Drought: ಬರ ಪರಿಹಾರ ಶೀಘ್ರ ಮಂಜೂರು ಮಾಡಿ- ಸಿದ್ದರಾಮಯ್ಯ
ಪ್ರಧಾನಿ ನರೇಂದ್ರ ಮೋದಿಗೆ ಮನವಿ ಮಾಡಿದ ಸಿಎಂ- ಬರ ಪರಿಹಾರ, ನೀರಾವರಿ ಯೋಜನೆಗಳ ಕುರಿತು ಸುದೀರ್ಘ ಚರ್ಚೆ
Team Udayavani, Dec 19, 2023, 10:56 PM IST
ಬೆಂಗಳೂರು: ರಾಜ್ಯದ 223 ಬರಪೀಡಿತ ತಾಲೂಕುಗಳಿಗೆ 18,177.44 ಕೋಟಿ ರೂ. ತುರ್ತು ಪರಿಹಾರ ಒದಗಿಸಬೇಕಿದ್ದು, ಇದಕ್ಕಾಗಿ ಗೃಹ ಸಚಿವ ಅಮಿತ್ ಶಾ ನೇತೃತ್ವದ ಉನ್ನತ ಮಟ್ಟದ ಸಭೆ ಕರೆಯಲು ನಿರ್ದೇಶಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದರು.
ಭೇಟಿಗೆ ಕಾಲಾವಕಾಶವನ್ನೇ ಕೊಡುತ್ತಿಲ್ಲ ಎಂದು ಪ್ರಧಾನಿ ವಿರುದ್ಧ ಟೀಕಿಸುತ್ತಿದ್ದ ಸಿಎಂ ಸಿದ್ದರಾಮಯ್ಯ, ಮಂಗಳವಾರ ಹೊಸದಿಲ್ಲಿಯಲ್ಲಿ ಪಿಎಂ ಭೇಟಿ ಮಾಡಿದರಲ್ಲದೆ, ಬರ ಪರಿಹಾರ ಹಾಗೂ ನೀರಾವರಿ ಯೋಜನೆಗಳ ಕುರಿತು ಸುದೀರ್ಘ ಚರ್ಚೆ ನಡೆಸಿದರು.
ಬಳಿಕ ಸುದ್ದಿಗೋಷ್ಠಿ ನಡೆಸಿದ ಸಿಎಂ, ರಾಜ್ಯದ 236 ತಾಲೂಕುಗಳ ಪೈಕಿ 223 ತಾಲೂಕುಗಳನ್ನು ಮೂರು ಹಂತಗಳಲ್ಲಿ ಬರಪೀಡಿತ ಎಂದು ಘೋಷಿಸಿದ್ದು, 48.19 ಲಕ್ಷ ಹೆಕ್ಟೇರ್ ಬೆಳೆ ನಷ್ಟವಾಗಿದೆ. ಹೀಗಾಗಿ 12,757.86 ಕೋಟಿ ರೂ. ತುರ್ತು ಪರಿಹಾರ, 4663.12 ಕೋಟಿ ರೂ. ಇನ್‌ಪುಟ್ ಸಬ್ಸಿಡಿ, ಕುಡಿಯುವ ನೀರಿಗೆ 566.78 ಕೋಟಿ ರೂ. ಹಾಗೂ ಜಾನುವಾರುಗಳ ಸಂರಕ್ಷಣೆಗಾಗಿ 363.68 ಕೋಟಿ ರೂ. ಸೇರಿ ಒಟ್ಟು 18,177.44 ಕೋಟಿ ರೂ. ನೆರವು ಕೋರಿದ್ದೇವೆ. ಮೊದಲ ಹಂತದ ಬರಪೀಡಿತ ತಾಲೂಕುಗಳನ್ನು ಘೋಷಿಸಿ, ಪರಿಹಾರಕ್ಕಾಗಿ ಮನವಿ ಸಲ್ಲಿಸಿ 3 ತಿಂಗಳಾಗಿವೆ. ರೈತರು ಅತ್ಯಂತ ಸಂಕಷ್ಟದ ಪರಿಸ್ಥಿತಿಯಲ್ಲಿದ್ದಾರೆ. ಬೆಳೆ ವಿಫಲವಾಗಿರುವ ಹಿನ್ನೆಲೆಯಲ್ಲಿ ಇನ್‌ಪುಟ್ ಸಬ್ಸಿಡಿ ನೀಡುವುದು ಅತ್ಯಗತ್ಯವಾಗಿದೆ. ರೈತರ ಹಿತರಕ್ಷಣೆ ದೃಷ್ಟಿಯಿಂದ ಪರಿಹಾರ ಬಿಡುಗಡೆ ಮಾಡುವಂತೆ ಕೋರಿರುವುದಾಗಿ ಹೇಳಿದರು.
