ಹೊಟೇಲ್‌ನಲ್ಲಿ “ಗುಂಡು ಹಾರಾಟ’: ಮೂವರಿಗಾಗಿ ಶೋಧ
Team Udayavani, Nov 1, 2020, 12:49 AM IST
ಮಂಗಳೂರು: ಫಳ್ನೀರ್‌ನ ಹೊಟೇಲ್‌ನಲ್ಲಿ ಶುಕ್ರವಾರ ನಡೆದಿದ್ದ ದಾಂಧಲೆ, “ಗುಂಡು ಹಾರಾಟ’ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ತೀವ್ರಗೊಳಿಸಿದ್ದು, ಪರಾರಿಯಾಗಿರುವ ಮೂವರು ಪ್ರಮುಖ ಆರೋಪಿಗಳಿಗೆ ಶೋಧ ಕಾರ್ಯ ಮುಂದುವರೆಸಿದ್ದಾರೆ.
ಒಟ್ಟು 5 ಮಂದಿ ಹೊಟೇಲ್‌ಗೆ ಗ್ರಾಹಕರಾಗಿ ಬಂದು ಹೊಟೇಲ್ ಸಿಬಂದಿ ಜತೆ ತಗಾದೆ ತೆಗೆದು ಅನಂತರ ದಾಂಧಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದರು. ಈ ವೇಳೆ ಜುನೈದ್ ಮತ್ತು ಇಝಾಜ್‌ನನ್ನು ಸೆರೆ ಹಿಡಿಯಲಾಗಿತ್ತು. ಈ ಸಂದರ್ಭ ಆರೋಪಿಗಳು ಏರ್‌ಗನ್ ಮಾದರಿಯಿಂದ ಗುಂಡು ಹಾರಿಸಿದ್ದರು. ಪರಿಣಾಮ ಹೊಟೇಲ್ ಸಿಬಂದಿ ಸಾಹಿಲ್ ಅವರ ತೊಡೆಗೆ ಗುಂಡು ತಗಲಿತ್ತು. ದಾಂಧಲೆ ವೇಳೆ ಮೂವರು ಸಿಬಂದಿಗೆ ಸಣ್ಣಪುಟ್ಟ ಗಾಯಗಳಾಗಿತ್ತು.
ಕ್ರಿಮಿನಲ್ ಹಿನ್ನೆಲೆಯವರು
ಉಳ್ಳಾಲ ನಿವಾಸಿ ಸಮೀರ್, ಸಿದ್ದಿಕ್ ಮತ್ತು ಅಫ್ರಾನ್ ತಪ್ಪಿಸಿಕೊಂಡ ವರು. ಇವರು ಕ್ರಿಮಿನಲ್ ಹಿನ್ನೆಲೆಯ ವರಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಆದರೆ, ಘಟನೆಗೆ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ಆರೋಪಿಗಳೊಂದಿಗೆ ನಮಗೆ ದ್ವೇಷ ಇರಲಿಲ್ಲ ಎಂದು ಹೊಟೇಲ್ ಮಾಲಕರು ಹೇಳಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ:ಅದಾನಿ ಸಮೂಹ ಸಂಸ್ಥೆಗೆ ಮಂಗಳೂರು ವಿಮಾನ ನಿಲ್ದಾಣ ಹಸ್ತಾಂತರ
ವಿಶೇಷ ತಂಡ ರಚನೆ
ಏರ್‌ಗನ್ ಅಥವಾ ರಿವಾಲ್ವರ್ ಬಳಸಲಾಗಿದೆಯೇ ಎನ್ನುವುದು ಇನ್ನೂ ಖಚಿತವಾಗಿಲ್ಲ. ತಜ್ಞರ ವರದಿಗೆ ಕಾಯುತ್ತಿದ್ದೇವೆ. ತನಿಖೆಗೆ ವಿಶೇಷ ತಂಡ ರಚಿಸಿದ್ದೇವೆ’ಎಂದು ಪೊಲೀಸ್ ಆಯುಕ್ತ ಡಾ| ವಿಕಾಸ್ ಕುಮಾರ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Puttur: ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು; ಮೂವರ ದುರ್ಮರಣ
INDvsAUS: ವಿಚಿತ್ರ ರೀತಿಯಲ್ಲಿ ಔಟಾದ ರಿಷಭ್ ಪಂತ್ ವಿರುದ್ದ ಕಿಡಿಕಾರಿದ ಗಾವಸ್ಕರ್
Hathras: ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ!
Meghalaya: ಚರ್ಚ್‌ಗೆ ನುಗ್ಗಿ ಜೈ ಶ್ರೀರಾಮ್ ಘೋಷಣೆ: ಕೇಸು ದಾಖಲು
Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Puttur: ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು; ಮೂವರ ದುರ್ಮರಣ
INDvsAUS: ವಿಚಿತ್ರ ರೀತಿಯಲ್ಲಿ ಔಟಾದ ರಿಷಭ್ ಪಂತ್ ವಿರುದ್ದ ಕಿಡಿಕಾರಿದ ಗಾವಸ್ಕರ್
Hathras: ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ!
Meghalaya: ಚರ್ಚ್‌ಗೆ ನುಗ್ಗಿ ಜೈ ಶ್ರೀರಾಮ್ ಘೋಷಣೆ: ಕೇಸು ದಾಖಲು
Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.