Karnataka: ಗ್ಯಾರಂಟಿಗಳಿಗೆ ಸಿಗದ ಪ್ರಚಾರ, ಹೈಕಮಾಂಡ್ ಅಸಮಾಧಾನ
ಪ್ರತಿಯೊಂದು ಮನೆಗೂ ತೆರಳಿ ಯೋಜನೆ ಬಗ್ಗೆ ತಿಳಿಸಲು ಅಭಿಯಾನ ಆರಂಭಿಸುವಂತೆ ಸಲಹೆ
Team Udayavani, Nov 1, 2023, 11:08 PM IST
ಬೆಂಗಳೂರು: ರಾಜ್ಯ ಸರಕಾರ ಅಧಿಕಾರಕ್ಕೆ ಬಂದ ಆರಂಭದಲ್ಲೇ ಶಕ್ತಿ, ಗೃಹಜ್ಯೋತಿ, ಅನ್ನಭಾಗ್ಯ ಹಾಗೂ ಗೃಹಲಕ್ಷ್ಮಿಯಂತಹ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿ ದ್ದರೂ ಅದಕ್ಕೆ ಸರಕಾರ ಹಾಗೂ ಪಕ್ಷದಿಂದ ಅಗತ್ಯ ಪ್ರಚಾರ ಸಿಗುತ್ತಿಲ್ಲ ಎಂದು ಹೈಕಮಾಂಡ್ ಅಸಮಾಧಾನ ವ್ಯಕ್ತಪಡಿಸಿದೆ ಎಂದು ಹೇಳಲಾಗಿದೆ.
ಸಿಎಂ ಮತ್ತು ಡಿಸಿಎಂ ಜತೆಗೆ ಸುದೀರ್ಘ ಮಾತುಕತೆ ನಡೆಸಿರುವ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಮತ್ತು ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣು ಗೋಪಾಲ್ ಅವರು, ಸಚಿವರು, ಶಾಸಕರು ಅಧಿಕಾರ ಹಂಚಿಕೆ, ಸಿಎಂ, ಡಿಸಿಎಂ ವಿಷಯಗಳ ಬಗ್ಗೆ ನಿತ್ಯವೂ ಮಾಧ್ಯಮಗಳ ಮುಂದೆ ಹೇಳಿಕೆ ನೀಡುತ್ತಿರುವುದರಿಂದ ಗ್ಯಾರಂಟಿ ಯೋಜನೆಗಳು ಇಂಥ ಬೇಡವಾದ ವಿಷಯಗಳಲ್ಲಿ ಮುಳುಗಿ ಹೋಗಿವೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ ಎಂದು ಗೊತ್ತಾಗಿದೆ.
ಗ್ಯಾರಂಟಿಗಳಿಗೆ ಅಭಿಯಾನ: ಮುಂಬರುವ ಲೋಕಸಭಾ ಚುನಾ ವಣೆಯಲ್ಲಿ ಪಕ್ಷ ಅತ್ಯಧಿಕ ಸ್ಥಾನಗಳನ್ನು ಗೆಲ್ಲಬೇಕಾದರೆ ಗ್ಯಾರಂಟಿ ಯೋಜನೆಗಳ ಬಗ್ಗೆ ರಾಜ್ಯದ ಪ್ರತಿ ಮನೆಗೂ ಕಾರ್ಯಕರ್ತರು ತೆರಳಿ ಫಲಾನುಭವಿಗಳ ಜತೆ ಮಾತನಾಡಿಸ ಬೇಕೆಂದು ಸಲಹೆ ನೀಡಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಶಿವಕುಮಾರ್ ಜತೆ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸುಜೇìವಾಲ, ಮುಂದಿನ 15 ದಿನಗಳಲ್ಲಿ ಲೋಕ ಸಭಾ ಚುನಾವಣೆಗೆ ಪಕ್ಷದ ಸಂಭಾವ್ಯ ಅಭ್ಯರ್ಥಿಗಳ ಹೆಸರು ಸೂಚಿಸಲು ತಿಳಿಸಲಾಗಿದೆ. ಈ ಸಂಬಂಧ ಸ್ಥಳೀಯ ಮಟ್ಟದಲ್ಲಿ ಸಭೆಗಳನ್ನು ನಡೆಸಲು ತಿಳಿಸಿದ್ದೇವೆ ಎಂದರು.
ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳನ್ನು ತಳಮಟ್ಟದಲ್ಲಿ ಪರಿಣಾಮಕಾರಿಯಾಗಿ ಜಾರಿ ಮಾಡಿ ಜನರಿಗೆ ತಲುಪಿಸಲು ನಿರಂತರವಾಗಿ ಗ್ಯಾರಂಟಿ ಯೋಜನೆಗಳನ್ನು ನಾವು ಪರಿಶೀಲಿಸುತ್ತೇವೆ. ಈ ಯೋಜನೆಗಳ ಜಾರಿಗೆ ಎಲ್ಲೇ ತೊಂದರೆ ಆದರೂ ಅದಕ್ಕೆ ಸಂಬಂಧಿಸಿದ ಸಚಿವರು ಸಮಸ್ಯೆ ಬಗೆಹರಿಸಲಿದ್ದಾರೆ ಎಂದು ಹೇಳಿದರು.
ಪಕ್ಷದ ಸಂಘಟನೆ ಬದಲಾವಣೆ ವಿಚಾರವಾಗಿ ಕೇಳಿದ ಪ್ರಶ್ನೆ ಉತ್ತರಿಸಿದ ಅವರು, ಈ ವಿಚಾರ ವಾಗಿ ಚರ್ಚೆ ನಡೆಯುತ್ತಿದೆ. ಈ ವಿಚಾರವನ್ನು ಎಐಸಿಸಿ ಅಧ್ಯಕ್ಷರ ಗಮನಕ್ಕೆ ತರಲಾಗುವುದು. ಹಾಲಿ ಪದಾಧಿಕಾರಿಗಳ ಪೈಕಿ ಹಲವರು ಶಾಸಕರು, ಸಚಿವರಾಗಿದ್ದಾರೆ. ಅವರನ್ನು ಸಂಘಟನೆ ಜವಾಬ್ದಾರಿ ಯಿಂದ ಬಿಡುಗಡೆ ಮಾಡಬೇಕಿದೆ. ಯುವಕರು, ಹೊಸಬರಿಗೆ ಸಂಘಟನೆಯ ಜವಾಬ್ದಾರಿ ನೀಡಲು ಚಿಂತನೆ ನಡೆಸಲಾಗುತ್ತಿದೆ ಎಂದರು.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ವಿಧಾನ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಮಾಧ್ಯಮ ವಿಭಾಗದ ಉಪಾಧ್ಯಕ್ಷ ದಿನೇಶ್ ಗೂಳಿಗೌಡ ಉಪಸ್ಥಿತರಿದ್ದರು.
ಸಚಿವರ ಕಾರ್ಯವೈಖರಿಗೆ ಗರಂ
ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಸಂಭವನೀಯ ಅಭ್ಯರ್ಥಿಗಳ ಪಟ್ಟಿ ಸಲ್ಲಿಸುವಂತೆ ಉಸ್ತುವಾರಿ ಸಚಿವರಿಗೆ 2 ತಿಂಗಳ ಹಿಂದೆಯೇ ಎಐಸಿಸಿ ಸೂಚಿಸಿದ್ದರೂ ಇನ್ನೂ ಬಹುತೇಕರು ಪಟ್ಟಿ ಸಲ್ಲಿಸದಿರುವುದರ ಬಗ್ಗೆ ಗರಂ ಆಗಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು, 2 ತಿಂಗಳಾದರೂ ಪಟ್ಟಿ ಕೊಟ್ಟಿಲ್ಲವೆಂದರೆ ಏನರ್ಥ? ರಾಜ್ಯದಲ್ಲೇ ಇದ್ದರೂ ಯಾಕೆ ಪ್ರವಾಸ ಮಾಡುತ್ತಿಲ್ಲವೆಂದು ಪ್ರಶ್ನಿಸಿದರು ಎನ್ನಲಾಗಿದೆ. 15 ದಿನಗಳೊಳಗೆ ಪೂರ್ಣ ಪಟ್ಟಿ ಸಲ್ಲಿಸಲು ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.