Karnataka: ಸರಕಾರಿ ಕಾರ್ಯಕ್ರಮ; ಪ್ಲಾಸ್ಟಿಕ್ ಬಾಟಲ್, ಲೋಟ ನಿಷೇಧ
Team Udayavani, Sep 21, 2023, 12:50 AM IST
ಬೆಂಗಳೂರು: ಸರ್ಕಾರದ ಅಧಿಕೃತ ಸಭೆ, ಸಮಾರಂಭ ಹಾಗೂ ಸರ್ಕಾರಿ ಕಚೇರಿಗಳಲ್ಲಿ ಪ್ಲಾಸ್ಟಿಕ್ ಬಾಟಲ್ ಮತ್ತು ಲೋಟಗಳ ಬಳಕೆಯನ್ನು ನಿಷೇಧಿಸಿ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ.
2018ರಲ್ಲಿಯೇ ಇಂತಹದ್ದೊಂದು ಆದೇಶ ಹೊರಡಿಸಲಾಗಿದ್ದರೂ ಇದರ ಪಾಲನೆ ಆಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಸರ್ಕಾರಿ ಹಾಗೂ ಸರ್ಕಾರಿ ಸ್ವಾಮ್ಯದ ಮಂಡಳಿ, ನಿಗಮ, ವಿಶ್ವವಿದ್ಯಾನಿಲಯಗಳು ಮತ್ತು ಸರ್ಕಾರದಿಂದ ಅನುದಾನ ಪಡೆಯುವಂತಹ ಯಾವುದೇ ಸಂಸ್ಥೆಗಳ ವತಿಯಿಂದ ಏರ್ಪಡಿಸಲ್ಪಡುವ ಸಭೆ-ಸಮಾರಂಭಗಳಲ್ಲಿ ಏಕಬಳಕೆಯ ಪ್ಲಾಸ್ಟಿಕ್ ಬಾಟಲ್‌ನ ನೀರಿನ ಬಳಕೆ/ಸರಬರಾಜು ಮಾಡುವುದನ್ನು ನಿಲ್ಲಿಸಬೇಕು ಎಂದು ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಆದೇಶಿಸಿದ್ದಾರೆ. ಸಭೆ-ಸಮಾರಂಭಗಳಲ್ಲಿ ಕುಡಿಯುವ ನೀರನ್ನು ಸಂದರ್ಭಾನುಸಾರ ಶುಚಿತ್ವ ರೀತಿಯಲ್ಲಿ ಗ್ಲಾಸ್, ಸ್ಟೀಲ…, ಪೇಪರ್ ಮತ್ತಿತರ ಪ್ಲಾಸ್ಟಿಕ್ ಅಲ್ಲದ ಲೋಟಗಳಲ್ಲಿ ಸರಬರಾಜು ಮಾಡಲು ಕ್ರಮ ವಹಿಸಬೇಕು. ಜತೆಗೆ ಸಾಮೂಹಿಕ ಕುಡಿಯುವ ನೀರು ವಿತರಣಾ ವ್ಯವಸ್ಥೆಯನ್ನು ಮಾಡಬೇಕು ಎಂದು ಆದೇಶದಲ್ಲಿ ಸೂಚಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
High Court: ನಕ್ಸಲ್ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶ
ಕಸ್ತೂರಿಂಗನ್ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.