ಮಾರ್ಗರೇಟ್ ಹೇಳಿಕೆ ಬೆಂಬಲಿಸಿದ ಗೌಡರು
Team Udayavani, Feb 29, 2020, 3:07 AM IST
ಬೆಂಗಳೂರು: ಸಿದ್ದರಾಮಯ್ಯ ಹೇಳಿದ ಕೂಡಲೇ ಕಾಂಗ್ರೆಸ್ ಬಿಟ್ಟು ಹೋಗಿರುವವರು ವಾಪಸ್ ಬರ್ತಾರೆ ಎಂದು ಕಾಂಗ್ರೆಸ್ ಹಿರಿಯ ನಾಯಕಿ ಮಾರ್ಗರೇಟ್ ಆಳ್ವಾ ಹೇಳಿಕೆಯನ್ನು ನಾನು ಅಲ್ಲಗಳೆಯುವುದಿಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿ, ಆಳ್ವಾ ಅವರು ಹಿರಿಯರು. ಅವರ ಮೂಲಗಳಿಂದ ಹಾಗೆ ಹೇಳಿರಬಹುದು ಎಂದು ಪ್ರತಿಕ್ರಿಯಿಸಿದರು. ಇತ್ತೀಚೆಗೆ ಕಾಂಗ್ರೆಸ್ ಕಾರ್ಯಕ್ರಮವೊಂದರಲ್ಲಿ ಮಾರ್ಗರೇಟ್ ಆಳ್ವಾ ಅವರು “ಆಪರೇಷನ್ ಕಮಲದ’ ವಿಷಯ ಸಿದ್ದರಾಮಯ್ಯ ಅವರಿಗೆ ಗೊತ್ತು. ಅವರು ವಾಪಸ್ ಕರೆದರೆ ಶಾಸಕರು ಮತ್ತೆ ಬರುತ್ತಾರೆ ಎಂಬರ್ಥದಲ್ಲಿ ಮಾತಾಡಿದ್ದರು.
ಯಡಿಯೂರಪ್ಪ ಅವರ ಜನ್ಮದಿನಕ್ಕೆ ಹೋಗದ ಬಗ್ಗೆ ಪ್ರತಿಕ್ರಿಯಿಸಿ, ಕಾರ್ಯಕ್ರಮಕ್ಕೆ ಹೋಗುವ ಆಸೆ ನನಗೂ ಇತ್ತು. ಆಹ್ವಾನ ನೀಡಿದ್ದರು. ಆದರೆ, ಆರೋಗ್ಯ ಸಮಸ್ಯೆಯಿಂದ ಹೋಗಲು ಸಾಧ್ಯವಾಗಲಿಲ್ಲ. ಹೀಗಾಗಿ, ನಾನೇ ಯಡಿಯೂರಪ್ಪ ಅವರಿಗೆ ಪತ್ರ ಬರೆದು ಶುಭಾಷಯ ಕೋರಿದ್ದೆ.
ಕಾವೇರಿ ನಿವಾಸಕ್ಕೆ ಹೋಗಬೇಕು ಅಂತ ಅಂದುಕೊಂಡೆ. ಆದರೆ, ಜನರು ಜಾಸ್ತಿ ಇರುತ್ತಾರೆ ಎಂದು ಹೋಗಲು ಆಗಲಿಲ್ಲ. ನಿನ್ನೆ ಸಿದ್ದರಾಮಯ್ಯ ಅವರ ಮಾತಿಗೆ ಭಾವನಾತ್ಮಕವಾಗಿ ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ಗಟ್ಟಿಗಾರ ಯಡಿಯೂರಪ್ಪ ಅಂತ ಹೇಳುತ್ತಿದ್ದರು. ಮೊದಲ ಬಾರಿಗೆ ಸಿದ್ದರಾಮಯ್ಯ ಅವರ ಮಾತು ಕೇಳಿ ಭಾವನಾತ್ಮಕವಾಗಿ ಪ್ರತಿಕ್ರಿಯೆ ನೀಡೋದನ್ನು ನಾನು ಟಿವಿಯಲ್ಲಿ ನೋಡಿದೆ ಎಂದು ಹೇಳಿದರು.
