ರಾಜ್ಯಪಾಲರ ಭಾಷಣ: ಎಚ್ಚರಿಕೆ ಮಾತಿಗೆ ನಿರ್ಧಾರ
Team Udayavani, Feb 19, 2020, 3:10 AM IST
ಬೆಂಗಳೂರು: ರಾಜ್ಯ ವಿಧಾನ ಮಂಡಲದ ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲರು ಮಾಡಿರುವ ಭಾಷಣದ ಮೇಲೆ ಎಚ್ಚರಿಕೆಯಿಂದ ಮಾತನಾಡಲು ರಾಜ್ಯ ಕಾಂಗ್ರೆಸ್ ನಾಯಕರು ನಿರ್ಧರಿಸಿದ್ದಾರೆ.
ಮಂಗಳವಾರ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಧಾನಸೌಧದಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ರಾಜ್ಯಪಾಲರ ಭಾಷಣದ ಮೇಲೆ ಚರ್ಚಿಸುವಾಗ ರಾಜ್ಯ ಸರ್ಕಾರ ಯಾವುದೇ ಹೊಸ ಯೋಜನೆಗಳನ್ನು ಘೋಷಣೆ ಮಾಡಿಲ್ಲ ಎನ್ನು ವುದನ್ನು ಎತ್ತಿ ತೋರಿಸುವುದಕ್ಕೆ ಒತ್ತು ನೀಡುವಂತೆ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.
ರಾಜ್ಯಪಾಲರು ತಮ್ಮ ಭಾಷಣದಲ್ಲಿ ಹಿಂದಿನ ಕಾಂಗ್ರೆಸ್ ಸರ್ಕಾರ ಹಾಗೂ ಜೆಡಿಎಸ್ ಕಾಂಗ್ರೆಸ್ ನೇತೃತ್ವದ ಮೈತ್ರಿ ಸರ್ಕಾರದ ಯೋಜನೆಗಳ ಬಗ್ಗೆಯೇ ಹೆಚ್ಚು ಪ್ರಸ್ತಾಪ ಮಾಡಿದ್ದಾರೆ. ಆ ಯೋಜನೆಗಳ ಬಗ್ಗೆ ವಿರೋಧ ಮಾಡಿದರೆ, ನಮ್ಮ ಯೋಜನೆಗಳನ್ನು ನಾವೇ ವಿರೋಧಿಸಿದಂತಾಗುತ್ತದೆ. ಹೀಗಾಗಿ ಬಿಜೆಪಿ ಸರ್ಕಾರ ಯಾವುದೇ ಹೊಸ ಯೋಜನೆಗಳನ್ನು ಜಾರಿಗೊಳಿಸಿಲ್ಲ ಎನ್ನುವುದಕ್ಕೆ ಹೆಚ್ಚಿನ ಆದ್ಯತೆ ನೀಡುವಂತೆ ಶಾಸಕರಿಗೆ ಸಲಹೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಇದರೊಂದಿಗೆ ರಾಜ್ಯ ಸರ್ಕಾರ ಪೊಲೀಸ್ ವ್ಯವಸ್ಥೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿ ರುವುದು, ಅನಗತ್ಯವಾಗಿ ದೇಶ ದ್ರೋಹದ ಪ್ರಕರಣಗಳನ್ನು ದಾಖಲಿಸಿ ಕಿರುಕುಳ ನೀಡುವುದು. ಪ್ರವಾಹ ಪರಿಹಾರ ನೀಡದಿರುವುದು, ಪ್ರತಿಪಕ್ಷಗಳ ಶಾಸಕರ ಕ್ಷೇತ್ರಗಳಿಗೆ ಅನುದಾನ ಕಡಿತ ಮಾಡಿರುವ ವಿಚಾರಗಳನ್ನು ಪ್ರಸ್ತಾಪಿಸಿ ಸರ್ಕಾರವನ್ನು ಕಟ್ಟಿ ಹಾಕುವ ಕುರಿತು ಸಭೆಯಲ್ಲಿ ಚರ್ಚಿಸಲಾಗಿದೆ.
