ತಪ್ಪು ಸರಿಪಡಿಸಿಕೊಳ್ಳಲು ಮುಂದಾದ ಅತಿಥಿ ಉಪನ್ಯಾಸಕ ಅಭ್ಯರ್ಥಿಗಳು!


Team Udayavani, Feb 3, 2022, 5:30 AM IST

ತಪ್ಪು ಸರಿಪಡಿಸಿಕೊಳ್ಳಲು ಮುಂದಾದ ಅತಿಥಿ ಉಪನ್ಯಾಸಕ ಅಭ್ಯರ್ಥಿಗಳು!

ಉಡುಪಿ: ರಾಜ್ಯದ ಸರಕಾರಿ ಪದವಿ ಕಾಲೇಜುಗಳಲ್ಲಿ ಕಾರ್ಯಭಾರಕ್ಕೆ ಅನುಗುಣವಾಗಿ ಅತಿಥಿ ಉಪನ್ಯಾಸಕರ ನೇಮಕಾತಿಗೆ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಿ, ಕಾಲೇಜು ಹಂತದಲ್ಲಿ ಕೌನ್ಸೆಲಿಂಗ್‌ ನಡೆಸಲಾಗಿತ್ತು. ಈ ವೇಳೆ ತಪ್ಪು ಮಾಹಿತಿ ನೀಡಿ ಆಯ್ಕೆಯಾಗಿರುವ ಅಭ್ಯರ್ಥಿಗಳು ಬೆಂಗಳೂರಿನ ಶೇಷಾದ್ರಿ ರಸ್ತೆಯಲ್ಲಿರುವ ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತರ ಕಚೇರಿಗೆ ಧಾವಿಸಿ ತಪ್ಪು ಸರಿಪಡಿಸಿಕೊಳ್ಳಲು ಪ್ರಯತ್ನಿಸಿದ್ದಾರೆ. ಆದರೆ ಇಲಾಖೆ ಇದಕ್ಕೆ ಅವಕಾಶ ನೀಡಿಲ್ಲ.

ಅತಿಥಿ ಉಪನ್ಯಾಸಕರ ಆಯ್ಕೆಗೆ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿತ್ತು. ವಿಷಯವಾರು ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಸಿದ್ಧಪಡಿಸಿ ಇಲಾಖೆಯ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿತ್ತು. ಕಾಲೇಜುಗಳಲ್ಲಿ ಲಭ್ಯವಿರುವ ಕಾರ್ಯಭಾರಕ್ಕೆ ಅನುಗುಣವಾಗಿ ಕೌನ್ಸೆಲಿಂಗ್‌ ಪ್ರಕ್ರಿಯೆ ನಡೆಸಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳ ಮಾಹಿತಿಯನ್ನು ಇಲಾಖೆಯ ತಂತ್ರಾಂಶದ ಮೂಲಕ ಅಪ್‌ಲೋಡ್‌ಗೆ ಸೂಚನೆ ನೀಡಲಾಗಿತ್ತು. ಜತೆಗೆ ತಪ್ಪು ಮಾಹಿತಿ ನೀಡಿದವರನ್ನು ಆಯ್ಕೆ ಮಾಡಿಕೊಳ್ಳಬಾರದು ಹಾಗೂ ಇಂತಹ ಪ್ರಕರಣಗಳ ಮಾಹಿತಿಯನ್ನು ಪ್ರತ್ಯೇಕವಾಗಿ ನೀಡುವಂತೆ ಕಾಲೇಜಿನ ಪ್ರಾಂಶುಪಾಲರಿಗೆ ನಿರ್ದೇಶನ ನೀಡಲಾಗಿತ್ತು.

