Elections: ಲೋಕ ಚುನಾವಣೆ: ಮತದಾರರ ಕರಡು ಪಟ್ಟಿ ಪ್ರಕಟ
Team Udayavani, Oct 27, 2023, 11:04 PM IST
ಬೆಂಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮತದಾರರ ಪಟ್ಟಿಯನ್ನು ತಯಾರಿಸುವ ಕಾರ್ಯವನ್ನು ಕೇಂದ್ರ ಚುನಾವಣ ಆಯೋಗದ ನಿರ್ದೇಶನ ದಂತೆ ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ನಡೆಸುತ್ತಿದೆ. ಅ.27ರಂದು ಕರಡು ಮತದಾರರ ಪಟ್ಟಿ ಪ್ರಕಟಿಸಲಾಗಿದ್ದು, ಅದರಂತೆ ರಾಜ್ಯದಲ್ಲಿ ಸದ್ಯ 5.33 ಕೋಟಿ ಮತದಾರರಿದ್ದಾರೆ. ಪಟ್ಟಿ ಪರಿಷ್ಕರಣೆ ಕಾರ್ಯ ಅ.27ರಿಂದ ಮತ್ತೆ ಮುಂದುವರಿಯಲಿದ್ದು, ಡಿಸೆಂಬರ್ 9ರ ವರೆಗೆ ನಡೆಯಲಿದೆ.
ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಶುಕ್ರ ವಾರ ಸುದ್ದಿಗೋಷ್ಠಿಯಲ್ಲಿ ಕರಡು ಮತ ದಾರರ ಪಟ್ಟಿ ಪ್ರಕಟಿಸಿದ ಬಳಿಕ ಈ ಮಾಹಿತಿ ನೀಡಿದರು. ಭಾರತ ಚುನಾವಣ ಆಯೋ ಗದ ನಿರ್ದೇಶನದಂತೆ ರಾಜ್ಯದ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ 2024ರ ನ.1ರ ಅರ್ಹತಾ ದಿನಾಂಕದಂತೆ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಪ್ರಗತಿ ಯಲ್ಲಿದೆ. ಈಗ 224 ಕ್ಷೇತ್ರಗಳ ಕರಡು ಮತದಾರರ ಪಟ್ಟಿಯನ್ನು ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಕಚೇರಿಗಳು, ಮತದಾರರ ನೋಂದಣಾಧಿಕಾರಿಗಳು, ಸಹಾಯಕ ಮತದಾರರ ನೋಂದಣಾಧಿಕಾರಿಗಳ ಕಚೇರಿ ಮತ್ತು ವ್ಯಾಪ್ತಿಗೆ ಬರುವ ಎಲ್ಲ ಮತಗಟ್ಟೆಗಳಲ್ಲಿ ಸಾರ್ವಜನಿಕರ ಮಾಹಿತಿಗಾಗಿ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ.
ಎಲ್ಲ 224 ವಿಧಾನಸಭಾ ಕ್ಷೇತ್ರಗಳ ಕರಡು ಮತದಾರರ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ ಕಚೇರಿಯ ವೆಬ್‌ಸೈಟ್ https:/ceo.karnataka.gov.i ನಲ್ಲಿ ಪಿಡಿಎಫ್ ರೂಪದಲ್ಲಿ ಪ್ರಕಟಿಸಲಾಗಿದೆ. ಸಾರ್ವಜನಿಕರು ಸರಿಯಾದ ಮಾಹಿತಿಯೊಂದಿಗೆ ತಮ್ಮ ಹೆಸರುಗಳನ್ನು ಪಟ್ಟಿಯಲ್ಲಿ ಸೇರಿಸಲಾಗಿದೆಯೇ ಎಂದು ಪರಿಶೀಲಿಸಿಕೊಳ್ಳಬೇಕು ಎಂದು ಮನೋಜ್ ಕುಮಾರ್ ಮೀನಾ ತಿಳಿಸಿದ್ದಾರೆ.
