ಸರ್ಕಾರಕ್ಕೆ “ನ್ಯಾಯಾಂಗ ನಿಂದನೆ’ಎಚ್ಚರಿಕೆ

ಸರ್ಕಾರಿ ಹಾಸ್ಟೆಲ್‌ಗ‌ಳ ಸಮೀಕ್ಷೆ: ಕೋರ್ಟ್‌ ಆದೇಶ ಪಾಲಿಸದ ಸರ್ಕಾರ

Team Udayavani, Dec 7, 2019, 4:44 AM IST

sw-48

ಬೆಂಗಳೂರು: ಹಿಂದುಳಿದ ವರ್ಗದ ವಿದ್ಯಾರ್ಥಿಗಳ ಉಚಿತ ವಸತಿ ನಿಲಯಗಳು ಸೇರಿ ರಾಜ್ಯದ ಸರ್ಕಾರಿ ಹಾಸ್ಟೆಲ್‌ಗಳಲ್ಲಿನ ಮೂಲಸೌಕರ್ಯಗಳು ಮತ್ತು ಸುರಕ್ಷತಾ ಸಮೀಕ್ಷೆ ನಡೆಸುವ ಬಗ್ಗೆ ಕೋರ್ಟ್‌ ಆದೇಶ ಪಾಲಿಸಲು ವಿಫ‌ಲವಾದ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಹೈಕೋರ್ಟ್‌, ನ್ಯಾಯಾಂಗ ನಿಂದನೆ ಆರೋಪದಡಿ ಏಕೆ ಕ್ರಮ ಜರುಗಿಸಬಾರದು ಎಂಬ ಬಗ್ಗೆ ವಾರದಲ್ಲಿ ಉತ್ತರಿಸುವಂತೆ ನಿರ್ದೇಶನ ನೀಡಿದೆ.

ಕೊಪ್ಪಳ ನಗರದ ಬನ್ನಿಕಟ್ಟಿ ಬಳಿಯ ಬಿಸಿಎಂ ಹಾಸ್ಟೆಲ್‌ನಲ್ಲಿ ವಿದ್ಯುತ್‌ ಅವಘಡ ಸಂಭವಿಸಿ ಐವರು ವಿದ್ಯಾರ್ಥಿಗಳು ಮೃತಪಟ್ಟ ಘಟನೆ ಆಧರಿಸಿ ಹೈಕೋರ್ಟ್‌ ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಶುಕ್ರವಾರ ಹಿರಿಯ ನ್ಯಾ. ರವಿ ಮಳಿಮಠ ಹಾಗೂ ನ್ಯಾ. ಎಂ.
ನಾಗಪ್ರಸನ್ನ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಂದಿತ್ತು. ಆಗ, ಸರ್ಕಾರಿ ಹಾಸ್ಟೆಲ್‌ಗ‌ಳಲ್ಲಿನ ಮೂಲಸೌಕರ್ಯಗಳು ಹಾಗೂ ಅಲ್ಲಿನ ಸುರಕ್ಷತಾ ವ್ಯವಸ್ಥೆಯ ಬಗ್ಗೆ ಸಮೀಕ್ಷೆ
ನಡೆಸಬೇಕು. ಇದಕ್ಕಾಗಿ ಜಿಲ್ಲಾ ಮಟ್ಟದ ಸಮಿತಿ ರಚಿಸಬೇಕು ಎಂದು ಅ.30ರಂದು ನೀಡಿದ್ದ ಆದೇಶ ಪಾಲನೆ ಮಾಡದಿರುವುದನ್ನು ಗಮನಿಸಿದ ಪೀಠ, ಸರ್ಕಾರದ ನಡೆಗೆ ಅಸಮಾಧಾನ ವ್ಯಕ್ತಪಡಿಸಿತು. ಆದೇಶ ಪಾಲಿಸದಿರುವುದಕ್ಕೆ “ನ್ಯಾಯಾಂಗ ನಿಂದನೆ ಆರೋಪ’ ಪ್ರಕರಣದಡಿ ಏಕೆ ಕ್ರಮ
ಜರುಗಿಸಬಾರದು ಎಂಬುದರ ಕುರಿತು ವಾರದಲ್ಲಿ ಉತ್ತರಿಸುವಂತೆ ಸರ್ಕಾರಕ್ಕೆ ಸೂಚಿಸಿತು.

