ರಿಕ್ಷಾದಲ್ಲಿ ಬಾಲಕಿಗೆ ಲೈಂಗಿಕ ದೌರ್ಜನ್ಯ ಪ್ರಕರಣ: ಚಾಲಕ ಸಹಿತ ಇಬ್ಬರಿಗೆ ಕಾರಾಗೃಹ ಶಿಕ್ಷೆ


Team Udayavani, Dec 10, 2024, 6:48 AM IST

ರಿಕ್ಷಾದಲ್ಲಿ ಬಾಲಕಿಗೆ ಲೈಂಗಿಕ ದೌರ್ಜನ್ಯ ಪ್ರಕರಣ: ಚಾಲಕ ಸಹಿತ ಇಬ್ಬರಿಗೆ ಕಾರಾಗೃಹ ಶಿಕ್ಷೆ

ಮಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಆಟೋರಿಕ್ಷಾದಲ್ಲಿ ಲೈಂಗಿಕ ದೌರ್ಜನ್ಯವೆಸಗಿದ ಆರೋಪಿಗಳಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ (ಪೋಕ್ಸೋ) ಎಫ್ಟಿಎಸ್‌ಸಿ-1 ನ್ಯಾಯಾಲಯದ ನ್ಯಾಯಾಧೀಶರಾದ ಡಿ. ವಿನಯ್‌ ಅವರು ಶಿಕ್ಷೆ ವಿಧಿಸಿದ್ದಾರೆ.

ಬೆಳ್ತಂಗಡಿ ತಾಲೂಕು ಇಳಂತಿಲದ ನಿವಾಸಿ, ಬೀಡಿ ತೆಗೆಯುವ ವೃತ್ತಿಯ ಅಬ್ದುಲ್‌ ಕರೀಂ (39) ಮತ್ತು ಮೊಗ್ರು ಗ್ರಾಮ ಪಚ್ಚಡ್ಕ ಮನೆಯ ನಿವಾಸಿ ಆಟೋರಿಕ್ಷಾ ಚಾಲಕ ಸಾದಿಕ್‌ (34) ಶಿಕ್ಷೆಗೊಳಗಾದವರು.

2023ರ ಜೂ. 18ರಂದು ಅಪ್ರಾಪ್ತ ವಯಸ್ಸಿನ ಬಾಲಕಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಂಘದ ಹಣ ಕಟ್ಟಲು ಬಂದಾರು ಗ್ರಾಮದ ನೇಲೊಳª ಪಲ್ಕೆ ಎಂಬಲ್ಲಿಗೆ ನಡೆದುಕೊಂಡು ಹೋಗುತ್ತಿದ್ದಾಗ ಆರೋಪಿ ಪರಿಚಿತ ಕರೀಂ ಎನ್ನುವಾತ ಬಾಲಕಿಯನ್ನು ಎಲ್ಲಿಗೆ ಹೋಗುವುದಾಗಿ ಪ್ರಶ್ನಿಸಿದ್ದ. ಕುಂಟಾಲ ಪಲ್ಕೆ ತಲುಪಿದಾಗ ಆಟೋರಿಕ್ಷಾವೊಂದನ್ನು ನಿಲ್ಲಿಸಿ ರಿಕ್ಷಾದಲ್ಲಿ ಬರುವಂತೆ ಕರೆದಿದ್ದ.

