ನರೇಗಾದಡಿ ಉದ್ಯೋಗ ಸೃಷ್ಟಿಗೆ ಸರಕಾರದಿಂದ ಯೋಜನೆ: ಈಶ್ವರಪ್ಪ
Team Udayavani, Apr 13, 2020, 6:35 AM IST
ಶಿವಮೊಗ್ಗ: ದೇಶಾದ್ಯಂತ ಕೋವಿಡ್-19 ಲಾಕ್‌ಡೌನ್ ಮುಂದುವರಿದಿದೆ. ಕರ್ನಾಟಕ ದಿನೇ ದಿನೆ ಒಳ್ಳೆಯ ಪರಿಸ್ಥಿತಿಗೆ ಬರುತ್ತಿದೆ. ಕೇಂದ್ರ ಹಾಗೂ ರಾಜ್ಯ ಸರಕಾರ ಬಡವರಿಗೆ ಏನೇನು ಕೊಡಬೇಕೋ ಅದನ್ನು ತಲುಪಿಸುತ್ತಿವೆ ಎಂದು ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರಕಾರ ನರೇಗಾ ಯೋಜನೆಯಡಿ ಬಡವರಿಗೆ ಹೆಚ್ಚು ಉದ್ಯೋಗ ಕೊಡಲಿದೆ. ಅದಕ್ಕಾಗಿಯೇ ವಿಶೇಷ ಯೋಜನೆ ರೂಪಿಸಲಾಗಿದೆ. ಕಾರ್ಮಿ ಕರಿಗೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಉದ್ಯೋಗ ಕಲ್ಪಿಸಲಾಗುತ್ತದೆ ಎಂದರು.
ಕೋವಿಡ್-19 ಸಮಸ್ಯೆಯಿಂದ ಒಟ್ಟೊ ಟ್ಟಿಗೆ ಸೇರದೇ ಐದೈದು ಮಂದಿಗೆ ನಿರ್ದಿಷ್ಟ ಕೆಲಸ ಹಂಚಿಕೆ ಮಾಡಲಾಗುವುದು. ನಿಗದಿತ ಪ್ರದೇಶದಲ್ಲಿ ಅವರಿಗೆ ಉದ್ಯೋಗದ ಅವಕಾಶ ನೀಡಲಾಗಿದೆ. ಗ್ರಾಮೀಣ ಅಭಿವೃದ್ಧಿ ಇಲಾಖೆ ಹಾಗೂ ಆರ್ಟ್ ಆಫ್ ಲಿವಿಂಗ್ ಸಹಯೋಗದಲ್ಲಿ 9 ಜಿಲ್ಲೆಗಳನ್ನು ಆಯ್ಕೆ ಮಾಡಿಕೊಳ್ಳ ಲಾಗಿದೆ. ಪುಷ್ಕರಿಣಿ, ಕೆರೆ, ರಸ್ತೆಗಳ ಅಭಿವೃದ್ಧಿಗೆ ಒತ್ತು ನೀಡಲಾಗಿದೆ. ಇದಕ್ಕೆ ಕ್ರಿಯಾ ಯೋಜನೆ ರೂಪಿಸಲು ಗ್ರಾಮೀಣಾಭಿವೃದ್ಧಿ ಇಲಾಖೆ ಅಧಿ ಕಾರಿಗಳ ಜತೆ ಆರ್ಟ್ ಆಫ್ ಲಿವಿಂಗ್‌ನ ಅ ಧಿಕಾರಿಗಳು ಚರ್ಚೆ ಮಾಡಿದ್ದಾರೆ ಎಂದರು.
ಎಲ್ಲ ಗ್ರಾಮಗಳಲ್ಲಿ ಕುಡಿಯುವ ನೀರು ಮತ್ತು ನೈರ್ಮಲ್ಯ ಕಾರ್ಯಕ್ಕಾಗಿ ಕೇಂದ್ರ ದಿಂದ ಹಣ ಬಿಡುಗಡೆಯಾಗಿದ್ದು, ಪ್ರತಿ ಗ್ರಾ.ಪಂ.ಗೆ 2,700, ತಾ.ಪಂ.ಗೆ 265, ಜಿ.ಪಂ.ಗೆ 165 ಕೋಟಿ ರೂ. ಬಿಡುಗಡೆ ಆಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chamarajpete: ಕೆಚ್ಚಲು ಕೊಯ್ದ ಪ್ರಕರಣ: ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ
US Consulate: ಬೆಂಗಳೂರಲ್ಲಿ ಜ.17ಕ್ಕೆ ಅಮೆರಿಕ ದೂತಾವಾಸ ಕಚೇರಿ ಆರಂಭ
Discomfort: ಬಿಜೆಪಿ ತೊರೆಯುವರೇ ಹಾಸನ ಕ್ಷೇತ್ರದ ಮಾಜಿ ಶಾಸಕ ಪ್ರೀತಂ ಗೌಡ?
ನಗರಸಭೆ ಮತದಾನಕ್ಕೆ ಗೈರು, ಅಡ್ಡ ಮತದಾನ: ನಾಲ್ವರು ಕಾಂಗ್ರೆಸ್ ಸದಸ್ಯರ ಸದಸ್ಯತ್ವ ಅನರ್ಹ
Dharwad: ಕಟಾವಿವೆ ಬಂದಿದ್ದ 50 ಎಕರೆ ಕಬ್ಬು ಬೆಂಕಿಗಾಹುತಿ… ಕಂಗಾಲಾದ ರೈತರು
MUST WATCH
ಹೊಸ ಸೇರ್ಪಡೆ
Chamarajpete: ಕೆಚ್ಚಲು ಕೊಯ್ದ ಪ್ರಕರಣ: ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ
ಮೈಸೂರಿನ ಇನ್ಫೋಸಿಸ್ ಕ್ಯಾಂಪಸ್ ಚಿರತೆ ಸೆರೆ ಕಾರ್ಯಾಚರಣೆ ಸ್ಥಗಿತ
Hubballi: ವರೂರಿನ ನವಗ್ರಹ ತೀರ್ಥಕ್ಷೇತ್ರದಲ್ಲಿ ಮಹಾಮಸ್ತಕಾಭಿಷೇಕಕ್ಕೆ ವಿಧ್ಯುಕ್ತ ಚಾಲನೆ
Chikkaballapura: “ಈಶ’ದಲ್ಲಿ 54 ಅಡಿ ಎತ್ತರದ ತ್ರಿಶೂಲ ಲೋಕಾರ್ಪಣೆ
Chamarajpete: ಕೆಚ್ಚಲು ಕೊಯ್ದ ಕೇಸ್; 3 ಲಕ್ಷ ರೂ.ಮೌಲ್ಯದ 3 ಹಸು ಕೊಡಿಸಿದ ಸಚಿವ ಜಮೀರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.