Karnataka: ಗ್ರಾ.ಪಂ. ನೌಕರರ ಸೇವಾ ಭದ್ರತೆಗೆ ಕ್ರಮ: ಪ್ರಿಯಾಂಕ್
Team Udayavani, Nov 23, 2023, 9:55 PM IST
ಬೆಂಗಳೂರು: ಗ್ರಾಮ ಪಂಚಾಯತ್ ನೌಕರರ ಸೇವಾ ಭದ್ರತೆ ಸಹಿತ ಹಲವು ಬೇಡಿಕೆಗಳನ್ನು ಈಡೇರಿಸುವ ಬಗ್ಗೆ ಪರಿಶೀಲಿಸಲಾಗುತ್ತಿದ್ದು, ಸಾಧ್ಯವಾದಷ್ಟು ಸೌಲಭ್ಯಗಳನ್ನು ನೀಡಲು ಪ್ರಯತ್ನಿಸುತ್ತಿರುವುದಾಗಿ ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.
ಸಿಐಟಿಯು ಸಂಯೋಜಿತ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್ ನೌಕರರ ಸಂಘದ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು, ಕಡಿಮೆ ಅವಧಿಯಲ್ಲಿ ಹಂತಹಂತವಾಗಿ ಗ್ರಾ.ಪಂ. ನೌಕರರ ಶ್ರೇಯೋಭಿವೃದ್ಧಿಗಾಗಿ ಸರಕಾರ ಹಲವು ಸೌಲಭ್ಯಗಳನ್ನು ಜಾರಿಗೊಳಿಸಿದೆ. ಸುಮಾರು 11 ಸಾವಿರ ಮಂದಿ ಗ್ರಾ.ಪಂ. ನೌಕರರಿಗೆ ಸೇವಾ ಭದ್ರತೆ ಒದಗಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು.
ಬೇಡಿಕೆ ಪರಿಶೀಲನೆ
ಮೂಲವೇತನ, ವಿಶ್ರಾಂತಿ ವೇತನ, ಆರೋಗ್ಯ ಭತ್ಯೆ ಸೌಲಭ್ಯಗಳನ್ನು ಒದಗಿಸುವ ಬಗ್ಗೆ ಸರಕಾರ ಕ್ರಮ ಕೈಗೊಳ್ಳಬೇಕು ಎಂದು ನೌಕರರ ಸಂಘದ ಪದಾಧಿಕಾರಿಗಳು ಸಲ್ಲಿಸಿದ ಬೇಡಿಕೆಯನ್ನು ಪರಿಶೀಲಿಸಲಾಗುವುದು ಎಂದು ಸಚಿವರು ಭರವಸೆ ನೀಡಿದರು.
ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಉಮಾ ಮಹದೇವನ್, ನೌಕರರ ಸಂಘದ ಅಧ್ಯಕ್ಷ ಎಂ.ಬಿ. ನಾಡಗೌಡ ಮತ್ತಿತರ ಪದಾಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.