ಹಿಂದುಳಿದ ವರ್ಗದ ವಿದ್ಯಾರ್ಥಿಗಳ ಉಚಿತ ವಸತಿ ನಿಲಯಗಳಲ್ಲಿ ಒದಗಿಸಲಾಗುತ್ತಿರುವ ಮೂಲಸೌಕರ್ಯಗಳ ಸ್ಥಿತಿಗತಿ ಹೇನಿದೆ. ಹಾಸ್ಟೆಲ್‌ಗ‌ಳನ್ನು ಸ್ವಂತ, ಸರ್ಕಾರಿ ಕಟ್ಟಡಗಳಲ್ಲಿ ನಡೆಸಲಾಗುತ್ತಿದೆಯೇ ಅಥವಾ ಬಾಡಿಗೆ ಕಟ್ಟಡದಲ್ಲಿದೆಯೇ?. ಆ ಹಾಸ್ಟೆಲ್‌ಗ‌ಳಲ್ಲಿ ಏನೆಲ್ಲಾ ಸುರಕ್ಷತಾ
ಕ್ರಮಗಳನ್ನು ಅಳವಡಿಸಿಕೊಳ್ಳಲಾಗಿದೆ. ಹಾಸ್ಟೆಲ್‌ ಪ್ರವೇಶಮಿತಿ, ವಿದ್ಯಾರ್ಥಿಗಳ ಸಂಖ್ಯೆ ಸೇರಿದಂತೆ ಸಮಗ್ರ ಸಮೀಕ್ಷೆ ನಡೆಸಲು ರಾಜ್ಯದ ಎಲ್ಲ 30 ಜಿಲ್ಲೆಗಳಲ್ಲಿ ಸಮಿತಿಗಳನ್ನು ರಚಿಸಲು ಸೂಚಿಸಿತ್ತು.

ಅಲ್ಲದೇ, ಹಿಂದುಳಿದ ವರ್ಗಗಳ ಇಲಾಖೆ ಅಧೀನದಲ್ಲಿರುವ 2,438 ಹಾಸ್ಟೆಲ್‌ಗ‌ಳ ಪೈಕಿ 1,031
ಹಾಸ್ಟೆಲ್‌ಗ‌ಳು ಬಾಡಿಗೆ ಕಟ್ಟಡದಲ್ಲಿ ಇರುವ ಅಂಶವನ್ನು ಗಮನಿಸಿದ್ದ ನ್ಯಾಯಪೀಠ, ಹಾಸ್ಟೆಲ್‌ ಮಂಜೂರಾತಿ, ಹಾಗೂ ಅದನ್ನು ನಡೆಸಲು ಬಾಡಿಗೆ ಕಟ್ಟಡ ಪಡೆಯಬೇಕಾದರೆ, ಸೌಲಭ್ಯ ಒದಗಿಸಲು, ಸುರಕ್ಷತೆ ಕ್ರಮಕ್ಕೆ ನಿರ್ದಿಷ್ಠ ಮಾನದಂಡಗಳು ಇವೆಯೇ, ಇದ್ದರೆ ಮಾಹಿತಿ ಸಲ್ಲಿಸಲು
ತಿಳಿಸಿತ್ತು. ಅಂಥ ನಿಯಮಗಳಿಲ್ಲದಿದ್ದರೆ ತಿಂಗಳಲ್ಲಿ ಮಾನದಂಡ ಅಥವಾ ನಿಯಮ ರೂಪಿಸಲು ಕ್ರಮ
ಕೈಗೊಳ್ಳುವಂತೆ ಆದೇಶಿಸಿತ್ತು. ಆದರೆ, ಕೋರ್ಟ್‌ ಆದೇಶ ಪಾಲಿಸುವಲ್ಲಿ ಸರ್ಕಾರ ವಿಫ‌ಲವಾಗಿದ್ದು, ಕೋರ್ಟ್‌ ಅಸಮಾಧಾನ ವ್ಯಕ್ತಪಡಿಸಿದೆ.

ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌ ಜಾರಿ
ಬೆಂಗಳೂರು: ರಾಜ್ಯದ ಅನುದಾನರಹಿತ ಹಾಗೂ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳಿಗೆ 2020-21ನೇ ಸಾಲಿನ 1-10ನೇ ತರಗತಿವರೆಗಿನ ಪಠ್ಯಪುಸ್ತಕಗಳನ್ನು ಖರೀದಿಸಲು ಒಟ್ಟು ಮೊತ್ತದ ಶೇ.25 ಮುಂಗಡವಾಗಿ ಕಡ್ಡಾಯ ಪಾವತಿಸಬೇಕೆಂದು ಸೂಚಿಸಿರುವ ಆದೇಶ ಪ್ರಶ್ನಿಸಿ ಸಲ್ಲಿಸಲಾದ ಅರ್ಜಿ ಸಂಬಂಧ ಹೈಕೋರ್ಟ್‌ ಸರ್ಕಾರಕ್ಕೆ ನೋಟಿಸ್‌ ಜಾರಿಗೊಳಿಸಿದೆ. ಈ ಕುರಿತಂತೆ ರಾಜ್ಯ ಅಲ್ಪ ಸಂಖ್ಯಾತ
ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಒಕ್ಕೂಟದ ಅಧ್ಯಕ್ಷ ಸಿ.ಆರ್‌. ಮೊಹಮ್ಮದ್‌ ಇಮ್ತಿಯಾಜ್‌ ಸಲ್ಲಿಸಿದ್ದ ಅರ್ಜಿಯು ನ್ಯಾ. ಎಸ್‌. ಸುಜಾತ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಂದಿತ್ತು.
ವಾದ ಆಲಿಸಿದ ನ್ಯಾಯಪೀಠ, ಪ್ರತಿವಾದಿಗಳಾದ ಶಿಕ್ಷಣ ಇಲಾಖೆ ಕಾರ್ಯದರ್ಶಿ, ಆಯುಕ್ತರು ಹಾಗೂ
ಕರ್ನಾಟಕ ರಾಜ್ಯ ಪಠ್ಯಪುಸ್ತಕ ಸಂಘದ ವ್ಯವಸ್ಥಾಪಕ ನಿರ್ದೇಶಕರಿಗೆ ನೋಟಿಸ್‌ ಜಾರಿಗೊಳಿಸಿ ಆಕ್ಷೇಪಣೆಗಳನ್ನು ಸಲ್ಲಿಸಲು ನಿರ್ದೇಶನ ನೀಡಿತು. ಅಲ್ಲದೆ, ಸುತ್ತೋಲೆ ಬಗ್ಗೆ ಮುಂದಿನ ವಿಚಾರಣೆ ವೇಳೆ ಮಾಹಿತಿ ನೀಡುವಂತೆ ಸೂಚಿಸಿತು.

ಅರ್ಜಿದಾರರ ಪರ ವಾದ ಮಂಡಿಸಿದ ವಕೀಲ ಜಿ.ಆರ್‌. ಮೋಹನ್‌, ರಾಜ್ಯದ ಅನುದಾನರಹಿತ ಹಾಗೂ
ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳಿಗೆ 2020-21ನೇ ಸಾಲಿನ 1- 10ನೇ ತರಗತಿವರೆಗಿನ ಪಠ್ಯಪುಸ್ತಕಗಳನ್ನು ಖರೀದಿಸಲು ಒಟ್ಟು ಮೊತ್ತದ ಶೇ.25 ಮುಂಗಡ ಹಣ ಪಾವತಿಸಬೇಕು ಎಂದು ಕರ್ನಾಟಕ ರಾಜ್ಯ ಪಠ್ಯಪುಸ್ತಕ ಸಂಘ 2019ರ ಅ.31ರಂದು ಹೊರಡಿಸಿರುವ ಆದೇಶ ಕಾನೂನು ಬಾಹಿರವಾದುದು ಎಂದರು.