ಆಟೋರಿಕ್ಷಾ ಚಾಲಕ ಇನ್ನೋರ್ವ ಆರೋಪಿ ಸಾದಿಕ್‌ ಕೂಡ ಬಾಲಕಿಯನ್ನು ಕರೆದಿದ್ದ. ಬಾಲಕಿ ರಿಕ್ಷಾದಲ್ಲಿ ಕುಳಿತಿದ್ದಳು. ಆಗ ಕರೀಂ ಆಕೆಗೆ 200 ರೂ. ಹಣ ನೀಡಿ ಅದನ್ನು ಸಂಘಕ್ಕೆ ಕಟ್ಟಿ ವಾಪಸ್‌ ಬರುವಾಗ ಆಟೋದಲ್ಲಿ ಬರುವಂತೆ ಹೇಳಿದ್ದ. ಬಾಲಕಿ ಹಣವನ್ನು ವಾಪಸ್‌ ಅವನಿಗೆ ನೀಡಿದ್ದಳು. ಆಗ ಬೆಳ್ತಂಗಡಿಗೆ ಬರುತ್ತೀಯಾ ಎಂದು ಕೇಳಿದ್ದ. ಬಾಲಕಿ ಬರುವುದಿಲ್ಲ ಎಂಬುದಾಗಿ ಹೇಳಿದಾಗ ಕರೀಂ ಆಕೆಯ ಮೇಲೆ ಕೈ ಹಾಕಿ ಲೈಂಗಿಕ ದೌರ್ಜನ್ಯ ಎಸಗಿದ್ದ. ಆಗ ಬಾಲಕಿ ಆಟೋರಿಕ್ಷಾದಿಂದ ಹಾರಿ ಗಾಯಗೊಂಡಿದ್ದಳು. ಇಬ್ಬರು ಆರೋಪಿಗಳು ಕೂಡ ಉದ್ದೇಶಪೂರ್ವಕವಾಗಿ ಬಾಲಕಿಯನ್ನು ಆಟೋರಿಕ್ಷಾದಲ್ಲಿ ಕರೆದೊಯ್ದಿದ್ದರು. ಆಕೆ ಆಟೋರಿಕ್ಷಾದಿಂದ ಹಾರಿದಾಗ ಆಟೋರಿಕ್ಷಾವನ್ನು ನಿಲ್ಲಿಸದೇ ತೆರಳಿದ್ದರು. ಈ ಬಗ್ಗೆ ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಒಂದನೇ ಆರೋಪಿ ಅಬ್ದುಲ್‌ ಕರೀಂಗೆ ಪೋಕೊÕ ಕಾಯ್ದೆಯ ಕಲಂ 8ರ ಅಡಿಯಲ್ಲಿ 5 ವರ್ಷಗಳ ಜೈಲು ಮತ್ತು 5,000 ರೂ. ದಂಡ, ದಂಡ ಪಾವತಿಸಲು ವಿಫ‌ಲನಾದರೆ ಹೆಚ್ಚುವರಿ 6 ತಿಂಗಳ ಸಾದಾ ಸಜೆ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ದೌರ್ಜನ್ಯ ತಡೆ ಕಾಯಿದೆಯ ಕಲಂ 3(1)(ಡಬ್ಲ್ಯು)(ಐ) ಅಡಿಯಲ್ಲಿ 5 ವರ್ಷ ಸಾದಾ ಸಜೆ ಮತ್ತು 5,000 ರೂ.ದಂಡ, ಒಂದು ವೇಳೆ ದಂಡ ಪಾವತಿಸಲು ವಿಫ‌ಲನಾದರೆ ಹೆಚ್ಚುವರಿ 6 ತಿಂಗಳ ಸಜೆ, ಅಲ್ಲದೆ ಪರಿಶಿಷ್ಟ ಜಾತಿ, ಪಂಗಡದವರ ದೌರ್ಜನ್ಯ ತಡೆ ಕಾಯ್ದೆಯ ಕಲಂ 3(2)(ವಿಎ) ಮತ್ತು ಭಾರತೀಯ ದಂಡ ಸಂಹಿತೆ ಕಲಂ 354ಎ(1)(ಐ) ಅಡಿಯಲ್ಲಿ 3 ವರ್ಷ ಜೈಲು ಶಿಕ್ಷೆ ಮತ್ತು 5,000 ರೂ. ದಂಡ, ಒಂದು ವೇಳೆ ದಂಡ ಪಾವತಿಸಲು ವಿಫ‌ಲನಾದರೆ ಹೆಚ್ಚುವರಿ 3 ತಿಂಗಳ ಜೈಲು ಶಿಕ್ಷೆ ವಿಧಿಸಿದ್ದಾರೆ. ಇನ್ನೋರ್ವ ಆರೋಪಿ ಸಾದಿಕ್‌ಗೆ ಪೋಕ್ಸೋ ಕಾಯ್ದೆಯ ಕಲಂ 8ರಡಿಯಲ್ಲಿ 3 ವರ್ಷಗಳ ಜೈಲು ಮತ್ತು 5,000 ರೂ. ದಂಡ, ದಂಡ ಪಾವತಿಸಲು ವಿಫ‌ಲನಾದರೆ ಹೆಚ್ಚುವರಿ 6 ತಿಂಗಳ ಸಜೆ ವಿಧಿಸಿದ್ದಾರೆ.

ಬಂಟ್ವಾಳ ಉಪವಿಭಾಗದ ಪೊಲೀಸ್‌ ಉಪಾಧೀಕ್ಷಕ ಪ್ರತಾಪ್‌ಸಿಂಗ್‌ ಥೋರಾಟ್‌ ಅವರು ತನಿಖೆ ನಡೆಸಿ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಪ್ರಾಸಿಕ್ಯೂಷನ್‌ ಪರ ಈ ಹಿಂದಿನ ವಿಶೇಷ ಸರಕಾರಿ ಅಭಿಯೋಜಕಿ ಜ್ಯೋತಿ ಪ್ರಮೋದ ನಾಯಕ್‌ ಅವರು ಸಾಕ್ಷಿಗಳ ವಿಚಾರಣೆ ನಡೆಸಿ ವಾದ ಮಂಡಿಸಿದ್ದರು. ಅನಂತರ ವಿಶೇಷ ಸರಕಾರಿ ಅಭಿಯೋಜಕಿ ಸಹನಾ ದೇವಿ ಬೋಳೂರು ಅವರು ವಾದ ನಡೆಸಿದ್ದರು.

