Karnataka: ಗೃಹಲಕ್ಷ್ಮಿ ಗೊಂದಲ: ಸಚಿವೆ ಲಕ್ಷ್ಮೀ ಹೆಬ್ಟಾಳ್ಕರ್ ಸ್ಪಷ್ಟನೆ
Team Udayavani, Sep 7, 2023, 10:13 PM IST
ಬೆಂಗಳೂರು: ಗೃಹಲಕ್ಷ್ಮೀ ಯೋಜನೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದು, ಶೀಘ್ರವೇ ನೋಂದಣಿ ಪುನರಾರಂಭ ಮಾಡಲಾಗುವುದು ಎಂದು ಟ್ವೀಟ್ ಮಾಡಿದ್ದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಸಾಕಷ್ಟು ವಿವಾದದ ನಂತರ ಟ್ವೀಟ್‌ನ್ನು ಅಳಿಸಿ ಹಾಕಿದೆ.
ನೋಂದಾಯಿತ ಫಲಾನುಭವಿಗಳ ಖಾತೆಗೆ 2 ಸಾವಿರ ರೂ. ಜಮೆ ಮಾಡುವ ಪ್ರಕ್ರಿಯೆಯಲ್ಲಿ ಗೊಂದಲ ಆಗದಿರಲೆಂದು ನೋಂದಣಿಯನ್ನು ತಾತ್ಕಾಲಿಕ ಸ್ಥಗಿತ ಮಾಡುವುದಾಗಿ ಟ್ವೀಟ್ ಮಾಡಲಾಗಿತ್ತು. ಈ ಪೋಸ್ಟ್ ವೈರಲ್ ಆಗುತ್ತಿದ್ದಂತೆಯೇ ಸಚಿವರ ಸೂಚನೆ ಮೇರೆಗೆ ಟ್ವಿಟ್ಟರ್ ಅನ್ನು ಡಿಲೀಟ್ ಮಾಡಲಾಯಿತು.
ಮತ್ತೆ ಸ್ಪಷ್ಟನೆ ನೀಡಿರುವ ಸಚಿವೆ ಲಕ್ಷ್ಮೀ ಹೆಬ್ಟಾಳ್ಕರ್, ಗೃಹಲಕ್ಷ್ಮೀ ಯೋಜನೆಯ ನೋಂದಣಿ ಪ್ರಕ್ರಿಯೆ ಯಾವುದೇ ಕಾರಣಕ್ಕೂ ಸ್ಥಗಿತಗೊಳ್ಳುವುದಿಲ್ಲ. ಕೆಲವರ ಅಚಾತುರ್ಯದಿಂದ ಈ ರೀತಿ ಆಗಿದೆ ಎಂದರು.
ತಪ್ಪಿತಸ್ಥರ ವಿರುದ್ಧ ಕ್ರಮ
ಸಾಮಾಜಿಕ ಜಾಲತಾಣದಲ್ಲಿ ತಪ್ಪು ಮಾಹಿತಿ ಹರಡಿದವರಿಗೆ ನೋಟಿಸ್ ಜಾರಿ ಮಾಡುತ್ತೇವೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗುವುದು. ಈ ಕುರಿತು ಇಲಾಖೆ ಕಾರ್ಯದರ್ಶಿ, ನಿರ್ದೇಶಕರೊಂದಿಗೆ ಸಭೆ ನಡೆಸಿದ್ದು, ಸಂಬಂಧಿಸಿದವರ ಮೇಲೆ ಕ್ರಮಕ್ಕೆ ಸೂಚಿಸಲಾಗಿದೆ ಎಂದರು.
63 ಲಕ್ಷ ಮಂದಿ ಖಾತೆಗೆ ಹಣ ಜಮೆ
ಇದುವರೆಗೂ ಸುಮಾರು 63 ಲಕ್ಷ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಜಮೆ ಆಗಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಟಾಳ್ಕರ್ ಹೇಳಿದರು. ಯೋಜನೆಯ ಒಟ್ಟು 1.28 ಕೋಟಿ ಫಲಾನುಭವಿಗಳ ಪೈಕಿ 1.12 ಕೋಟಿ ಫಲಾನುಭವಿಗಳು ಈವರೆಗೆ ಹೆಸರು ನೋಂದಾಯಿಸಿಕೊಂಡಿದ್ದು, ಈ ಪೈಕಿ 63 ಲಕ್ಷ ಮಹಿಳೆಯರಿಗೆ ಹಣ ಸಂದಾಯವಾಗಿದೆ. ಕೆಲವೊಂದು ತಾಂತ್ರಿಕ ಕಾರಣಗಳಿಂದಾಗಿ ಬ್ಯಾಂಕ್‌ಗಳಲ್ಲಿ ಹಣ ಸಂದಾಯವಾಗುವುದು ತಡವಾಗಿದೆ.ಇನ್ನೂ ನಾಲ್ಕೈದು ದಿನಗಳಲ್ಲಿ ಎಲ್ಲರಿಗೂ ಹಣ ವರ್ಗಾವಣೆ ಆಗಲಿದೆ ಎಂದು ಸಚಿವರು ತಿಳಿಸಿದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.