ಅದೇ ರೀತಿ ಪುಸಕ್ತಗಳಿಗೆ ಬೇಡಿಕೆ ಸಲ್ಲಿಸುವಾಗಲೇ ಶೇ.10 ಹಣ ಪಾವತಿಸಬೇಕೆಂದು ಸಂಘವು ಎಲ್ಲ ಶಾಲೆಗಳಿಗೂ ಎಸ್‌ಎಂಎಸ್‌ ಸಂದೇಶ ಕಳುಹಿಸಿದೆ. ಆ ಮೂಲಕ ಪಠ್ಯಪುಸ್ತಕ ಸಂಘವು ಶಾಲೆಗಳ ಮೇಲೆ ಒತ್ತಡ ಹೇರುತ್ತಿದೆ. ಈ ರೀತಿ ಮುಂಗಡ ಹಣ ಪಾವತಿಸಬೇಕಾಗುತ್ತದೆ ಎಂಬ ಬಗ್ಗೆ ಮೊದಲೇ
ಶಾಲೆಗಳ ಜೊತೆ ಚರ್ಚೆ ನಡೆಸಿಲ್ಲ. ಹಾಗಾಗಿ ಸಂಘದ ಕ್ರಮ ನಿಯಮ ಬಾಹಿರ ಎಂದು ಹೇಳಿದ್ದಾರೆ.
ಈವರೆಗೆ ಸರ್ಕಾರ ನಿಗದಿಪಡಿಸಿರುವ ಪಠ್ಯಗಳು ಖಾಸಗಿ ಪುಸ್ತಕ ಮಾರಾಟ ಮಳಿಗೆಗಳಲ್ಲಿ ದೊರಕುತ್ತಿ
ದ್ದವು. ಇದೀಗ ಸಂಘ ಮೊದಲೇ ಬೇಡಿಕೆ ಸಲ್ಲಿಸಿ ಮುಂಗಡ ಹಣ ಪಾವತಿ ಮಾಡದಿದ್ದರೆ ಪುಸಕ್ತಗಳು
ದೊರಕದಂತೆ ಮಾಡುವ ಬೆದರಿಕೆಯೊಡ್ಡುತ್ತಿದೆ. ಮುಂಗಡ ಹಣ ಕೇಳಲು ಸಂಘಟಕಕ್ಕೆ ಅಧಿಕಾರವಿಲ್ಲ.
ಹಾಗಾಗಿ, 2019ರ ಅ.31ರಂದು ಸಂಘವು ಹೊರಡಿಸಿರುವ ಸುತ್ತೋಲೆ ರದ್ದುಗೊಳಿಸಬೇಕು ಎಂದು
ಅರ್ಜಿದಾರರು ಕೋರಿದ್ದಾರೆ.

