ಅತಿಥಿ ಶಿಕ್ಷಕರಿಗೂ ಸರ್ಕಾರದಿಂದ ತರಬೇತಿ
Team Udayavani, Dec 21, 2019, 3:10 AM IST
ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣ ಗುಣಮಟ್ಟ ಸುಧಾರಣೆಯ ಜತೆಗೆ ಬೋಧನಾ ಕ್ರಮದಲ್ಲಿ ಆಮೂಲಾಗ್ರ ಬದಲಾವಣೆ ನಿಟ್ಟಿನಲ್ಲಿ ಸರ್ಕಾರಿ ಶಾಲೆಗಳಲ್ಲಿ ಕೆಲಸ ಮಾಡುತ್ತಿರುವ ಅತಿಥಿ ಶಿಕ್ಷಕರಿಗೆ ತರಬೇತಿ ನೀಡಲು ಸರ್ಕಾರ ನಿರ್ಧರಿಸಿದೆ. ಪ್ರಸಕ್ತ ಸಾಲಿನಿಂದಲೇ ಅತಿಥಿ ಶಿಕ್ಷಕರಿಗೆ ತರಬೇತಿ ನೀಡಲು ಮುಂದಾಗಿದ್ದು, ಈ ಸಂಬಂಧ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವರಾದ ಎಸ್.ಸುರೇಶ್ ಕುಮಾರ್ ಅವರು ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನ ನೀಡಿದ್ದಾರೆ ಎಂದು ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು “ಉದಯವಾಣಿ’ಗೆ ಖಚಿತಪಡಿಸಿದ್ದಾರೆ.
ರಾಜ್ಯದಲ್ಲಿ ಸುಮಾರು 48 ಸಾವಿರ ಸರ್ಕಾರಿ ಶಾಲೆಗಳಿವೆ. ಇದರಲ್ಲಿ ಸುಮಾರು 4 ಸಾವಿರದಷ್ಟು ಪ್ರೌಢಶಾಲೆಯೂ ಸೇರಿಕೊಂಡಿದೆ. ಪ್ರಾಥಮಿಕ ಶಾಲೆಗೆ 3,00,473 ಶಿಕ್ಷಕರ ಹುದ್ದೆ ಮಂಜೂರಾಗಿದೆ. ಅದರಲ್ಲಿ 2,62,698 ಹುದ್ದೆಗಳು ಮಾತ್ರ ಭರ್ತಿಯಾಗಿವೆ. ಉಳಿದ ಸುಮಾರು 30 ಸಾವಿರ ಹುದ್ದೆ ಖಾಲಿಯಿದೆ.( ಹೊಸದಾಗಿ ನೇಮಕಗೊಂಡಿರುವ ಪದವೀಧರ ಶಿಕ್ಷಕರು ಹೊರತುಪಡಿಸಿ) ಹಾಗೆಯೇ ಪ್ರೌಢಶಾಲೆಗೆ 95,714 ಹುದ್ದೆಗಳು ಮಂಜೂರಾಗಿದ್ದು, 86,804 ಭರ್ತಿ ಮಾಡಿಕೊಳ್ಳಲಾಗಿದೆ. ಸುಮಾರು 8ರಿಂದ 9 ಸಾವಿರ ಹುದ್ದೆ ಖಾಲಿಯಿದೆ.
