ಸೋರುತಿಹುದು, ಸೊರಗುತಿಹುದು ನೋಡಿ ಪೊಲೀಸ್‌ ವಸತಿ ಗೃಹ : ಎದ್ದು ಕಾಣುತ್ತಿವೆ ಸರಳುಗಳು

Team Udayavani, Feb 16, 2022, 10:00 AM IST

ಸೋರುತಿಹುದು, ಸೊರಗುತಿಹುದು ನೋಡಿ ಪೊಲೀಸ್‌ ವಸತಿ ಗೃಹ : ಎದ್ದು ಕಾಣುತ್ತಿವೆ ಸರಳುಗಳು

ಉಡುಪಿ : ಮಣಿಪಾಲ 6ನೇ ಬ್ಲಾಕ್‌ನಲ್ಲಿರುವ ಪೊಲೀಸ್‌ ವಸತಿ ಗೃಹದ ಮೇಲ್ಛಾವಣೆ ಕಳಪೆ ಕಾಮಗಾರಿಯಿಂದಾಗಿ ಕೆಳಕ್ಕೆ ಉರುಳುತ್ತಿದೆ. ಶೀಘ್ರದಲ್ಲಿ ಇದರ ದುರಸ್ತಿ ಕಾರ್ಯ ನಡೆಯದಿದ್ದರೆ ಮತ್ತಷ್ಟು ಅನಾಹುತಗಳು ನಡೆಯುವ ಸಾಧ್ಯತೆಗಳಿವೆ.

ಸುಮಾರು 15 ವರ್ಷಕ್ಕೂ ಹಿಂದೆ ಈ ಕಟ್ಟಡ ನಿರ್ಮಾಣವಾಗಿದ್ದು ಸೂಕ್ತ ನಿರ್ವಹಣೆ ಇಲ್ಲದಂತಾ ಗಿದೆ. 6ನೇ ಬ್ಲಾಕ್‌ನಲ್ಲಿ 12 ಸಮುಚ್ಚಯಗಳಿವೆ. 10 ಬ್ಲಾಕ್‌ನಲ್ಲಿ 120 ಸಮುಚ್ಚಯಗಳಿವೆ. ಈ ಬಗ್ಗೆ ಶೀಘ್ರದಲ್ಲಿ ಕ್ರಮ ತೆಗೆದುಕೊಂಡರಷ್ಟೇ ಪರಿಹಾರ ಸಾಧ್ಯವಾಗಲಿದೆ ಇಲ್ಲದಿದ್ದರೆ ಕಟ್ಟಡಕ್ಕೆ ಮತ್ತಷ್ಟು ಹಾನಿಯುಂಟಾಗಲಿದೆ.

ನಿರ್ವಹಣೆ ಕೊರತೆ
ಪೊಲೀಸರಿಗೆ ಸುಸಜ್ಜಿತ ವಸತಿ ಗೃಹಗಳನ್ನು ನಿರ್ಮಾಣ ಮಾಡಿದ್ದರೂ ಸೂಕ್ತ ರೀತಿಯಲ್ಲಿ ನಿರ್ವಹಣೆ ಮಾಡದ ಕಾರಣ ಸಮಸ್ಯೆ ಎದುರಾಗು ತ್ತಿದೆ. ಇಲ್ಲಿ 120 ವಸತಿ ಸಮುಚ್ಚಯಗಳಿದ್ದು, 104 ಮಂದಿ ವಾಸವಾಗಿದ್ದಾರೆ. ಆರನೇ ಬ್ಲಾಕ್‌ ಸಮುಚ್ಚಯ ದಲ್ಲಿಯೂ ವಾಸವಿದ್ದಾರೆ.

ಪೈಂಟಿಂಗ್‌ ಇಲ್ಲ
ರಾಜ್ಯ ಪೊಲೀಸ್‌ ವಸತಿ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮದ ವತಿಯಿಂದ ಈ ಕಟ್ಟಡ ನಿರ್ಮಾಣ ಗೊಂಡಿದ್ದು, ಅನಂತರದ ದಿನಗಳಲ್ಲಿ ಬಣ್ಣ ಬಳಿಯುವ ಕೆಲಸವೂ ನಡೆದಿಲ್ಲ. ಈ ಕಾರಣದಿಂದಾಗಿ ಕಟ್ಟಡದ ಮಹಡಿಯಿಂದ ಕಲ್ಲುಹುಡಿಗಳು ಉದುರುತ್ತಿವೆ.