ಹೆಸರಿಲ್ಲದಿದ್ದರೆ ಸೇರಿಸಲು ಮನವಿ
ಮತದಾರರ ಪಟ್ಟಿ ಪರಿಷ್ಕರಣೆ ವೇಳಾಪಟ್ಟಿ
ಕರಡು ಮತದಾರರ ಪಟ್ಟಿಗೆ ಹಕ್ಕುಗಳು-ಆಕ್ಷೇಪಣೆ ಸಲ್ಲಿಸುವ ಅವಧಿ: ಅ.27 (ಶುಕ್ರವಾರದಿಂದ) ಡಿ.9 (ಶನಿವಾರ)
ವಿಶೇಷ ಅಭಿಯಾನದ ದಿನಾಂಕಗಳು: ನವೆಂಬರ್ 18 ಮತ್ತು 19 (ಶನಿವಾರ-ರವಿವಾರ) ಹಾಗೂ ಡಿಸೆಂಬರ್ 2 ಮತ್ತು3
ಹಕ್ಕುಗಳು ಮತ್ತು ಆಕ್ಷೇಪಣೆಗಳು ವಿಲೇವಾರಿ: ಡಿ.26
ಅಂತಿಮ ಮತದಾರರ ಪಟ್ಟಿ ಪ್ರಕಟ: 2024ರ ಜನವರಿ 5.
ಯಾವುದಕ್ಕೆ ಯಾವ ಅರ್ಜಿ?
ಪ್ರತಿ ವಿಧಾನಸಭಾ ಕ್ಷೇತ್ರದ ನೋಂದಣಾಧಿಕಾರಿ/ಸಹಾಯಕ ನೋಂದಣಾಧಿಕಾರಿಗೆ ನಿಗದಿತ ನಮೂನೆಗಳಲ್ಲಿ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬೇಕು.
ಹೊಸದಾಗಿ ಪಟ್ಟಿಯಲ್ಲಿ ಹೆಸರು ಸೇರಿಸಲು ಫಾರಂ-6
ಸಾಗರೋತ್ತರ ಭಾರತೀಯ ಮತದಾರರು ಹೆಸರು ಸೇರಿಸಲು ಫಾರಂ 6ಎ
ಮತದಾರರ ಪಟ್ಟಿ ವಿವರಗಳ ದೃಢೀಕರಣಕ್ಕಾಗಿ ಆಧಾರ್ 12 ದಾಖಲೆಗಳ ಮಾಹಿತಿಗೆ ಫಾರಂ-6ಬಿ
ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ಆಕ್ಷೇಪಣೆಗಾಗಿ, ಹೆಸರ ಅಳಿಸಿ ಹಾಕಲು ಫಾರಂ-7.
ವಿಳಾಸ ಬದಲಾವಣೆ, ಹೆಸರು, ವಿಳಾಸ ಇತ್ಯಾದಿಗಳ ತಿದ್ದುಪಡಿ, ಬದಲಿ ಮತದಾರರ ಗುರುತಿನ ಚೀಟಿಗಾಗಿ, ವಿಲಕಚೇತನ ಮತದಾರರನ್ನು ಗುರುತಿಸಲು ಫಾರಂ-8.
