ರಾಜ್ಯದಲ್ಲಿ ಬದಲಾವಣೆ ತರಲು ಉಪಚುನಾವಣೇಲಿ ಬಿಜೆಪಿ ಗೆಲ್ಲಿಸಿ; ಬಿಎಸ್ ವೈ
Team Udayavani, May 16, 2019, 5:25 PM IST
ಹುಬ್ಬಳ್ಳಿ: ಕುಂದಗೋಳ, ಚಿಂಚೋಳಿ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಹಣದ ಹೊಳೆ ಹರಿಸ್ತಾ ಇದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಆರೋಪಿಸಿದ್ದು, ಎರಡೂ ಕ್ಷೇತ್ರದಲ್ಲಿ 20 ಸಾವಿರಕ್ಕಿಂತ ಹೆಚ್ಚು ಮತಗಳ ಅಂತರದಿಂದ ನಾವು ಗೆಲ್ಲುತ್ತೇವೆ ಎಂದು ಈ ಸಂದರ್ಭದಲ್ಲಿ ವಿಶ್ವಾಸವ್ಯಕ್ತಪಡಿಸಿದರು.
ಗುರುವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಮತದಾರರಿಗೆ ಕೈ ಜೋಡಿಸಿ ಪ್ರಾರ್ಥನೆ ಮಾಡುವೆ. ರಾಜ್ಯದಲ್ಲಿ ಬದಲಾವಣೆ ತರಲು ಬಿಜೆಪಿ ಗೆಲ್ಲಿಸಬೇಕು. ಈ ಚುನಾವಣೆ ಗೆಲ್ಲುವ ಜೊತೆಗೆ ಮೂವರು ಪಕ್ಷೇತರರು ನಮ್ಮ ಜೊತೆ ಬರ್ತಾರೆ. ಆಗ ನಮ್ಮ ಸಂಖ್ಯಾಬಲ 109 ಆಗುತ್ತದೆ. ಹೀಗಾಗಿ ಬದಲಾವಣೆ ಆಗುತ್ತದೆ ಎಂದರು.
ವೀರೇಂದ್ರ ಪಾಟೀಲರಿಗೆ ಕಾಂಗ್ರೆಸ್ ಅವಮಾನ ಮಾಡಿದೆ. ಯಾವುದೇ ಕಾರಣಕ್ಕೂ ವೀರಶೈವರ ಮತ ಕೇಳುವ ಹಕ್ಕು ಕಾಂಗ್ರೆಸ್‌ಗೆ ಇಲ್ಲ ಎಂದು ಹೇಳಿದರು.
ಸಿದ್ದರಾಮಯ್ಯಗೆ ಮೋದಿ ವಿರುದ್ಧ ಮಾತನಾಡಿದರೆ ದೊಡ್ಡವನಾಗ್ತಿನಿ ಅನ್ನೋ ಭಾವನೆ ಬಂದಿದೆ. ಲೋಕಸಭೆಯಲ್ಲಿ ನಾವು 22 ಸ್ಥಾನ ಗೆಲ್ಲುತ್ತೇವೆ ಅಂತ ಹೇಳ್ತಿವಿ. ಕಾಂಗ್ರೆಸ್‌ನವರು ನಾವು ಇಷ್ಟೇ ಸೀಟು ಗೆಲ್ಲುತ್ತೇವೆಂದು ಗಟ್ಟಿಯಾಗಿ ಹೇಳಲಿ ನೋಡೋಣ. ನಾನು ಸಿಎಂ ಆಗ್ತೇನಿ ಅಂತಾ ಎಲ್ಲಿಯೂ ಹೇಳಿಲ್ಲ. ವಿರೋಧ ಪಕ್ಷದಲ್ಲೇ ಮುಂದುವರೆಯಬಲ್ಲೆ. ಬೇರೆ ಪಕ್ಷದ ಅಭ್ಯರ್ಥಿ ಬಗ್ಗೆ ನಾವು ಯಾವುದೇ ಟೀಕೆ ಮಾಡುತ್ತಿಲ್ಲ. ಸಿದ್ದರಾಮಯ್ಯನವರ ಮಾತಿಗೆ ಈಶ್ವರಪ್ಪ ತಿರುಗೇಟು ನೀಡುತ್ತಿದ್ದಾರಷ್ಟೇ ಎಂದು ತಿರುಗೇಟು ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.