ಶಿರೂರು ಸರಕಾರಿ ಪದವಿಪೂರ್ವ ಕಾಲೇಜು : 1.50 ಲ.ರೂ. ಅನುದಾನದ ಶೌಚಾಲಯ: ಕಳಪೆ ಕಾಮಗಾರಿ
Team Udayavani, Mar 11, 2022, 4:50 AM IST
ಬೈಂದೂರು: ಸರಕಾರ ಶೈಕ್ಷಣಿಕ ಕ್ಷೇತ್ರದಲ್ಲಿ ಗುಣಮಟ್ಟದ ಶಿಕ್ಷಣ ನೀಡಬೇಕು. ವಿದ್ಯಾರ್ಥಿಗಳಿಗೆ ಅನುಕೂಲ
ವಾಗಬೇಕು ಎಂದು ಹತ್ತಾರು ವಿಭಾಗದ ಅನುದಾನಗಳನ್ನು ಗ್ರಾಮೀಣ ಮಟ್ಟದವರೆಗೆ ಒದಗಿಸುತ್ತದೆ. ಆದರೆ ರಾಜ
ಕೀಯ ಹಸ್ತಕ್ಷೇಪ, ಗುತ್ತಿಗೆದಾರರು ಹಣ ಮಾಡುವ ಉದ್ದೇಶದಿಂದ ಲಕ್ಷಾಂತರ ರೂ. ಕೊಳ್ಳೆ ಹೊಡೆದರೂ ಸಹ ಸಂಬಂಧ ಪಟ್ಟ ಇಲಾಖೆ, ಅಧಿಕಾರಿಗಳು ಗಮನ ಹರಿಸದಿರುವುದು ಬೈಂದೂರು ಕ್ಷೇತ್ರದ ಬಹುತೇಕ ಕಡೆಗಳಲ್ಲಿ ಕಂಡುಬರುತ್ತಿದೆ.
ಸೆಕೆಂಡ್ ಹ್ಯಾಂಡ್ ಬಾಗಿಲು, ಸಿಮೆಂಟ್ ಇಲ್ಲ, ಬಣ್ಣವೂ ಕಾಣುತ್ತಿಲ್ಲಶಿರೂರು ಗ್ರಾ.ಪಂ ವ್ಯಾಪ್ತಿಯ ಶಿರೂರು
ಸರಕಾರಿ ಪ.ಪೂ. ಕಾಲೇಜಿನ ದುರಸ್ತಿಗೆತಾ. ಪಂ. ಸಂಯುಕ್ತ ಅನುದಾನ ಯೋಜನೆಯಡಿಯಲ್ಲಿ 1.50 ಲ.ರೂ. ಮಂಜೂ ರಾಗಿದೆ. ಇದರ ಗುತ್ತಿಗೆ ಪಡೆದ ವ್ಯಕ್ತಿ ಸೆಕೆಂಡ್‌ಹ್ಯಾಂಡ್ ಬಾಗಿಲು, ಕಳಪೆ ಮಟ್ಟದ ಸಿಮೆಂಟ್, ಗಲೀಜು ಟೈಲ್ಸ್, ನೀರಿನ ವ್ಯವಸ್ಥೆ ಇಲ್ಲದೆ ಸಂಪೂರ್ಣ ಕಳಪೆ ಕಾಮಗಾರಿ ನಡೆಸಿದ್ದು ವಿದ್ಯಾರ್ಥಿಗಳ ಉಪಯೋಗಕ್ಕೆ ಬಾರದಂತಾಗಿದೆ. ಮಾತ್ರವಲ್ಲದೆ ಶಾಲಾಭಿವೃದ್ದಿ ಸಮಿತಿ ಹಾಗೂ ಶಿಕ್ಷಕ ವೃಂದ ಈ ಕಳಪೆ ಕಾಮಗಾರಿ ಕುರಿತು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಹಾಗೂ ಸಂಬಂಧಪಟ್ಟ ಇಲಾಖೆಗೆ ದೂರುನೀಡಿದರೂ ಯಾವ ಅಧಿಕಾರಿಯೂ ಭೇಟಿ ನೀಡಿಲ್ಲ. ಈ ಕುರಿತು ಸೂಕ್ತ ಕ್ರಮ ಕೈಗೊಳ್ಳಬೇಕು ಎಂಬುದು ಶಿಕ್ಷಣಾಭಿಮಾನಿಗಳ ಅಭಿಪ್ರಾಯವಾಗಿದೆ.
ಕ್ರಮ ಕೈಗೊಳ್ಳಿ
ಶಾಲಾಭಿವೃದ್ದಿಗಾಗಿ ಶಿಕ್ಷಕರು,ಪಾಲಕರು, ಶಾಲಾಭಿವೃದ್ದಿ ಸಮಿತಿ, ದಾನಿಗಳ ಸಹಕಾರದಿಂದ ಹತ್ತಾರು ಅಭಿವೃದ್ಧಿ ಯೋಜನೆಗೆ ಪ್ರಯತ್ನ ನಡೆಸಲಾಗುತ್ತಿದೆ.ಆದರೆ ಇಂತಹ ಗುತ್ತಿಗೆದಾರರು ಕಾಟಾಚಾರದ ಕಾಮಗಾರಿ ನಡೆಸಿ ಸರಕಾರದ ಹಣ ಪೋಲಾಗುವುದು ನಿಲ್ಲಬೇಕು. ಈ ಬಗ್ಗೆ ಸಂಬಂಧಪಟ್ಟ ಇಲಾಖೆ ಇದರ ಬಗ್ಗೆ ಆದಷ್ಟು ಬೇಗ ಕ್ರಮ ಕೈಗೊಳ್ಳಬೇಕು.
-ತುಳಸೀದಾಸ್ ಮೊಗೇರ್, ಪ್ರೌಢಶಾಲಾ
ವಿಭಾಗದ ಕಾರ್ಯಾಧ್ಯಕ್ಷರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi; ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ರಮೇಶ್ ಕಾಂಚನ್ ಆಯ್ಕೆ
Udupi; ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಡಿ.1 ರಂದು ದೀಪೋತ್ಸವ
Karkala: ದುರ್ಗಾ ಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು
School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್ ನಿಧನ
Kota: ರಾಷ್ಟ್ರೀಯ ಹೆದ್ದಾರಿಯಲ್ಲಿ ಸೌಲಭ್ಯ ಕೊರತೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Udupi; ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ರಮೇಶ್ ಕಾಂಚನ್ ಆಯ್ಕೆ
Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ
Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ
Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್
Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.