ಹೈಪವರ್ ಕಮಿಟಿ ಸಭೆಯೇ ನಡೆದಿಲ್ಲ
ಎನ್‌ಡಿಆರ್‌ಎಫ್ ನೆರವು ಬಿಡುಗಡೆ ಆಗಬೇಕಿದ್ದರೆ ಹೈಪರ್ ಕಮಿಟಿಯ ಅನುಮೋದನೆ ಬೇಕಿರುತ್ತದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೇ ಉನ್ನತ ಮಟ್ಟದ ಸಮಿತಿಯ ಅಧ್ಯಕ್ಷರಾಗಿದ್ದು, ಇದುವರೆಗೆ ಸಭೆಯನ್ನೇ ಕರೆದಿಲ್ಲ. ರಾಜ್ಯಕ್ಕೆ ಬರ ಪರಿಹಾರ ಸಿಗಬೇಕೆಂದರೆ, ಗೃಹ ಸಚಿವ ಅಮಿತ್ ಶಾ ನೇತೃತ್ವದ ಹೈ ಪವರ್ ಕಮಿಟಿ ಸಭೆ ನಡೆಯಬೇಕು. ನಾವು ಇದುವರೆಗೂ ಮೂರು ಬಾರಿ ಕೇಂದ್ರಕ್ಕೆ ಮನವಿ ಸಲ್ಲಿಸಿದ್ದರೂ, ಪ್ರಾಥಮಿಕ ಸಭೆಯನ್ನೂ ನಡೆಸಿಲ್ಲ. ಆದ್ದರಿಂದ ತುರ್ತಾಗಿ ಸಭೆ ನಡೆಸಿ ಶೀಘ್ರ ಬರ ಪರಿಹಾರ ಬಿಡುಗಡೆಗೊಳಿಸಲು ಸೂಚಿಸಬೇಕು ಎಂದು ಪ್ರಧಾನಿ ಅವರಿಗೆ ಮನವಿ ಮಾಡಿದ್ದೇವೆ ಎಂದರು.
ಕೇಂದ್ರದ ಮುಂದೆ ರಾಜ್ಯದ 5 ಪ್ರಮುಖ ಬೇಡಿಕೆ
ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದ ಉನ್ನತ ಮಟ್ಟದ ಸಮಿತಿ ಸಭೆ ನಡೆಸಿ 18,177 ಕೋಟಿ ರೂ. ಎನ್‌ಡಿಆರ್‌ಎಫ್ ನೆರವನ್ನು ರಾಜ್ಯಕ್ಕೆ ಶೀಘ್ರ ನೀಡಬೇಕು.
ಬರ ಪರಿಸ್ಥಿತಿಯಲ್ಲಿ ನರೇಗಾ ಕೆಲಸವನ್ನು 100 ರಿಂದ 150 ದಿನಗಳಿಗೆ ಕಡ್ಡಾಯವಾಗಿ ಹೆಚ್ಚಿಸಲು ಕಾನೂನಿನಲ್ಲಿ ಅವಕಾಶವಿದೆ. ಅದರಂತೆ ಹೆಚ್ಚಿಸಲು 3 ತಿಂಗಳ ಹಿಂದೆಯೇ ನಾವು ಕೇಂದ್ರಕ್ಕೆ ಮನವಿ ಮಾಡಿದ್ದೇವೆ. ಈ ಮನವಿ ಈಡೇರಿಲ್ಲ. ಈ ಬಗ್ಗೆಯೂ ತುರ್ತಾಗಿ ತೀರ್ಮಾನ ತೆಗೆದುಕೊಳ್ಳಬೇಕು.
ಮಹದಾಯಿ ವಿಚಾರದಲ್ಲಿ ಈಗಾಗಲೇ ಅಧಿ ಸೂಚನೆ ಕೂಡ ಆಗಿದೆ. ಬೇರೆ ಅಡೆತಡೆ ಏನೂ ಇಲ್ಲ. ಪರಿಸರ ಇಲಾಖೆ ಅನುಮೋದನೆ ಮಾತ್ರ ಬಾಕಿ ಇದೆ. ಇದನ್ನು ಕೇಂದ್ರವೇ ಕೊಡಬೇಕು. ಇದು
ವರೆಗೂ ಕೊಟ್ಟಿಲ್ಲ. ಟೆಂಡರ್ ಕರೆದು ಅಂದಾಜು ಪಟ್ಟಿ ಕೂಡ ಸಿದ್ಧಪಡಿಸಿದೆ. ಕೇಂದ್ರ ಕ್ಲಿಯರೆನ್ಸ್ ಕೊಟ್ಟ ಕೂಡಲೇ ಕೆಲಸ ಶುರು ಮಾಡಬಹುದು. ಆದ್ದರಿಂದ ಬೇಗ ಅನುಮೊದನೆ ಕೊಡಿಸಬೇಕು.
ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್‌ನಲ್ಲಿ 5,300 ಕೋಟಿ ಘೋಷಿಸಿದ್ದರು. ಇವರ ಘೋಷಣೆ ಆಧಾರದಲ್ಲಿ ಹಿಂದಿನ ಮುಖ್ಯಮಂತ್ರಿ ಬೊಮ್ಮಾಯಿ ಅವರೂ 5,300 ಕೋಟಿ ಘೋಷಿಸಿದ್ದರು. ಇವತ್ತಿನವರೆಗೂ ಒಂದು ರೂಪಾಯಿ ಕೂಡ ಬಂದಿಲ್ಲ. ಇದು ಕೇಂದ್ರ ಮತ್ತು ಹಿಂದಿನ ಬಿಜೆಪಿ ಸರ್ಕಾರದ ಹೊಣೆಗಾರಿಕೆ. ನೀವೇ ಕೊಟ್ಟಿರುವ ಮಾತಿನಂತೆ ಹಣ ಬಿಡುಗಡೆ ಮಾಡಿ.
ಮೇಕೆದಾಟು, ಕುಡಿಯುವ ನೀರಿನ ಯೋಜನೆ. ರಾಜ್ಯದ ಗಡಿಯ ಒಳಗೆ ನಿರ್ಮಾಣ ಆಗುವ ಯೋಜನೆ. ತಮಿಳುನಾಡು ಸರಕಾರ ರಾಜಕೀಯ ಕಾರಣಕ್ಕೆ ತಕರಾರು ಮಾಡುತ್ತಿದೆ. ಇದರಿಂದ ತಮಿಳುನಾಡಿಗೇ ಹೆಚ್ಚು ಅನುಕೂಲ. ನಮಗೆ ಕುಡಿಯುವ ನೀರಿನ ಜತೆಗೆ 400 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಆಗುತ್ತದೆ. ವಿದ್ಯುತ್ ಉತ್ಪಾದನೆ ಬಳಿಕ ಈ ನೀರು ಕೂಡ ತಮಿಳುನಾಡಿಗೇ ಹೋಗ್ತದೆ. ಇದರಿಂದಲೂ ಅವರಿಗೇ ಅನುಕೂಲ. ಮೇಕೆದಾಟು ಆದರೆ ಬೆಂಗಳೂರು ಮತ್ತು ರಾಮನಗರ ಜಿಲ್ಲೆಗೆ ಕುಡಿಯುವ ನೀರಿಗೆ ಅನುಕೂಲ ಆಗತ್ತೆ. ಆದ್ದರಿಂದ ಮೇಕೆದಾಟುಗೆ ಬೇಗ ಅನುಮತಿ ಕೊಡಿಸುವಂತೆ ಪ್ರಧಾನಿಗಳ ಗಮನಕ್ಕೆ ತಂದು ಒತ್ತಾಯಿಸಲಾಗಿದೆ.
ನಾವು ಮುಖ್ಯವಾಗಿ ಐದು ಒತ್ತಾಯಗಳನ್ನು ಮಂಡಿಸಿ ಮನವಿ ಮಾಡಿದ್ದೇವೆ. ನಮ್ಮ ಮನವಿಯನ್ನು ಸಮಾಧಾನದಿಂದ ಕೇಳಿಸಿಕೊಂಡು ಪ್ರಧಾನಿ ಅವರು ಸ್ಪಂದಿಸಿದ್ದಾರೆ. ಸ್ಪಂದನೆಗೆ ತಕ್ಕಂತೆ ಶೀಘ್ರ ಪರಿಹಾರವನ್ನೂ ಅವರಿಂದ ನಿರೀಕ್ಷಿಸಿದ್ದೇವೆ. ಮಹದಾಯಿ, ಮೇಕೆದಾಟು, ಭದ್ರಾ ಮೇಲ್ದಂಡೆ ಯೋಜನೆಗಳಿಗಾಗಿ ನಾವು ಸರ್ವ ಪಕ್ಷ ನಿಯೋಗದ ಜತೆ ಕೇಂದ್ರಕ್ಕೆ ಬರಲು ಸಿದ್ಧರಿದ್ದೇವೆ ಎಂಬುದನ್ನೂ ತಿಳಿಸಿದ್ದೇವೆ.
– ಸಿದ್ದರಾಮಯ್ಯ, ಮುಖ್ಯಮಂತ್ರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.