6 ವರ್ಷಗಳ ಹಿಂದೆ ಆಂಜನೇಯ, ಈಗ ಅಶೋಕ! ಸಚಿವರ ಗ್ರಾಮ ವಾಸ್ತವ್ಯದ ದಾಖಲೆ
Team Udayavani, Feb 19, 2022, 11:45 AM IST
ಬ್ರಹ್ಮಾವರ : ಸಚಿವರ ಗ್ರಾಮ ವಾಸ್ತವ್ಯ ಉಡುಪಿ ಜಿಲ್ಲೆಯಲ್ಲಿ ನಡೆದು ಆರು ವರ್ಷಗಳಾಗಿವೆ. ಈಗ ಮತ್ತೆ ಆ ಘಟನೆ ನಡೆಯುತ್ತಿದೆ.
2016ರ ಡಿ. 31- 2017ರ ಜ. 1ರಂದು ಕುಂದಾಪುರ ತಾಲೂಕಿನ ಕಾಲ್ತೊಡಿನ ಮೂರೂರು ಕೊರಗರ ಕಾಲನಿಯಲ್ಲಿ ರಾಜ್ಯದ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಅಭಿವೃದ್ಧಿ ಇಲಾಖೆ ಸಚಿವರಾಗಿದ್ದ ಆಂಜನೇಯ ಅವರು ವಾಸ್ತವ್ಯ ಹೂಡಿದ್ದರು. ಬಳಿಕ ಈಗ ಅಂತಹುದೇ ಕಾರ್ಯಕ್ರಮ ಕಂದಾಯ ಸಚಿವ ಆರ್. ಅಶೋಕ್‌ರಿಂದ ಬ್ರಹ್ಮಾವರ ತಾಲೂಕಿನ ಆರೂರಿನಲ್ಲಿ ಫೆ. 19ರಂದು ನಡೆಯುತ್ತಿದೆ. ಜತೆಗೆ ಕೊಕ್ಕರ್ಣೆಯಲ್ಲಿ ಜನಸ್ಪಂದನ ಕಾರ್ಯಕ್ರಮ ನಡೆಸಿ ಒಳಬೈಲು ಕುಡುಬಿ ಸಮುದಾಯದ ಕಾಲನಿಗೆ ಭೇಟಿ ನೀಡುವರು.
ಸಚಿವರು ಮುಖ್ಯವಾಗಿ ಡೀಮ್ಡ್ ಫಾರೆಸ್ಟ್ ನಿಯಮ ದಿಂದ ಅಕ್ರಮ ಸಕ್ರಮ ನಿವೇಶನದ ಫಲಾನುಭವಿಗಳಿಗೆ ಆಗುತ್ತಿರುವ ಸಮಸ್ಯೆಗಳ ಕುರಿತು ಚರ್ಚಿಸುವರು. ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸೌಲಭ್ಯ ವಿತರಿಸಲು ಜಿಲ್ಲಾಡಳಿತ, ತಾಲೂಕು ಆಡಳಿತ ಸಜ್ಜಾಗಿದೆ.
ಸಚಿವರ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಶಾಸಕ ಕೆ. ರಘುಪತಿ ಭಟ್ ಅವರು ಶುಕ್ರವಾರ ಕೊಕ್ಕರ್ಣೆ ಕರ್ನಾಟಕ ಪಬ್ಲಿಕ್ ಸ್ಕೂಲ್‌ನ ಸಭಾಭವನದಲ್ಲಿ ಪೂರ್ವಭಾವಿ ಸಭೆ ನಡೆಸಿದರು. ಪೂರ್ವ ತಯಾರಿಯ ಸ್ಥಿತಿ ಗತಿಯ ಬಗ್ಗೆ ಮಾಹಿತಿ ಪಡೆದು ಸಲಹೆ ಸೂಚನೆಗಳನ್ನು ನೀಡಿದರು.
ಇದನ್ನೂ ಓದಿ :ನರೇಗಾ ಯೋಜನೆ ಗುರಿ: ಗ್ರಾಮ ಪಂಚಾಯತ್ ಗಳಿಗೆ ಸಾಧನೆ ಗರಿ
ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ., ಜಿ.ಪಂ. ಸಿಇಒ ಡಾ| ನವೀನ್ ಭಟ್ ವೈ., ಸಹಾಯಕ ಆಯುಕ್ತ ರಾಜು ಕೆ., ಅಪರ ಜಿಲ್ಲಾ ಧಿಕಾರಿ ಸದಾಶಿವ ಪ್ರಭು, ಉಡುಪಿ ತಹಶೀಲ್ದಾರ್ ಪ್ರದೀಪ್ ಕುರ್ಡೆಕರ್, ಬ್ರಹ್ಮಾವರ ತಹಶೀಲ್ದಾರ್ ರಾಜಶೇಖರ್ ಮೂರ್ತಿ, ಪೊಲೀಸ್ ಉಪ ನಿರೀಕ್ಷಕ ಗುರುನಾಥ್ ಹಾದಿಮನೆ, ಉಡುಪಿ ನಗರ ಬಿಜೆಪಿ ಅಧ್ಯಕ್ಷ ಮಹೇಶ್ ಠಾಕೂರ್, ಗ್ರಾ.ಪಂ. ಅಧ್ಯಕ್ಷರಾದ ಕೊಕ್ಕರ್ಣೆಯ ಲಕ್ಷ್ಮೀ, ಕಳೂ¤ರಿನ ಸುಕನ್ಯಾ ಶೆಟ್ಟಿ, ಆರೂರಿನ ಮಮತಾ ಶೆಟ್ಟಿ, ಜಿ.ಪಂ. ಮಾಜಿ ಸದಸ್ಯ ಪ್ರತಾಪ್ ಹೆಗ್ಡೆ ಮಾರಾಳಿ, ಕೊಕ್ಕರ್ಣೆ, ಕಳ್ತೂರು, ಚೇರ್ಕಾಡಿ, ಆರೂರು ಗ್ರಾ.ಪಂ. ಸದಸ್ಯರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.