ಪ್ರಾಥಮಿಕ ಶಾಲೆಗಳಲ್ಲಿ ಸುಮಾರು 15ರಿಂದ 16 ಸಾವಿರ ಅತಿಥಿ ಶಿಕ್ಷಕರು ಸೇವೆ ಸಲ್ಲಿಸುತ್ತಿದ್ದಾರೆ. ಪ್ರೌಢಶಾಲೆಯಲ್ಲಿ 3453 ಅತಿಥಿ ಶಿಕ್ಷಕರು ಸೇವೆ ಸಲ್ಲಿಸುತ್ತಿದ್ದಾರೆ. ಒಟ್ಟಾರೆಯಾಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಸುಮಾರು 20 ಸಾವಿರ ಅತಿಥಿ ಶಿಕ್ಷಕರು ಸೇವೆ ಸಲ್ಲಿಸುತ್ತಿದ್ದಾರೆ. ಈ ಎಲ್ಲ ಶಿಕ್ಷಕರಿಗೂ ಆಯಾ ಜಿಲ್ಲಾ ವ್ಯಾಪ್ತಿಯಲ್ಲೇ ತರಬೇತಿ ನೀಡಲು ನಿರ್ಧರಿಸಲಾಗಿದೆ. ಕಾಯಂ ಶಿಕ್ಷಕರಿಗೆ ಪ್ರತಿ ವರ್ಷ ತಂಡಗಳಲ್ಲಿ ರಾಜ್ಯ ಶಿಕ್ಷಣ, ಸಂಶೋಧನೆ ಮತ್ತು ತರಬೇತಿ ಇಲಾಖೆ(ಡಿಎಸ್‌ಇಆರ್‌ಟಿ) ವತಿಯಿಂದ ವೃತ್ತಿ ಬುನಾದಿ ತರಬೇತಿ ನೀಡಿ, ಅವರನ್ನು ಟ್ರೈನ್ಡ್ ಶಿಕ್ಷಕರನ್ನಾಗಿ ಮಾಡಲಾಗುತ್ತದೆ.
ಸದ್ಯ ಇರುವ 3.5 ಲಕ್ಷ ಶಿಕ್ಷಕರಲ್ಲಿ ಬಹುತೇಕರು ತರಬೇತಿ ಹೊಂದಿದ ಶಿಕ್ಷಕರೇ ಆಗಿದ್ದಾರೆ. ತರಬೇತಿ ಹೊಂದದೇ ಇರುವ ಕಾಯಂ ಶಿಕ್ಷಕರಿಗೂ ಸರ್ಕಾರದಿಂದ ತರಬೇತಿ ನೀಡುವ ವ್ಯವಸ್ಥೆ ಮೊದಲಿನಿಂದಲೂ ಜಾರಿಯಲ್ಲಿದೆ. ಆದರೆ, ಅತಿಥಿ ಶಿಕ್ಷಕರಿಗೆ ತರಬೇತಿ ನೀಡುವ ವ್ಯವಸ್ಥೆ ಇರಲಿಲ್ಲ. ಕಾರಣ ಅತಿಥಿ ಶಿಕ್ಷಕರ ಹುದ್ದೆಗೆ ಕಾಯಂ ಶಿಕ್ಷಕರು ನೇಮಕಗೊಂಡಲ್ಲಿ ಅಥವಾ ವರ್ಗಾವಣೆಯಾಗಿ ಬಂದಲ್ಲಿ ಅತಿಥಿ ಶಿಕ್ಷಕ ಆ ದಿನದಿಂದಲೇ ಹುದ್ದೆ ಬಿಟ್ಟುಕೊಡಬೇಕಾಗುತ್ತದೆ. ಹೀಗಾಗಿ ಅತಿಥಿ ಶಿಕ್ಷಕರಿಗೆ ತರಬೇತಿ ನೀಡುವ ಬಗ್ಗೆ ಸರ್ಕಾರ ಈವರೆಗೂ ಯೋಜನೆ ತಂದಿರಲಿಲ್ಲ.