ಟಾಪ್ ನ್ಯೂಸ್

Kharajola

Contracter Case: ನಿಷ್ಪಕ್ಷ ತನಿಖೆಗೆ ಸಚಿವರು, ಸಿಎಂ ರಾಜೀನಾಮೆ ನೀಡಲಿ: ಗೋವಿಂದ ಕಾರಜೋಳ

Udupi: ಗೀತಾರ್ಥ ಚಿಂತನೆ-140: ಮಕ್ಕಳಲ್ಲಿ “ಇಗೋ’ ಏರಿಕೆ, ಪಾಲಕರಲ್ಲಿ ಗೌರವ ಇಳಿಕೆ

Udupi: ಗೀತಾರ್ಥ ಚಿಂತನೆ-140: ಮಕ್ಕಳಲ್ಲಿ “ಇಗೋ’ ಏರಿಕೆ, ಪಾಲಕರಲ್ಲಿ ಗೌರವ ಇಳಿಕೆ

South Korea Plane Crash: ಛಿದ್ರಗೊಂಡ ದೇಹಗಳು, ಕೊನೇ ಸಂದೇಶ…

South Korea Plane Crash: ಛಿದ್ರಗೊಂಡ ದೇಹಗಳು, ಕೊನೇ ಸಂದೇಶ…

Israel ಪ್ರಧಾನಿ ಬೆಂಜಮಿನ್‌ ನೆತನ್ಯಾಹುಗೆ ಪ್ರಾಸ್ಟೇಟ್‌ ಶಸ್ತ್ರಚಿಕಿತ್ಸೆ

Israel ಪ್ರಧಾನಿ ಬೆಂಜಮಿನ್‌ ನೆತನ್ಯಾಹುಗೆ ಪ್ರಾಸ್ಟೇಟ್‌ ಶಸ್ತ್ರಚಿಕಿತ್ಸೆ

Kazakhstan: ಕಜಕ್‌ ವಿಮಾನವನ್ನು ರಷ್ಯಾವೇ ಉರುಳಿಸಿದೆ: ಅಜರ್‌ಬೈಜಾನ್‌

Kazakhstan: ಕಜಕ್‌ ವಿಮಾನವನ್ನು ರಷ್ಯಾವೇ ಉರುಳಿಸಿದೆ: ಅಜರ್‌ಬೈಜಾನ್‌

Madhya Pradesh: ಕೊಳವೆ ಬಾವಿಗೆ ಬಿದ್ದಿದ್ದ 10 ವರ್ಷದ ಬಾಲಕ ಸಾವು

Madhya Pradesh: ಕೊಳವೆ ಬಾವಿಗೆ ಬಿದ್ದಿದ್ದ 10 ವರ್ಷದ ಬಾಲಕ ಸಾವು

Rajasthan: ಕಾಂಗ್ರೆಸ್‌ ಸರಕಾರ ರಚಿಸಿದ್ದ 9 ಜಿಲ್ಲೆಗಳು ರದ್ದು

Rajasthan: ಕಾಂಗ್ರೆಸ್‌ ಸರಕಾರ ರಚಿಸಿದ್ದ 9 ಜಿಲ್ಲೆಗಳು ರದ್ದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kharajola

Contracter Case: ನಿಷ್ಪಕ್ಷ ತನಿಖೆಗೆ ಸಚಿವರು, ಸಿಎಂ ರಾಜೀನಾಮೆ ನೀಡಲಿ: ಗೋವಿಂದ ಕಾರಜೋಳ

1-yodha

Army Vehicle Tragedy:ಕೊಡಗಿನ ಗಾಯಾಳು ಯೋಧ ಚಿಕಿತ್ಸೆ ಫಲಕಾರಿಯಾಗದೆ ಸಾ*ವು

ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು

ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು

Jagdish-Shetter

Davanagere: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರದಿಂದ ಅರಾಜಕತೆ ಸೃಷ್ಟಿ: ಜಗದೀಶ್ ಶೆಟ್ಟರ್

Basavarj-horatti

ಸಿ.ಟಿ.ರವಿ-ಸಚಿವೆ ಲಕ್ಷ್ಮೀ ದೂರು ಪ್ರಕರಣ: ಪೊಲೀಸರ ವರದಿ ಬಳಿಕ ನಿಯಮಾನುಸಾರ ಕ್ರಮ: ಹೊರಟ್ಟಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kharajola

Contracter Case: ನಿಷ್ಪಕ್ಷ ತನಿಖೆಗೆ ಸಚಿವರು, ಸಿಎಂ ರಾಜೀನಾಮೆ ನೀಡಲಿ: ಗೋವಿಂದ ಕಾರಜೋಳ

police

Madikeri; ಜಾತ್ರೋತ್ಸವದ ವೇಳೆ ಗುಂಪು ಸಂಘರ್ಷ: ಕಟ್ಟೆಮಾಡು ಗ್ರಾಮದಲ್ಲಿ ನಿಷೇಧಾಜ್ಞೆ

Udupi: ಗೀತಾರ್ಥ ಚಿಂತನೆ-140: ಮಕ್ಕಳಲ್ಲಿ “ಇಗೋ’ ಏರಿಕೆ, ಪಾಲಕರಲ್ಲಿ ಗೌರವ ಇಳಿಕೆ

Udupi: ಗೀತಾರ್ಥ ಚಿಂತನೆ-140: ಮಕ್ಕಳಲ್ಲಿ “ಇಗೋ’ ಏರಿಕೆ, ಪಾಲಕರಲ್ಲಿ ಗೌರವ ಇಳಿಕೆ

accident

Kasaragod; ಬಸ್‌-ಕಾರು ಢಿಕ್ಕಿ: ಇಬ್ಬರ ಸಾವು

South Korea Plane Crash: ಛಿದ್ರಗೊಂಡ ದೇಹಗಳು, ಕೊನೇ ಸಂದೇಶ…

South Korea Plane Crash: ಛಿದ್ರಗೊಂಡ ದೇಹಗಳು, ಕೊನೇ ಸಂದೇಶ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.