Gnanavapi: ಜ್ಞಾನವಾಪಿ ನೆಲ ಮಹಡಿ ಸಮೀಕ್ಷೆ ಬೇಡಿಕೆ: 15ರಿಂದ ವಿಚಾರಣೆ
ಹಿಂದೂ ಪರ ವಕೀಲರ ಘೋಷಣೆ
Team Udayavani, Feb 7, 2024, 12:05 AM IST
ಲಕ್ನೋ: ವಾರಾಣಸಿಯಲ್ಲಿರುವ ಜ್ಞಾನವಾಪಿ ಮಸೀದಿಯ ನೆಲ ಮಹ ಡಿಯ ಬಗ್ಗೆ ಕೂಡ ಭಾರತೀಯ ಪುರಾತತ್ವ ಇಲಾಖೆ (ಎಎಸ್‌ಐ) ಮೂಲಕ ಸಮೀಕ್ಷೆ ನಡೆಸಬೇಕು ಎಂಬ ಬೇಡಿಕೆಗೆ ಸಂಬಂಧಿಸಿದಂತೆ ಫೆ.15ರಿಂದ ವಿಚಾರಣೆ ನಡೆಯಲಿದೆ. ಈ ಬಗ್ಗೆ ವಾರಾಣಸಿಯ ಜಿಲ್ಲಾ ಕೋರ್ಟ್ ಮಂಗಳವಾರ ತೀರ್ಮಾನ ಪ್ರಕಟಿಸಿದ್ದಾರೆ.
ಹಿಂದೂಗಳ ಪರ ವಕೀಲ ಮದನ್ ಮೋಹನ್ ಯಾದವ್ ಮಾತನಾಡಿ ಜ್ಞಾನವಾಪಿ ಮಸೀದಿಯ ನೆಲಮಹಡಿ ಯಲ್ಲಿ ರಹಸ್ಯ ಕೊಠಡಿಗಳು ಇವೆ. ಅವುಗಳ ಬಗ್ಗೆಯೂ ಸಮೀಕ್ಷೆ ನಡೆಸಬೇ ಕಾಗಿದೆ ಎಂದು ಅವರು ವಾದಿಸಿದ್ದಾರೆ. ಹೀಗಾಗಿ, ನಮ್ಮ ಅರ್ಜಿಯನ್ನು ಜಿಲ್ಲಾ ಕೋರ್ಟ್ ಪರಿಗಣಿಸಿದ್ದು, ಫೆ.15ರಂದು ವಿಚಾರಣೆ ನಡೆಸಲಿದೆ ಎಂದು ಹೇಳಿದ್ದಾರೆ.
ಹೈಕೋರ್ಟಲ್ಲಿ ವಿಚಾರಣೆ: ನಡುವೆ, ನೆಲಮಹಡಿಯಲ್ಲಿ ಹಿಂದೂಗಳಿಗೆ ಪ್ರಾರ್ಥನೆ ಸಲ್ಲಿಸಲು ಅವಕಾಶ ನೀಡಿ ದ್ದನ್ನು ಪ್ರಶ್ನಿಸಿ ಮಸೀದಿ ಆಡಳಿತ ಮಂಡಳಿ ಅಲ ಹಾಬಾದ್ ಹೈಕೋರ್ಟ್‌ನಲ್ಲಿ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ ನಡಸಲಾಯಿತು. ಮಸೀದಿ ಆಡಳಿತ ಮಂಡಳಿ ವಕೀಲರು ವಾದ ಮಂಡಿಸಿ ಜಿಲ್ಲಾ ನ್ಯಾಯಾಲಯವು ತರಾತುರಿಯಲ್ಲಿ ಆದೇಶ ನೀಡಿದೆ ಎಂದರು. ಹಿಂದೂ ಅರ್ಜಿದಾರರ ಪರವಾಗಿ ವಿಷ್ಣು ಶಂಕರ್ ಜೈನ್ ಅವರು ಕೋರ್ಟ್‌ಗೆ ಸಲ್ಲಿಕೆಗಳನ್ನು ನೀಡಿದ್ದು, ಜಿಲ್ಲಾ ನ್ಯಾಯಾಲಯವು ಜ. 17 ರಂದೇ ರಿಸೀವರ್ ನೇಮಕಕ್ಕೆ ಆದೇಶ ನೀಡಲಾಗಿತ್ತು. ಬಳಿಕ ಜ.31ರಂದು ತೀರ್ಪು ನೀಡಲಾಗಿದೆ. ಇದು ತರಾತುರಿಯ ನಿರ್ಣಯವಲ್ಲ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
Mumbai; ಚುನಾವಣೆಗೆ ಏಕಾಂಗಿ ಸ್ಪರ್ಧೆ: ಉದ್ಧವ್ ಶಿವಸೇನೆ ಇಂಗಿತ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.