ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ : ರೂಪಾಲಿ ನಾಯ್ಕ್
Team Udayavani, Mar 19, 2021, 8:28 PM IST
ಕಾರವಾರ : ಗೋವಾ ಗಡಿ ಭಾಗದಲ್ಲಿರುವ ಉತ್ತರ ಕನ್ನಡ ಜಿಲ್ಲೆಯ ಪ್ರವಾಸೊದ್ಯಮಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದ್ದು, ಈ ನಿಟ್ಟಿನಲ್ಲಿ ಕಾಂಡ್ಲಾ ಸಸ್ಯಗಳಿರುವ ನಡುಗಡ್ಡೆಯನ್ನು ಪ್ರವಾಸಿ ತಾಣ ನಿರ್ಮಾಣ ಮಾಡಲಾಗಿದೆ ಎಂದು ಶಾಸಕಿ ರೂಪಾಲಿ ನಾಯ್ಕ್ ಹೇಳಿದರು.
ಅರಣ್ಯ ಇಲಾಖೆಯ ಕೆನರಾ ವೃತ್ತ ಹಾಗೂ ಕಾರವಾರ ಅರಣ್ಯ ವಲಯದಿಂದ ತಾಲೂಕಿನ ಕೊಡಿಭಾಗದ ಕಾಳಿಮಾತಾ ನಡುಗಡ್ಡೆಯಲ್ಲಿ ಶುಕ್ರವಾರ ಆಯೋಜಿಸಿದ್ದ ‘ಕಾಂಡ್ಲಾ ನಡಿಗೆ’ ಪಥದ ಉದ್ಘಾಟನೆ ಹಾಗೂ ಅರಣ್ಯದಂಚಿನ ಗ್ರಾಮಸ್ಥರಿಗೆ ಅಡುಗೆ ಅನಿಲ ವಿತರಣೆ ಮತ್ತು ಮೀನುಗಾರರಿಗೆ ಬಲೆ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಅರಣ್ಯ ಇಲಾಖೆ ಕಾಂಡ್ಲಾ ಸಸ್ಯ ಸಂರಕ್ಷಣೆ ಮಾಡುತ್ತಿರುವುದು ಶ್ಲಾಘನೀಯ. ಜನಪ್ರತಿನಿಧಿಗಳು ಮತ್ತು ಅರಣ್ಯ ಅಧಿಕಾರಿಗಳು ಅರಣ್ಯ ಸಂರಕ್ಷಣೆಯೊಂದಿಗೆ ಪ್ರವಾಸೋದ್ಯಮ ಅಭಿವೃದ್ಧಿ ಪಡಿಸುತ್ತಿದ್ದಾರೆ. ಕಾಳಿ ಮಾತಾ ನಡುಗಡ್ಡೆ ಅತ್ಯುಂತ ಮಹತ್ವದ ಸ್ಥಾನ ಪಡೆದಿದ್ದು, ಪ್ರವಾಹ ಪರಿಸ್ಥಿತಿ ಬಂದರೂ ಮುಳುಗಡೆಯಾಗದ ಸ್ಥಳವಾಗಿದೆ. ಅರಣ್ಯ ಇಲಾಖೆ ಸಿಬ್ಬಂದಿಗಳು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕಾಳಿ ಮಾತಾ ನಡುಗಡ್ಡೆ ಹಾಗೂ ಕೂರ್ಮಗಡ ಜಾತ್ರೆ ಸಂದರ್ಭದಲ್ಲಿ ನಡೆಯುವಂತಹ ಅವಗಡ ತಪ್ಪಿಸಲು ಜಟ್ಟಿ ನಿರ್ಮಾಣ ಮಾಡಲಾಗುವುದು. ಈ ನಿಟ್ಟಿನಲ್ಲಿ ಈಗಾಗಲೇ ಕೆಲವು ಕಾರ್ಯಗಳು ಪ್ರಾರಂಭವಾಗಿವೆ. ಮುಂಬರುವ ದಿನಗಳಲ್ಲಿ ಆದಷ್ಟು ಬೇಗ ಜನರಿಗೆ ಸೇವೆ ಒದಗೊಸಲಾಗುವುದು ಎಂದರು.
ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದಾಗಿನಿಂದ ಈವರೆಗೆ ಉಜ್ವಲ ಯೋಜನೆಯಡಿ ಸುಮಾರು ೮ ಸಾವೀರ ಕೋಟಿಯಷ್ಟು ಗ್ಯಾಸ್ ವಿತರಣೆ ಮಾಡಲಾಗಿದೆ. ಇದರಿಂದ ಸಾಕಷ್ಟು ಅರಣ್ಯ ಸಂಪತ್ತು ಸಂರಕ್ಷಣೆಯಾಗಿದೆ ಎಂದು ಅವರು ಹೇಳಿದರು.
ಮೀನು ಸಂತತಿ ವೃದ್ಧಿ, ಹೆಚ್ಚಿನ ಪ್ರಮಾಣದಲ್ಲಿ ಆಮ್ಲಜನಕ ಬಿಡುಗಡೆ, ಮಣ್ಣಿನ ಸವಕಳಿ ನಿಯಂತ್ರದಂತ ಉಪಯುಕ್ತತೆಗೆ ಕಾಂಡ್ಲಾ ಸಸ್ಯಗಳು ತುಂಬಾ ಸಹಕಾರಿಯಾಗಿವೆ. ಹೀಗಾಗಿ ಅರಣ್ಯ ಇಲಾಖೆ ಅಧಿಕಾರಿಗಳು ಹೆಚ್ಚಿನ ಮುತುವರ್ಜಿಯಿಂದ ಕಾಂಡ್ಲಾ ಸಂಸ್ಯಗಳಿರುವ ಪ್ರದೇಶವನ್ನು ಪ್ರವಾಸಿ ತಾಣಗಳನ್ನಾಗಿ ಪರಿವರ್ತಿಸುತ್ತಿದ್ದಾರೆ. ಹೀಗಾಗಿ ಪ್ರತಿಯೊಬ್ಬ ನಾಗರಿಕರು ಜವಾಬ್ದಾರಿಯುತವಾಗಿ ನಡೆದುಕೊಳ್ಳುವ ಮೂಲಕ ಈ ಕಾಂಡ್ಲಾ ನಡಿಗೆ ಪಥದ ಸದುಪಯೋಗ ಪಡೆದುಕೊಳ್ಳಬೇಕು.
ಅರಣ್ಯ ಅಧಿಕಾರಿಗಳು ಸಾರ್ವಜನಿಕರೊಂದಿಗೆ ಉತ್ತಮವಾಗಿ ವರ್ತಿಸಬೇಕು. ಸಾರ್ವಜನಿಕರ ಸಹಕಾರದೊಂದಿಗೆ ಇಂತಹ ಕಾರ್ಯಗಳಿಗೆ ಮುಂದಾದರೆ ಯೋಜನೆಗಳು ಯಶಸ್ವಿಯಾಗುತ್ತವೆ ಎಂದರು.