ಟಾಪ್ ನ್ಯೂಸ್

ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

Naxal: ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

1-nurul

BPL;ಅಂತಿಮ ಓವರಿನಲ್ಲಿ 30 ರನ್‌ ಸಿಡಿಸಿದ ನುರುಲ್‌

b-l-santhosh

BJP; ಅಮಿತ್‌ ಶಾ ಹೇಳಿಕೆ ಪರ ನಿಲ್ಲಲು ಸಂತೋಷ್‌ ಸೂಚನೆ

California: ಹತ್ತೇ ಕಿ.ಮೀ. ದೂರದಲ್ಲಿ ಧಗಧಗಿಸುತ್ತಿತ್ತು ಕಾಳ್ಗಿಚ್ಚು !

California: ಹತ್ತೇ ಕಿ.ಮೀ. ದೂರದಲ್ಲಿ ಧಗಧಗಿಸುತ್ತಿತ್ತು ಕಾಳ್ಗಿಚ್ಚು !

1-aaadf

Afghanistan ವಾಗ್ಧಾನ; ಭಾರತ ವಿರೋಧಿ ಚಟುವಟಿಕೆಗೆ ಅವಕಾಶ ಇಲ್ಲ

1-indi

INDIA Bloc ಖತಂ?: ದಿಲ್ಲಿ ವಿಧಾನಸಭಾ ಚುನಾವಣೆ ಕಾವೇರಿರುವಾಗಲೇ ಬಿರುಕು

baby 2

Russia; 25ರ ವಿದ್ಯಾರ್ಥಿನಿ ಮಗು ಹೆತ್ತರೆ 81,000 ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vaman

Mangaluru: ವಾಮಂಜೂರು ಗುಂಡು ಹಾರಾಟ ಪ್ರಕರಣ: ಇಬ್ಬರು ಕುಖ್ಯಾತರ ಬಂಧನ

Mangaluru: ಹೈಡ್ರೋ ವೀಡ್‌ ಗಾಂಜಾ ಸಹಿತ ಓರ್ವನ ಬಂಧನ

Mangaluru: ಹೈಡ್ರೋ ವೀಡ್‌ ಗಾಂಜಾ ಸಹಿತ ಓರ್ವನ ಬಂಧನ

Mangaluru ಕಮಿಷನ್‌ ಆಮಿಷವೊಡ್ಡಿ 9 ಲ. ರೂ. ವಂಚನೆMangaluru ಕಮಿಷನ್‌ ಆಮಿಷವೊಡ್ಡಿ 9 ಲ. ರೂ. ವಂಚನೆ

Mangaluru ಕಮಿಷನ್‌ ಆಮಿಷವೊಡ್ಡಿ 9 ಲ. ರೂ. ವಂಚನೆ

Kulai: ನೀರುಪಾಲಾದವರ ಶವ ಹಸ್ತಾಂತರ

Kulai: ನೀರುಪಾಲಾದವರ ಶವ ಹಸ್ತಾಂತರ

Mangaluru ಆನ್‌ಲೈನ್‌ ವಂಚನೆ: ಕೇರಳದ ಯುವಕ ಸೆರೆ

Mangaluru ಆನ್‌ಲೈನ್‌ ವಂಚನೆ: ಕೇರಳದ ಯುವಕ ಸೆರೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

Naxal: ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

1-nurul

BPL;ಅಂತಿಮ ಓವರಿನಲ್ಲಿ 30 ರನ್‌ ಸಿಡಿಸಿದ ನುರುಲ್‌

b-l-santhosh

BJP; ಅಮಿತ್‌ ಶಾ ಹೇಳಿಕೆ ಪರ ನಿಲ್ಲಲು ಸಂತೋಷ್‌ ಸೂಚನೆ

California: ಹತ್ತೇ ಕಿ.ಮೀ. ದೂರದಲ್ಲಿ ಧಗಧಗಿಸುತ್ತಿತ್ತು ಕಾಳ್ಗಿಚ್ಚು !

California: ಹತ್ತೇ ಕಿ.ಮೀ. ದೂರದಲ್ಲಿ ಧಗಧಗಿಸುತ್ತಿತ್ತು ಕಾಳ್ಗಿಚ್ಚು !

1-aaadf

Afghanistan ವಾಗ್ಧಾನ; ಭಾರತ ವಿರೋಧಿ ಚಟುವಟಿಕೆಗೆ ಅವಕಾಶ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.