ಬಿಬಿಎಂಪಿ ಚುನಾವಣೆ: ಬಿಬಿಎಂಪಿ ಹಾಗೂ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಜೆಡಿಎಸ್ ಏಕಾಂಗಿಯಾಗಿ ಸ್ಪರ್ಧೆ ಮಾಡಲಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ತಿಳಿಸಿದ್ದಾರೆ. ಬಿಬಿಎಂಪಿ ಚುನಾವಣೆ ಸಂಬಂಧ ಈಗಾಗಲೇ 55 ವಾರ್ಡ್‌ಗಳಲ್ಲಿ ಅಭ್ಯರ್ಥಿ ಅಂತಿಮಗೊಳಿಸಿದ್ದೇವೆ. 3-4 ತಿಂಗಳಲ್ಲಿ ಚುನಾವಣೆ ಎದುರಾಗಲಿದ್ದು, ಏಕಾಂಗಿಯಾಗಿಯೇ ಸ್ಪರ್ಧೆ ಮಾಡಲಿದ್ದೇವೆ ಎಂದು ಹೇಳಿದರು.
ಅಧಿಸೂಚನೆಗೆ ಸ್ವಾಗತ
ಬೆಂಗಳೂರು: ಕೇಂದ್ರ ಸರ್ಕಾರದಿಂದ ಮಹದಾಯಿ ಅಧಿಸೂಚನೆ ಹೊರಡಿಸಿರುವುದು ಸಂತೋಷದ ವಿಚಾರ. ಇದು ಪ್ರಾದೇಶಿಕತೆಯ ವಿಷಯ. ಅಧಿಸೂಚನೆಯಿಂದ ನಮಗೆ 13 ಟಿಎಂಸಿ ನೀರು ಸಿಗುತ್ತದೆ ಎಂದು ಮಾಜಿ ಪ್ರಧಾನಿ ಎಚ್. ಡಿ.ದೇವೇಗೌಡರು ಹೇಳಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿ, ಅಧಿಸೂಚನೆಯಿಂದ ನಮ್ಮ ಅಂತಿಮ ಗುರಿ ಮುಟ್ಟಿದೆ ಎನ್ನಿಸುತ್ತದೆ. ಸುಪ್ರೀಂಕೋರ್ಟ್ ಆದೇಶದ ಮೇಲೆ ಅಧಿಸೂಚನೆ ಹೊರಡಿಸಿದ್ದಾರೆ. ವಿಳಂಬ ಮಾಡಿಲ್ಲ, ಅದು ನೆಮ್ಮದಿಯ ವಿಚಾರ ಎಂದರು.
ವಿಫಲ: ದೆಹಲಿ ಘಟನೆಯಲ್ಲಿ ಕೇಂದ್ರ ಸರ್ಕಾರ, ಗುಪ್ತಚರ ಇಲಾಖೆ ವಿಫಲವಾಗಿದೆ. ಗೃಹ ಇಲಾಖೆಯೇ ಇದರ ಹೊಣೆ ಹೊರಬೇಕು ಎಂದು ದೇವೇಗೌಡರು ಒತ್ತಾಯಿಸಿದರು. ಕೆ.ಆರ್.ಪೇಟೆಯಲ್ಲಿ ನಮ್ಮ ಕಾರ್ಯಕರ್ತರಿಗೆ ಸಚಿವ ನಾರಾಯಣಗೌಡ ಹೈಕೋರ್ಟ್ ಆದೇಶ ಇದ್ದರೂ ತೊಂದರೆ ಕೊಡುತ್ತಿದ್ದಾರೆ. ಹೀಗಾಗಿ, ನಾನೇ ಆಲ್ಲಿಗೆ ಹೋಗಿ ಸ್ಪಂದಿಸುತ್ತೇನೆ. ಈ ಬಗ್ಗೆ ಮುಖ್ಯಮಂತ್ರಿಯವರ ಗಮನಕ್ಕೂ ತಂದಿದ್ದೇನೆ. ಸರ್ಕಾರ ಏನು ಕ್ರಮ ತೆಗೆದುಕೊಳ್ಳುತ್ತೋ ನೋಡೋಣ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Rebels Team: ಜನವರಿಯಲ್ಲಿ ಮತ್ತೆ ರೆಬಲ್ಸ್ ಬಿಜೆಪಿ ವಕ್ಫ್ ಪ್ರವಾಸ
Belagavi Congress Session: ಮಹಾ ಜನಾಂದೋಲನ: ಕಾಂಗ್ರೆಸ್ ಪಣ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ
ಕೋಳಿ ಅಂಕಕ್ಕೆ ಪೊಲೀಸ್ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ
National Mourning: ಮಂಗಳೂರಿನ ಬೀಚ್ ಉತ್ಸವ ಮುಂದೂಡಿಕೆ
Clown Kohli: ವಿರಾಟ್ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್ ಮಾಧ್ಯಮಗಳು!
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.