3.89 ಲಕ್ಷ ಡಿಲಿಟ್
ಈಗ ಪ್ರಕಟಿಸಿರುವ ಕರಡು ಮತದಾರರ ಪಟ್ಟಿಯಲ್ಲಿ ಕಳೆದ ವಿಧಾನಸಭಾ ಚುನಾವಣೆ ಬಳಿಕ ಮರಣ ಹೊಂದಿದ 1,27,703, ಸ್ಥಳಾಂತರಗೊಂಡ 2,38,617, ನಕಲಿ ಮತದಾರರು 21,480 ಸಹಿತ ಒಟ್ಟು 3,89,353 ಮತದಾರರ ಹೆಸರನ್ನು ಅಳಿಸಿ ಹಾಕಲಾಗಿದೆ. ಈ ಅವಧಿಯಲ್ಲಿ 6.02 ಲಕ್ಷ ಮತದಾರರು ಹೊಸದಾಗಿ ಸೇರ್ಪಡೆಯಾಗಿ ದ್ದಾರೆ. ಹೆಸರು, ವಿಳಾಸ, ಫೋಟೋ, ವಯಸ್ಸು, ಮೊಬೈಲ್ ಸಂಖ್ಯೆ, ಜನ್ಮ ದಿನಾಂಕ ಮತ್ತಿತರ 6.39 ಲಕ್ಷ ತಿದ್ದುಪಡಿಗಳನ್ನು ಮಾಡಲಾಗಿದೆ.
ಅರ್ಜಿ ಸಲ್ಲಿಕೆ ಹೇಗೆ?
ಅರ್ಜಿಗಳನ್ನು ಮತದಾರರ ಸೇವಾ ಪೋರ್ಟಲ್ https://voters.eci.gov.in ಅಥವಾ ವೋಟರ್ ಹೆಲ್ಪ್ ಲೈನ್ ಮೊಬೈಲ್ ಅಪ್ಲಿಕೇಷನ್ ಬಳಸಿ ಆನ್‌ಲೈನ್ ಮೂಲಕ ಸಲ್ಲಿಸಬಹುದು. ಸ್ಥಳೀಯ ಚುನಾವಣಾಧಿಕಾರಿಗಳು, ಮತಗಟ್ಟೆ ಅಧಿಕಾರಿಗಳಿಗೂ ಸಲ್ಲಿಸಬಹುದು. ಪರಿಷ್ಕರಣೆ ಕಾರ್ಯದಲ್ಲಿ ಭಾಗಿಯಾಗಿದ್ದ ರಾಜಕೀಯ ಪಕ್ಷಗಳ ಏಜೆಂಟರು, ಸಾಮಾಜಿಕ ಸಂಘ-ಸಂಸ್ಥೆಗಳ ಮೂಲಕವೂ ಅರ್ಜಿಗಳನ್ನು ಸಲ್ಲಿಸಬಹುದು.
ಕರಡು ಮತದಾರರ ಪಟ್ಟಿ
ಒಟ್ಟು ಮತದಾರರು: 5,33,77,162 (5.33 ಕೋಟಿ)
ಪುರುಷರು: 2.68 ಕೋಟಿ
ಮಹಿಳೆಯರು: 2.65 ಕೋಟಿ
ಯುವ ಮತದಾರರು: 13.45 ಲಕ್ಷ
80 ವರ್ಷ ಮೇಲ್ಪಟ್ಟವರು: 11.76 ಲಕ್ಷ
ತೃತೀಯ ಲಿಂಗಿಗಳು: 4,896
ಸಾಗರೋತ್ತರ ಮತದಾರರು: 3,055
ಅಂಗವಿಕಲರ ಮತದಾರರು: 5.66 ಲಕ್ಷ
ಅತಿ ಹೆಚ್ಚು ಮತದಾರರು: ಬೆಂಗಳೂರು ದಕ್ಷಿಣ: 5.08 ಲಕ್ಷ
ಅತಿ ಕಡಿಮೆ ಮತದಾರರು: ಶೃಂಗೇರಿ: 1.66 ಲಕ್ಷ
– ರಾಜ್ಯದ ಒಟ್ಟು 224 ವಿಧಾನಸಭಾ ಕ್ಷೇತ್ರಗಳ ಪೈಕಿ 115 ಕ್ಷೇತ್ರಗಳಲ್ಲಿ ಪುರುಷರಿಗಿಂತ ಮಹಿಳಾ ಮತದಾರರು ಹೆಚ್ಚಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.