ರಾಜ್ಯ ಸರ್ಕಾರದ ವಿರುದ್ಧ ಸದನದಲ್ಲಿ ಹೋರಾಟ ಮಾಡಲು ಎಲ್ಲ ಶಾಸಕರು ಒಗ್ಗಟ್ಟು ಪ್ರದರ್ಶನ ಮಾಡಲು ಸಕ್ರಿಯವಾಗಿ ಸದನದ ಕಲಾಪಗಳಲ್ಲಿ ಪಾಲ್ಗೊಳ್ಳುವಂತೆ ಶಾಸಕರಿಗೆ ಸೂಚನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಸಭೆಯ ನಂತರ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಈ ಅಧಿವೇಶನದಲ್ಲಿ ಹಲವು ವಿಚಾರಗಳನ್ನು ಪ್ರಸ್ತಾಪಿಸಲು ನಿರ್ಧರಿಸಿದ್ದೇವೆ.
ಪೊಲೀಸ್ ಇಲಾಖೆ ದುರ್ಬಳಕೆ, ಯು.ಟಿ.ಖಾದರ್ ಮೇಲೆ ದೇಶದ್ರೋಹದ ಪ್ರಕರಣ ದಾಖಲಿಸಿರುವುದು. ಬೀದರ್‌ನ ಶಾಹೀನ್ ಶಾಲೆಯ ಮೇಲ್ ಪ್ರಕರಣ ದಾಖಲಿಸಿರುವುದು, ಕಾನೂನು ಸುವ್ಯವಸ್ಥೆ ಹದ ಗೆಟ್ಟಿರುವುದು ಹಾಗೂ ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ ಮಾಡುತ್ತೇವೆ ಎಂದು ಹೇಳಿದರು.
ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಯುನಿಫಾರ್ಮ್ ಮೇಲೆ ಸದನ ಒಳಗೆ ಬರುವುದು ತಪ್ಪು. ಅವರಿಗೆ ಕಾನೂನು ಗೊತ್ತಿಲ್ಲ ಎಂದರೆ ಹೇಗೆ? ಈ ಬಗ್ಗೆ ಸಭಾಧ್ಯಕ್ಷರು ಗಮನ ಹರಿಸಬೇಕು.
-ದಿನೇಶ್ ಗುಂಡೂರಾವ್, ಕೆಪಿಸಿಸಿ ಅಧ್ಯಕ್ಷ
ರಾಜ್ಯ ಸರ್ಕಾರ ಪ್ರತಿಪಕ್ಷಗಳನ್ನು ದಮನ ಮಾಡುವ ಕೆಲಸ ಮಾಡುತ್ತಿದೆ. ಕಾಂಗ್ರೆಸ್ ಶಾಸಕರ ಅನುದಾನ ಕಡಿತಗೊಳಿಸಲಾಗಿದೆ. ಪ್ರತಿಪಕ್ಷಗಳ ಅಭಿವ್ಯಕ್ತಿ ಸ್ವಾತಂತ್ರ್ಯ ಹತ್ತಿಕ್ಕಲಾಗುತ್ತಿದೆ. ಪ್ರತಿಭಟನೆಯ ಹಕ್ಕನ್ನೇ ಕಿತ್ತುಕೊಳ್ಳುತ್ತಿದ್ದಾರೆ. ಇದರ ವಿರುದ್ಧ ಧ್ವನಿ ಎತ್ತುತ್ತೇವೆ.
-ಈಶ್ವರ್ ಖಂಡ್ರೆ, ಕೆಪಿಸಿಸಿ ಕಾರ್ಯಾಧ್ಯಕ್ಷ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೆಬ್ಬಾಳ್ಕರ್‌ಗೆ ರವಿ ಅಶ್ಲೀಲ ಪದ ಬಳಸಿದ್ದು ನಿಜ: ಯತೀಂದ್ರ ಹೇಳಿಕೆ
MLA ಮುನಿರತ್ನ ವಿರುದ್ಧ ಮತ್ತೊಂದು ಜಾತಿ ನಿಂದನೆ ಪ್ರಕರಣ
BJP; ವಿಜಯೇಂದ್ರ ವಿರುದ್ಧ ಧ್ವನಿ ಎತ್ತಿದ್ದು ಬಿ.ಪಿ. ಹರೀಶ್ ಮಾತ್ರ!
High Court: ಪೌರ ಕಾರ್ಮಿಕರ ಸೇವೆ ಕಾಯಂಗೊಳಿಸಲು ವಿಫಲ: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
Kalaburagi: ಬಂಧನಕ್ಕೆ ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ, ಆರೋಪಿಗೆ ಗುಂಡೇಟು