ಈಗ ಅತಿಥಿ ಶಿಕ್ಷಕರಿಗೂ ತರಬೇತಿ ನೀಡಲು ಶಿಕ್ಷಣ ಸಚಿವರೇ ಖುದ್ದು ನಿರ್ದೇಶನ ನೀಡಿದ್ದಾರೆ. ಶಾಲಾ ಮುಖ್ಯೋಪಾಧ್ಯಾಯರ ಹಂತದಲ್ಲಿ ಎಲ್ಲ ಮಾನದಂಡಗಳಿಗೆ ಅನುಗುಣವಾಗಿ ಅತಿಥಿ ಉಪನ್ಯಾಸಕರ ನೇಮಕಾತಿ ನಡೆಯುತ್ತದೆ. ಕಾಯಂ ಶಿಕ್ಷಕರ ನೇಮಕಾತಿ ವಿಳಂಬವಾಗುತ್ತಿರುವುದರಿಂದ ಅನೇಕ ವರ್ಷದಿಂದ ಸರ್ಕಾರಿ ಶಾಲೆಗೆ ಅತಿಥಿ ಶಿಕ್ಷಕರ ಸೇವೆಯೂ ಅಷ್ಟೇ ಅಗತ್ಯವಾಗಿದೆ. ಹೀಗಾಗಿ ಅತಿಥಿ ಶಿಕ್ಷಕರನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಬಳಸಿಕೊಳ್ಳಲು ಮತ್ತು ಬೋಧನಾ ಮಟ್ಟದ ಸುಧಾರಣೆಗಾಗಿ ಜಿಲ್ಲಾ ಹಂತದಲ್ಲಿ ತರಬೇತಿ ನೀಡಲಾಗುತ್ತದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.
ಇನ್ನು ಮುಂದೆ ಅತಿಥಿ ಶಿಕ್ಷಕರ ನೇಮಕಾತಿಯನ್ನು ವಿಳಂಬ ಮಾಡುವುದಿಲ್ಲ. ಶೈಕ್ಷಣಿಕ ವರ್ಷದ ಆರಂಭದಿಂದಲೇ ಅತಿಥಿ ಶಿಕ್ಷಕರ ನೇಮಕಾತಿ ಮಾಡಿಕೊಳ್ಳುತ್ತೇವೆ. ಹಾಗೆಯೇ ಪ್ರಸಕ್ತ ಸಾಲಿನಿಂದಲೇ ಡಿಎಸ್‌ಇಆರ್‌ಟಿ ಮೂಲಕ ಅತಿಥಿ ಶಿಕ್ಷಕರಿಗೆ ಜಿಲ್ಲಾ ಮಟ್ಟದಲ್ಲಿ ತರಬೇತಿ ನೀಡಲಿದ್ದೇವೆ.
-ಎಸ್.ಸುರೇಶ್ ಕುಮಾರ್, ಶಿಕ್ಷಣ ಸಚಿವ
ಅತಿಥಿ ಶಿಕ್ಷಕರಿಗೆ ತರಬೇತಿ ನೀಡುವ ಸಂಬಂಧ ಸಚಿವರು ಸೂಚನೆ ನೀಡಿದ್ದಾರೆ. ಹೀಗಾಗಿ ಡಿಎಸ್‌ಇಆರ್‌ಟಿಗೆ ಇದರ ಸಿದ್ಧತೆಗೆ ಕ್ರಮ ವಹಿಸಲು ನಿರ್ದೇಶಿಸಲಾಗಿದೆ. ತರಬೇತಿ ಹೇಗಿರಬೇಕು ಮತ್ತು ಎಷ್ಟು ದಿನ ನೀಡಬೇಕು ಎಂಬುದು ಡಿಎಸ್‌ಇಆರ್‌ಟಿ ನಿರ್ಧರಿಸಲಿದೆ.
-ಡಾ.ಕೆ.ಜಿ.ಜಗದೀಶ್, ಶಿಕ್ಷಣ ಇಲಾಖೆ ಆಯುಕ್ತ
* ರಾಜು ಖಾರ್ವಿ ಕೊಡೇರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ
Alnavar: ಟಿಟಿ- ಕ್ಯಾಂಟರ್ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು
N.Maharajan: ವಲ್ಲರಸು ನಿರ್ದೇಶಕರ ಚಿತ್ರದಲ್ಲಿ ಶಿವಣ್ಣ ಸಿನಿಮಾ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.