಚು ಸೌಂಡ್ ಮಾಡುತ್ತದೆ. ಆದ್ದರಿಂದ ಯಾರು ಇದನ್ನು ತಲೆಕೆಡಿಸಿಕೊಳ್ಳಬಾರದು ಎಂದರು.
ಖಂಡಿತವಾಗಿ ಗಂಗಾವತಿಯಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ಪಡೆಯಲಿದೆ. ನಾನು ಖಂಡಿತವಾಗಿ ಕಾಂಗ್ರೆಸ್ ನಿಂದಲೇ ಸ್ಪರ್ಧೆ ಮಾಡುತ್ತೇನೆ. ಗಾಳಿ ಸುದ್ದಿಗೆ ಕಿವಿಗೊಡಬಾರದು. ಕಾಂಗ್ರೆಸ್ ಸರಕಾರ 2023 ರಲ್ಲಿ ಅಧಿಕಾರಕ್ಕೆ ಬರಲಿದೆ. ಗಂಗಾವತಿ ನಗರ, ಗ್ರಾಮೀಣ ಭಾಗವನ್ನು ಅಭಿವೃದ್ಧಿ ಮಾಡಬೇಕಿದೆ ಎಂದು ಹೇಳಿದ್ದಾರೆ.
ಹೊರಗಿನಿಂದ ಒಳಗಿನಿಂದ ಅವರಿವರು ಬಂದಿದ್ದಾರೆಂದು ಆತಂಕ ಪಡುವುದು ಬೇಡ. ಎರಡನೇ ಪಟ್ಟಿಯಲ್ಲಿ ಅನ್ಸಾರಿ ಹೆಸರು ಇರುತ್ತದೆ ಎಂದು ತಿಳಿಸುವ ಉದ್ದೇಶದಿಂದ ಜರೂರಾಗಿ ಸಾಮಾಜಿಕ ಜಾಲತಾಣಕ್ಕೆ ಆಗಮಿಸಿ ಹೇಳಿಕೆಯನ್ನು ನೀಡುತ್ತಿದ್ದೇನೆ. ಶೀಘ್ರವಾಗಿ ಹೊರಗೆ ಬಂದು ನಿಮ್ಮೆಲ್ಲರ ಜತೆಗಿದ್ದು ಕಾಂಗ್ರೆಸ್ ಗೆಲ್ಲಿಸಿ ರಾಜ್ಯದಲ್ಲಿ ಅಧಿಕಾರಕ್ಕೆ ತರಬೇಕಿದೆ ಎಂದು ಆಡಿಯೋದಲ್ಲಿ ಹೇಳಿದ್ದಾರೆ.
ಹಾಲಿ ಶಾಸಕ ಪರಣ್ಣ ಮುನವಳ್ಳಿ ಹಾಗೂ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ವಿರುದ್ಧ ಖಾಲಿ ಡಬ್ಬಿ ಎನ್ನುವ ಮೂಲಕ ಪರೋಕ್ಷವಾಗಿ ಟೀಕಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು
Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ
ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ
ಕೃಷ್ಣ ನಿಧನ;ಪ್ರಮುಖ ಸರಕಾರಿ ಕಚೇರಿಗಳಲ್ಲಿ ಅರ್ಧಕ್ಕೇರದ ರಾಷ್ಟ್ರಧ್ವಜ;ಅಧಿಕಾರಿಗಳಿಂದ ಅಗೌರವ
ಎಸ್.ಎಂ.ಕೃಷ್ಣ ನಿಧನ; ಶೋಕಾಚರಣೆ ಆದೇಶಕ್ಕೆ ಕಿಮ್ಮತ್ತು ನೀಡದ ಬಿಇಒ,ಸಮಾಜ ಕಲ್ಯಾಣ ಇಲಾಖೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.