BJP Protest: ರೈತರ ಜಮೀನು ವಕ್ಫ್ ಖಾತೆಗೆ ಭೂಪರಿವರ್ತನೆ
ಮಂಗಳೂರಿನಲ್ಲಿ ನಡೆದ ಬಿಜೆಪಿ ಪ್ರತಿಭಟನೆಯಲ್ಲಿ ಸಂಸದ ಕ್ಯಾ| ಬ್ರಿಜೇಶ್ ಚೌಟ
Team Udayavani, Nov 5, 2024, 1:00 AM IST
ಮಂಗಳೂರು: ರಾಜ್ಯದಲ್ಲಿ ಲ್ಯಾಂಡ್ ಜೆಹಾದ್‌ಗೆ ಸಿಎಂ ಸಿದ್ದರಾಮಯ್ಯ ಅವರೇ ಮುಖ್ಯಸ್ಥರಾಗಿದ್ದು, ಸಚಿವ ಜಮೀರ್ ಖಾನ್ ಸೂಚನೆಯಂತೆ ವಕ್ಫ್ ಇಲಾಖೆ ರೈತರ ಜಮೀನನ್ನು ತನ್ನ ಖಾತೆಗೆ ಭೂಪರಿವರ್ತನೆ ಮಾಡಿಕೊಳ್ಳುತ್ತಿದೆ. ರೈತರ ಜಮೀನನ್ನು ಕಬಳಿಸುತ್ತಿರುವ ಸಿಎಂ ಸಿದ್ದರಾಮಯ್ಯ ಹಾಗೂ ಸಚಿವ ಜಮೀರ್ ಖಾನ್ ಅವರು ತತ್‌ಕ್ಷಣವೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಹಾಗೂ ಈ ಪ್ರಕರಣದ ಬಗ್ಗೆ ಸಿಬಿಐ ತನಿಖೆ ನಡೆಯಬೇಕು ಎಂದು ಸಂಸದ ಕ್ಯಾ| ಬ್ರಿಜೇಶ್ ಚೌಟ ಆಗ್ರಹಿಸಿದ್ದಾರೆ.
ರಾಜ್ಯದಲ್ಲಿ ವಕ್ಫ್ ಕಾನೂನಿನ ಮೂಲಕ ರಾಜ್ಯದ ಕಾಂಗ್ರೆಸ್ ಸರಕಾರ ರೈತರ ಆಸ್ತಿಯನ್ನು ಕಬಳಿಸಲಾಗುತ್ತಿದೆ ಎಂದು ಆರೋಪಿಸಿ ಜಿಲ್ಲಾ ಬಿಜೆಪಿ ವತಿಯಿಂದ ನಗರದ ಮಿನಿ ವಿಧಾನಸೌಧ ಮುಂಭಾಗ ಸೋಮವಾರ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.
ವಕ್ಫ್ ಕಾನೂನು ತಿದ್ದುಪಡಿಗೆ ಕೇಂದ್ರ ಸರಕಾರ ಮುಂದಾಗಿದೆ. ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಸೂಚನೆ ಯಂತೆ ವಕ್ಫ್ ಕಾನೂನು ತಿದ್ದುಪಡಿ ಕುರಿತ ಜಂಟಿ ಸಂಸದೀಯ ಸಮಿತಿಯಲ್ಲಿ ಕಾಂಗ್ರೆಸ್ ಸದಸ್ಯರು ವಿಳಂಬ ನೀತಿ ಅನುಸರಿಸುತ್ತಿದ್ದಾರೆ ಎಂದರು.
ಇದು ಆರಂಭ ಮಾತ್ರ
ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಮಾತನಾಡಿ, ರಾಜ್ಯದ ಕಾಂಗ್ರೆಸ್ ಸರಕಾರಕ್ಕೆ ಅಕ್ರಮವೆಸಗಿ ವಾಪಾಸ್ ನೀಡುವುದು ಅಭ್ಯಾಸವಾಗಿದೆ. ರಾಜ್ಯ ಸರಕಾರದ ವೈಫಲ್ಯ ವಿರುದ್ಧ ಇದು ಆರಂಭದ ಹೋರಾಟ ಮಾತ್ರ ಎಂದರು.