ಇದನ್ನೂ ಓದಿ : ಭಟ್ಕಳ: ಸಮುದ್ರದಲ್ಲಿ ಅಪಾಯಕ್ಕೆ ಸಿಲುಕಿದ ಮೂವರನ್ನು ರಕ್ಷಿಸಿದ ಲೈಫ್ ಗಾರ್ಡ್

ಎದ್ದು ಕಾಣುತ್ತಿವೆ ಸರಳುಗಳು
ಸಿಮೆಂಟ್‌ ಕಾಂಕ್ರೀಟ್‌ಗಳು ಕೆಳಕ್ಕೆ ಬಿದ್ದು, ಮೇಲ್ಗಡೆ ಯಲ್ಲಿ ಅಳವಡಿಸಿರುವ ಸರಳುಗಳು ಎದ್ದು ಕಾಣುತ್ತಿವೆ. ಮಳೆಗಾಲಕ್ಕೆ ಇನ್ನೂ 4 ತಿಂಗಳು ಸಮಯಾವಕಾಶ ವಿದ್ದು, ಅಷ್ಟರೊಳಗೆ ಇದರ ದುರಸ್ತಿ ಕಾಮಗಾರಿ ನಡೆಯಬೇಕಿದೆ. ಇಲ್ಲದಿದ್ದರೆ ಮಳೆಗಾಲದಲ್ಲಿ ವಾಸಿಸಲು ಅಯೋಗ್ಯವಾಗುವ ಸಾಧ್ಯತೆಗಳಿವೆ.

ಈ ಹಿಂದೆಯೂ ಸೋರಿಕೆ
ಮಣಿಪಾಲದಲ್ಲಿ ಈ ಹಿಂದೆಯೂ 7ನೇ ಬ್ಲಾಕ್‌ನಲ್ಲಿ ಇಂತಹ ಘಟನೆ ನಡೆದಿತ್ತು. ಮೇಲಧಿಕಾರಿ ಗಳು ಪರಿಶೀಲನೆ ನಡೆಸಿದ ಬಳಿಕ ಅದನ್ನು ದುರಸ್ತಿಪಡಿಸಲಾಗಿತ್ತು.

ಸೂಕ್ತ ಅನುದಾನ ಕೊರತೆ
ಮಣಿಪಾಲದ ಪೊಲೀಸ್‌ ವಸತಿಗೃಹಗಳ ನಿರ್ವಹಣೆಗೆ ಸೂಕ್ತ ಅನುದಾನದ ಕೊರತೆಯೂ ಎದುರಾಗಿದೆ. ಸಣ್ಣ ಪುಟ್ಟ ಸಮಸ್ಯೆಗಳು ನಿವಾರಣೆಯಾಗು ತ್ತವೆಯಾದರೂ ಪೈಟಿಂಗ್‌ ಸಹಿತ ಇತರ ಕಾಮಗಾರಿಗಳಿಗೆ ಹೆಚ್ಚಿನ ಅನುದಾನ ಬೇಕಾಗಿರುವ ಕಾರಣ ವಿಳಂಬವಾಗಲು ಕಾರಣವಾಗುತ್ತಿವೆ ಎನ್ನುತ್ತವೆ ಪೊಲೀಸ್‌ ಇಲಾಖೆ ಮೂಲಗಳು.

ಸೂಕ್ತ ಕ್ರಮ
ಪೊಲೀಸ್‌ ವಸತಿ ಸಮು ಚ್ಚಯಗಳ ನಿರ್ವಹಣೆ ಬಗ್ಗೆ ಡಿವೈಎಸ್‌ಪಿ ಹಾಗೂ ಎಸ್‌ಎಚ್‌ಒಗಳು ಪ್ರತೀ ವಾರ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಮಣಿಪಾಲ ವಸತಿ ಸಮುಚ್ಚಯದಲ್ಲಿ ಸೋರಿಕೆಯಾಗುತ್ತಿರುವ ಬಗ್ಗೆ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು.
-ಎನ್‌.ವಿಷ್ಣುವರ್ಧನ್‌, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ, ಉಡುಪಿ

ಟಾಪ್ ನ್ಯೂಸ್

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

ಗೂಗಲ್ ಮ್ಯಾಪ್ ನಂಬಿ ನಿರ್ಮಾಣ ಹಂತದ ಸೇತುವೆಯಲ್ಲಿ ಚಲಿಸಿ ನದಿಗೆ ಬಿದ್ದ ಕಾರು, ಮೂವರು ಮೃತ್ಯು

ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

G.parameshwar

Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್‌

Fish-Agriculture

Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police

Udupi: ಆದಿ ಉಡುಪಿ: ಜುಗಾರಿ ಅಡ್ಡೆಗೆ ಪೊಲೀಸ್‌ ದಾಳಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ‌ ಒಂದು ವರ್ಷದ ಮರಿ ಚಿರತೆ ರಕ್ಷಣೆ

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

puttige-5

Udupi:ಗೀತಾರ್ಥ ಚಿಂತನೆ 103: ಪಂಡಿತರೆಂದರೇನು?ಅಥವ ಪಂಡಿತರೆಂದರೆ ಯಾರು?

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

ಗೂಗಲ್ ಮ್ಯಾಪ್ ನಂಬಿ ನಿರ್ಮಾಣ ಹಂತದ ಸೇತುವೆಯಲ್ಲಿ ಚಲಿಸಿ ನದಿಗೆ ಬಿದ್ದ ಕಾರು, ಮೂವರು ಮೃತ್ಯು

ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

G.parameshwar

Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.