ಜಿಎಸ್‌ಟಿ ಸಂಗ್ರಹ ಸಾರ್ವಕಾಲಿಕ ದಾಖಲೆ
Team Udayavani, May 2, 2022, 7:10 AM IST
ಹೊಸದಿಲ್ಲಿ: ಎಪ್ರಿಲ್ ತಿಂಗಳಿನಲ್ಲಿ 1.68 ಲಕ್ಷ ಕೋ.ರೂ. ಜಿಎಸ್‌ಟಿ ಸಂಗ್ರಹವಾಗಿದ್ದು, ಸಾರ್ವಕಾಲಿಕ ದಾಖಲೆ ನಿರ್ಮಾಣ ವಾಗಿದೆ.
ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ಈ ಎಪ್ರಿಲ್‌ನಲ್ಲಿ ಶೇ. 20ರಷ್ಟು ಹೆಚ್ಚಳವಾಗಿದೆ. ಉದ್ದಿಮೆ ಚಟು ವಟಿಕೆಗಳ ಚೇತರಿಕೆಯೇ ಇದಕ್ಕೆ ಕಾರಣ ಎಂದು ಕೇಂದ್ರ ಹಣಕಾಸು ಸಚಿವಾಲಯ ಹೇಳಿದೆ.
ಕಳೆದ ತಿಂಗಳು 1.67 ಲಕ್ಷ ಕೋ.ರೂ. ಜಿಎಸ್‌ಟಿ ಸಂಗ್ರಹವಾಗಿದ್ದರೆ, ಮಾರ್ಚ್‌ನಲ್ಲಿ 1.42 ಲಕ್ಷ ಕೋ.ರೂ. ಸಂಗ್ರಹವಾಗಿತ್ತು.
ಈ ವರ್ಷದ ಎ. 20ರಂದು 57,847 ಕೋ.ರೂ. ಜಿಎಸ್‌ಟಿ ಪಾವತಿಯಾಗಿದ್ದು, ಒಂದು ದಿನದಲ್ಲಿ ಸಂಗ್ರಹವಾದ ಅತ್ಯಧಿಕ ಮೊತ್ತವಾಗಿದೆ. ಕಳೆದ ತಿಂಗಳು ಕರ್ನಾಟಕವು 11,820 ಕೋ.ರೂ. ಜಿಎಸ್‌ಟಿ ಸಂಗ್ರಹಿಸಿದೆ. 2021ರ ಎಪ್ರಿಲ್‌ನಲ್ಲಿ ಇದು 9,955 ಕೋ. ರೂ. ಆಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!
Bengaluru: ಅನಧಿಕೃತ ಮಳಿಗೆಗಳ ತೆರವು ಕೋರಿ ಅರ್ಜಿ:ಪಾಲಿಕೆಗೆ ಹೈಕೋರ್ಟ್ ನೋಟಿಸ್
Bengaluru: ವಿಶ್ವನಾಥ್‌ಗೆ ಕೊಲೆ ಬೆದರಿಕೆ: ಆರೋಪಿ ಅರ್ಜಿ ವಜಾ
BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್: ಭಾರತದ ಹಿಡಿತದಲ್ಲಿ ಪರ್ತ್ ಟೆಸ್ಟ್
Bengaluru: ಮರಕ್ಕೆ ಬೈಕ್ ಡಿಕ್ಕಿ ಹೊಡೆದು ಯುವಕ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.