ಅರ್ಹರ ಆಗ್ರಹ
ಕೆಲವು ಅಭ್ಯರ್ಥಿಗಳು ತಾವು ನೀಡಿದ್ದ ಮಾಹಿತಿ ತಪ್ಪು ಎಂದು ಅರಿವಾಗುತ್ತಿದ್ದಂತೆ ಸರಿಪಡಿಸಿಕೊಳ್ಳಲು ಕೇಂದ್ರ ಕಚೇರಿಗೆ ದೌಡಾಯಿಸಿದ್ದರು. ಈ ಮಧ್ಯೆ ನಿಖರವಾದ ದಾಖಲೆ ನೀಡಿ, ಅವಕಾಶದಿಂದ ವಂಚಿತರಾಗಿರುವ ಅಭ್ಯರ್ಥಿಗಳು ಎಚ್ಚೆತ್ತುಕೊಂಡಿದ್ದಾರೆ. ಸುಳ್ಳು ದಾಖಲೆ ನೀಡಿದ ಅಭ್ಯರ್ಥಿಗಳಿಗೆ ಅವಕಾಶ ನೀಡಬಾರದು. ಅತಿಥಿ ಉಪನ್ಯಾಸಕರಾಗಿ ಒಂದು ತಿಂಗಳು, ಒಂದೂವರೆ ತಿಂಗಳು ಸೇವೆ ಸಲ್ಲಿಸಿದವರು. 4ರಿಂದ 6 ತಿಂಗಳು ಎಂದು ನಮೂದಿಸಿಕೊಂಡು ಅತಿಥಿ ಉಪನ್ಯಾಸಕರಾಗುತ್ತಿದ್ದಾರೆ. ಇದರಿಂದ ಅವರಿಗೆ 1.50 ಹೆಚ್ಚುವರಿ ಅಂಕ ಸಿಗುತ್ತಿದೆ. ಸುಲಭವಾಗಿ ಅರ್ಹತೆ ಪಡೆಯುತ್ತಿದ್ದಾರೆ. ಈ ಬಗ್ಗೆ ಇಲಾಖೆ ವಿಶೇಷ ಗಮನ ಹರಿಸಬೇಕು ಮತ್ತು ತಪ್ಪು ಮಾಹಿತಿ ನೀಡಿದ ಅಭ್ಯರ್ಥಿಗಳನ್ನು ಆಯ್ಕೆ ಮಾಡಿರುವ ಪ್ರಾಂಶುಪಾಲರ ವಿರುದ್ಧವೂ ಕ್ರಮ ತೆಗೆದುಕೊಳ್ಳಬೇಕು ಎಂದು ನಿಖರ ದಾಖಲೆ ಸಲ್ಲಿಸಿರುವ ಅಭ್ಯರ್ಥಿಗಳು ಆಗ್ರಹಿಸಿದ್ದಾರೆ.

ಅತಿಥಿ ಉಪನ್ಯಾಸಕರಾಗಲು ಸುಳ್ಳು ಮಾಹಿತಿ ನೀಡಿದ ಅನೇಕರು ಕಚೇರಿಗೆ ಬಂದು ಮಾಹಿತಿ ಸರಿಪಡಿಸುವಂತೆ ಆಗ್ರಹಿಸುತ್ತಿದ್ದಾರೆ. ಆದರೆ ಆನ್‌ಲೈನ್‌ನಲ್ಲಿ ಅವರೇ ತುಂಬಿರುವ ಮಾಹಿತಿ ಮತ್ತು ತಿದ್ದುಪಡಿಗೂ ಅವಕಾಶ ನೀಡಿದ್ದೇವೆ. ಈಗ ಯಾವುದೇ ತಿದ್ದುಪಡಿ ಮಾಡಲು ಸಾಧ್ಯವಿಲ್ಲ. ಕಾಲೇಜುಗಳಲ್ಲಿ ದಾಖಲಾತಿ ಪರಿಶೀಲನೆ ವೇಳೆ ತಪ್ಪುಗಳು ಕಂಡುಬಂದಲ್ಲಿ ಅಂತವರಿಗೆ ಅವಕಾಶ ನೀಡುವುದಿಲ್ಲ. ಅದ್ಯಾಗ್ಯೂ ಅವಕಾಶ ಕಲ್ಪಿಸಿದರೆ ಅಂತಹ ಕಾಲೇಜಿನ ಪ್ರಾಂಶುಪಾಲರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು.
– ಪಿ. ಪ್ರದೀಪ್‌, ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತ

ಟಾಪ್ ನ್ಯೂಸ್

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

dw

Malpe: ಕಲ್ಮಾಡಿ; ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು

Brahmavar: ಕೊಕ್ಕರ್ಣೆ; ಜುಗಾರಿ ನಿರತನ ಬಂಧನ

Brahmavar: ಕೊಕ್ಕರ್ಣೆ; ಜುಗಾರಿ ನಿರತನ ಬಂಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Accident-logo

Siddapura: ಕಾರು ಸ್ಕೂಟಿಗೆ ಢಿಕ್ಕಿ; ಸವಾರರು ಗಂಭೀರ

Car-Palti

Sulya: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

Thief

Kaup: ಉದ್ಯಾವರ: ಮನೆಯ ಬೀಗ ಮುರಿದು ಸೊತ್ತು ಕಳವು

Accident-logo

Putturu: ಬೈಕ್‌-ಪಿಕಪ್‌ ಢಿಕ್ಕಿ: ಇಬ್ಬರು ಸವಾರರಿಗೆ ಗಂಭೀರ ಗಾಯ

Arrest

Bantwala: ನಾವೂರು: ಅತ್ಯಾಚಾರ; ಆರೋಪಿಗೆ ನ್ಯಾಯಾಂಗ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.