ಸಿಎಂ, ಜಮೀರ್ ರಾಜೀನಾಮೆ ನೀಡಲಿ
ಶಾಸಕ ವೇದವ್ಯಾಸ ಕಾಮತ್ ಮಾತನಾಡಿ, ರೈತರ ಜಮೀನನ್ನು ವಕ್ಫ್ ಇಲಾಖೆ ವಶಪಡಿಸಿಕೊಂಡಿದೆ. ಬಿಜೆಪಿ ಹೋರಾಟದ ಫಲವಾಗಿ ನೋಟಿಸ್ ಹಿಂಪಡೆಯುವ ಭರವಸೆ ಸರಕಾರದಿಂದ ದೊರೆತಿದೆ. ಹೀಗಾಗಿ ಕಾಂಗ್ರೆಸ್ ಭೂಮಿ ದರೋಡೆಕೋರತನದ ಬಗ್ಗೆ ಜನರು ಜಾಗೃತ ಗೊಂಡು ಪ್ರಶ್ನಿಸಬೇಕಿದೆ. ರೈತರ ಜಮೀನು ಕಬಳಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ ಜಮೀರ್ ಅವರು ರಾಜೀನಾಮೆ ನೀಡಬೇಕು ಎಂದರು.
ಭಯದ ವಾತಾವರಣ
ಶಾಸಕ ಡಾ| ಭರತ್ ಶೆಟ್ಟಿ ವೈ. ಮಾತ ನಾಡಿ, ರಾಜ್ಯದಲ್ಲಿ ಎಲ್ಲ ಹಿಂದೂಗಳು ತಮ್ಮ ಜಮೀನಿನ ಆರ್‌ಟಿಸಿ ಪರಿಶೀಲನೆ ಮಾಡಬೇಕಾದ ಭಯದ ವಾತಾವರಣ ಸೃಷ್ಟಿಯಾಗಿದೆ. ಸಾವಿರಾರು ವರ್ಷಗಳ ಹಿಂದಿನ ದೇವಸ್ಥಾನಗಳ ಆಸ್ತಿ ಕೂಡ ವಕ್ಫ್ ಆಸ್ತಿಯಾಗಿ ಪರಿವರ್ತನೆ ಆಗಿದೆ ಎಂದರು.
ಮೇಯರ್ ಮನೋಜ್ ಕೋಡಿಕಲ್, ಉಪಮೇಯರ್ ಭಾನುಮತಿ, ವಿಧಾನ ಪರಿಷತ್ ಮಾಜಿ ಸದಸ್ಯರಾದ ಮೋನಪ್ಪ ಭಂಡಾರಿ, ಬಾಲಕೃಷ್ಣ ಭಟ್, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರೇಮಾನಂದ ಶೆಟ್ಟಿ, ಯುವಮೋರ್ಚಾ ಜಿಲ್ಲಾಧ್ಯಕ್ಷ ನಂದನ್ ಮಲ್ಯ, ಪ್ರಮುಖರಾದ ರವಿಶಂಕರ ಮಿಜಾರು, ನಿತಿನ್ ಕುಮಾರ್, ಸುಧೀರ್ ಶೆಟ್ಟಿ, ಪೂರ್ಣಿಮಾ, ವಿಜಯ ಕುಮಾರ್ ಶೆಟ್ಟಿ, ರಮೇಶ್ ಕಂಡೆಟ್ಟು, ರಾಜೇಶ್ ಕೊಟ್ಟಾರಿ, ಜಗದೀಶ ಆಳ್ವ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
BBK11: ಕ್ಯಾಪ್ಟನ್ ಹನುಮಂತುಗೆ ನಿಯತ್ತಿನ ಪ್ರಶ್ನೆ ಹಾಕಿ, ರೇಗಾಡಿದ ಚೈತ್ರಾ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.