ಕಾರವಾರ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ವಸಂತ ರೆಡ್ಡಿ ಮಾತನಾಡಿ, ಜಿಲ್ಲೆಯಲ್ಲಿ ಕಾಂಡ್ಲಾ ಸಸ್ಯಗಳಿರುವ ಪ್ರದೇಶಗಳಲ್ಲಿ ಕಾಳಿಮಾತಾ ನಡುಗಡ್ಡೆಯೂ ಒಂದಾಗಿದೆ. ಈ ನಡುಗಡ್ಡಯಲ್ಲಿ ಕಾಂಡ್ಲಾ ನಡಿಗೆ ಪಥ ನಿರ್ಮಿಸಲು ಕಳೆದ ಒಂದು ವರ್ಷದಿಂದ ನಿರಂತರವಾಗಿ ಶ್ರಮಿಸಲಾಗಿದೆ. ಪರಿಸರದಲ್ಲಿ ಕಾಂಡ್ಲಾ ಅಳಿವೆಗಳು ಅತ್ಯಂತ ಮಹತ್ವದ ಪಾತ್ರ ನಿರ್ವಹಿಸುತ್ತಿದ್ದು, ನದಿಗಳು ಮತ್ತು ಸಮುದ್ರ ಒಟ್ಟಿಗೆ ಸೇರುವಂತ ಪ್ರದೇಶದಲ್ಲಿ ಮಾತ್ರ ಕಂಡುಬರುತ್ತವೆ. ಒಟ್ಟಾರೆಯಾಗಿ ೩೨೦೦ ಹೆಕ್ಟರ್ ಪ್ರದೇಶವಿದ್ದು, ೨೪೦ ಮೀಟರ್ ಉದ್ದದ ಕಾಂಡ್ಲಾ ನಡಿಗೆ ಪಥ ನಿರ್ಮಿಸಲಾಗಿದೆ. ಪರಿಸರ ಪ್ರವಾಸೋದ್ಯಮ ಯೋಜನೆಯಡಿ ಇದರ ನಿರ್ವಹಣೆ ನಡೆಯಲಿದೆ. ಉತ್ತಮ ಪ್ರವಾಸಿ ತಾಣ ಮಾಡುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಪ್ರತಿಯೊಬ್ಬ ನಾಗರಿಕರೂ ಅತ್ಯಂತ ಜವಾಬ್ದಾರಿಯಿಂದ ನಡೆದುಕೊಳ್ಳುವ ಮೂಲಕ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ನಗರ ಸಭೆ ಅಧ್ಯಕ್ಷ ನಿತಿನ್ ಪಿಕಳೆ ಮಾತನಾಡಿ, ವಿದ್ಯಾರ್ಥಿಗಳಿಗೆ, ಸಂಶೋಧಕರಿಗೆ ಹಾಗೂ ವಿಜ್ಞಾನಿಗಳಿಗೆ ಅಧ್ಯಯನ ಮಾಡಲು ಕಾಳಿಮಾತಾ ನಡುಗಡ್ಡೆ ಉತ್ತಮ ಪ್ರದೇಶ ಹಾಗೂ ಪ್ರವಾಸಿತಾಣವಾಗಿದೆ.ಸರಕಾರದಿಂದ ಸಿಗುವಂತ ಅಡುಗೆ ಅನಿಲ ಉಪಯೋಗಿಸುವ ಬಗ್ಗೆ ಜನರಿಗೆ ಜಾಗೃತಿ ಮೂಡಿಸಬೇಕಿದೆ ಎಂದರು.
ಕಾಳಿಮಾತಾ ಮಂದಿರದ ಧರ್ಮಾಧಿಕಾರಿ ವಿಷ್ಣು ಸಾವಂತ ಬೋಸ್ಲೆ ಸ್ವಾಮೀಜಿ, ನಗರಸಭೆಯ ಉಪಾಧ್ಯಕ್ಷ ಪ್ರಕಾಶ ಪಿ. ನಾಯ್ಕ್, ಕಾರವಾರ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶರಣ ಕುಮಾರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಅರಣ್ಯ ಇಲಾಖೆಯಿಂದ ಅರಣ್ಯದಂಚಿನ ಗ್ರಾಮಸ್ಥರಿಗೆ ಕೊಡಮಾಡುವ ಅಡುಗೆ ಅನಿಲ ಹಾಗೂ ಮೀನುಗಾರರಿಗೆ ಬಲೆಯನ್ನು ಶಾಸಕಿ ರೂಪಾಲಿ ನಾಯ್ಕ್ ವಿತರಣೆ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ
Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ
MUST WATCH
ಹೊಸ ಸೇರ್ಪಡೆ
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!
Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್
Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ
Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.