Chikkamagaluru: ವಕೀಲರು-ಪೊಲೀಸರ ವಿವಾದ; CID ತನಿಖೆಗೆ ಸರಕಾರ ಆದೇಶ
Team Udayavani, Dec 4, 2023, 12:32 AM IST
ಚಿಕ್ಕಮಗಳೂರು: ನಗರದ ಪೊಲೀಸರು ಮತ್ತು ವಕೀಲರ ನಡುವೆ ವಿವಾದಕ್ಕೆ ಕಾರಣವಾದ ಹಲ್ಲೆ ಪ್ರಕರಣದ ತನಿಖೆಯನ್ನು ರಾಜ್ಯ ಸರಕಾರ ಸಿಐಡಿಗೆ ವಹಿಸಿದೆ.
ಮಂಗಳೂರು ವಿಭಾಗದ ಐಜಿಪಿ ಚಂದ್ರಗುಪ್ತ ರವಿವಾರ ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು. ಬೈಕ್ ಓಡಿಸುವಾಗ ಹೆಲ್ಮೆಟ್ ಧರಿಸಿಲ್ಲ ಎಂಬ ಕಾರಣಕ್ಕೆ ವಕೀಲ ಪ್ರೀತಮ್ ಅವರನ್ನು ನಗರ ಪೊಲೀಸ್ ಠಾಣೆಗೆ ಕರೆದೊಯ್ದು ಹಲ್ಲೆ ನಡೆಸಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ 6 ಪೊಲೀಸರನ್ನು ಅಮಾ ನತುಗೊಳಿಸಿದ್ದರೆ, ವಕೀಲರ ವಿರುದ್ಧ ನಾಲ್ಕು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಲಾಗಿದೆ.
ಪೊಲೀಸರಿಂದ ಅಹೋರಾತ್ರಿ ಪ್ರತಿಭಟನೆ
ಪೊಲೀಸ್ ಸಿಬ್ಬಂದಿಗಳ ಅಮಾನತು ಆದೇಶ ಹಿಂಪಡೆಯಬೇಕು. ಕರ್ತವ್ಯಕ್ಕೆ ಅಡ್ಡಿಪಡಿಸಿದ ವಕೀಲರ ವಿರುದ್ಧ ಪ್ರಕರಣ ದಾಖಲಿಸಬೇಕು ಹಾಗೂ ಬಂ ಧಿಸಬೇಕೆಂದು ಆಗ್ರಹಿಸಿ ಪೊಲೀಸ್ ಸಿಬಂದಿ ಹಾಗೂ ಅವರ ಕುಟುಂಬಸ್ಥರು ಶನಿವಾರ ರಾತ್ರಿಯಿಡೀ ಪ್ರತಿಭಟನೆ ನಡೆಸಿದರು. ಈ ಹಿನ್ನೆಲೆಯಲ್ಲಿ ಹಲ್ಲೆಗೊಳಗಾದ ವಕೀಲ ಪ್ರೀತಮ್ ಸೇರಿ ವಕೀಲರ ವಿರುದ್ಧ ನಾಲ್ಕು ಪ್ರತ್ಯೇಕ ಪ್ರಕರಣ ದಾಖಲಿಸಲಾಗಿದೆ.
ಎಸ್‌ಐಟಿಗೆ ನೀಡುವಂತೆ ಸಿಎಂಗೆ ವಕೀಲರ ಸಂಘ ಪತ್ರ
ಬೆಂಗಳೂರು: ಚಿಕ್ಕಮಗಳೂರಿನ ಠಾಣೆಯಲ್ಲಿ ಪೊಲೀಸರು ಪ್ರತಿಭಟನೆ ನಡೆಸಿರುವ ಪ್ರಕರಣವನ್ನು ವಿಶೇಷ ದಳದಿಂದ ತನಿಖೆ ನಡೆಸಬೇಕು ಎಂದು ಬೆಂಗಳೂರು ವಕೀಲರ ಸಂಘವು ಮುಖ್ಯಮಂತ್ರಿ ಮತ್ತು ರಾಜ್ಯದ ಗೃಹ ಸಚಿವರಿಗೆ ಪತ್ರ ಬರೆದು ಆಗ್ರಹಿಸಿದೆ. ವಕೀಲರ ಮೇಲೆ ಹಲ್ಲೆ ನಡೆಸಿದ ಪೊಲೀಸರ ಮೇಲೆ ಸೂಕ್ತ ಕ್ರಮ ಕೈಗೊಳ್ಳದ ಐಜಿಪಿ, ಎಸ್‌ಪಿ ಮತ್ತು ಡಿವೈಎಸ್‌ಪಿ ಅವರನ್ನು ತತ್‌ಕ್ಷಣವೇ ವರ್ಗಾವಣೆ ಮಾಡಬೇಕು ಮತ್ತು ಪೊಲೀಸರ ಧರಣಿಯಲ್ಲಿ ಭಾಗಿಯಾದ ಪೊಲೀಸ್ ಅಧಿಕಾರಿಗಳನ್ನು ತತ್‌ಕ್ಷಣವೇ ಅಮಾನತು ಮಾಡಬೇಕು ಎಂದು ವಕೀಲರ ಸಂಘ ಕೋರಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ
Ration Card: ಅನರ್ಹರಿಗೆ ಬಿಪಿಎಲ್ ಕಾರ್ಡ್ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ
Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ
Liquor: ಮದ್ಯ ಬಂದ್ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ
Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Malpe: ಕಿನ್ನಿಮೂಲ್ಕಿ; ನಿಲ್ಲಿಸಲಾಗಿದ್ದ ಬುಲೆಟ್ ಕಳವು
Maharashtra: ಬಿಜೆಪಿ ನಾಯಕಿ ನವನೀತ್ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್‌ಐಆರ್ ದಾಖಲು
Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್ ನೀಡಿದ ಬೋಯಿಂಗ್
Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು
Kanguva ಕುರಿತು ಭಾರೀ ನೆಗೆಟಿವ್ ವಿಮರ್ಶೆ: ನಟ ಸೂರ್ಯ ಪತ್ನಿ ಜ್ಯೋತಿಕಾ ಆಕ್ರೋಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.