ಗುಂಡಿಬೈಲು- ಅಂಬಾಗಿಲು : ಕಾಮಗಾರಿ ಮತ್ತೆ ಆರಂಭ
Team Udayavani, Mar 12, 2022, 3:01 PM IST
ಉಡುಪಿ : ಗುಂಡಿಬೈಲು- ಅಂಬಾಗಿಲು ಮುಖ್ಯರಸ್ತೆಯಲ್ಲಿ ಯುಜಿಡಿ ಮತ್ತು ವಾರಾಹಿ ಕಾಮಗಾರಿ ನಡೆಯು ತ್ತಿದ್ದು, ಇಲ್ಲಿನ ನಾಗಬನ ಸಮೀಪ, ಹಾಲಿನ ಅಂಗಡಿ ಮುಂಭಾಗ ಕಳೆದ ಆರೇಳು ದಿನಗಳಿಂದ ಕೆಲಸ ಸ್ಥಗಿತಗೊಂಡಿತ್ತು.
ಪರಿಣಾಮ ಅರ್ಧಕ್ಕೆ ಕಾಮಗಾರಿ ನಡೆಸಿ ಬಿಟ್ಟಿರುವುದರಿಂದ ಸ್ಥಳೀಯರ ಓಡಾಟಕ್ಕೆ, ವ್ಯಾಪಾರಿಗಳಿಗೆ, ವಾಹನ ಸವಾರರಿಗೆ ಸಮಸ್ಯೆಯಾಗಿ ಪರಿಣಮಿಸಿತ್ತು. ಹಗಲಿಡೀ ಧೂಳಿನ ಸಮಸ್ಯೆ, ಟ್ರಾಫಿಕ್ ಜಾಮ್ ಜನರನ್ನು ಕಾಡುತ್ತಿತ್ತು. ಈ ಬಗ್ಗೆ ಉದಯವಾಣಿ ಸುದಿನ ಮಾ. 10 ರಂದು ವಿಸ್ತೃತ ವರದಿ ಪ್ರಕಟಿಸಿದ್ದು, ನಗರಸಭೆ ಮತ್ತು ಕುಡ್ಸೆಂಪ್ ಅಧಿಕಾರಿಗಳು ಪೂರಕವಾಗಿ ಸ್ಪಂದಿಸಿದ್ದಾರೆ. ನಗರಸಭೆ ಎಇಇ ಯಶವಂತ್, ಕುಡ್ಸೆಂಪ್ (ವಾರಾಹಿ ಕುಡಿಯುವ ನೀರು ಯೋಜನೆ) ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೈಪ್‌ಲೈನ್ ಕಾಮಗಾರಿ ವೇಳೆ ಕೆಲವು ಕಡೆಗಳಲ್ಲಿ ಸೇತುವೆಗಳ ಕಾಂಕ್ರೀಟ್ ತಡೆಗೋಡೆಗಳು ಸಿಗುತ್ತಿರುವ ಸಮಸ್ಯೆ ಬಗ್ಗೆ ಅಧಿಕಾರಿಗಳು ತಿಳಿಸಿದ್ದರು.
ಗುಂಡಿಬೈಲಿನಲ್ಲಿ ಕೆಲಸ ತಡವಾಗಲು ಕಾರಣವಾಗಿದ್ದ ಕಾಂಕ್ರೀಟ್ ತಡೆ ಗೋಡೆಯನ್ನು ಕೊರೆಯುವ ಕಾರ್ಯ ಶುಕ್ರವಾರದಿಂದ ಮತ್ತೆ ಆರಂಭಗೊಂಡಿದೆ. ನಾಗರಿಕರಿಗೆ ತೊಂದರೆಯಾಗದಂತೆ ವಿಳಂಬ ಮಾಡದೆ ಕಾಮಗಾರಿ ಮುಂದುವರಿಸುವುದಾಗಿ ಅಧಿಕಾರಿಗಳು ಭರವಸೆ ನೀಡಿದ್ದಾರೆ.
ಇದನ್ನೂ ಓದಿ : ನಗರಸಭೆಗೆ ನೂತನ ಕಟ್ಟಡ ಭಾಗ್ಯ :ಹಳೆಯ ತಾಲೂಕು ಕಚೇರಿ ಕಟ್ಟಡದ ಜಾಗದಲ್ಲಿ ನಿರ್ಮಿಸಲು ಪ್ರಸ್ತಾವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kunigal: ಮರಕ್ಕೆ ಕಾರು ಡಿಕ್ಕಿಯಾಗಿ ಪಲ್ಟಿ: ಬೆಸ್ಕಾಂ ನೌಕರರ ಸ್ಥಳದಲ್ಲೇ ಸಾವು
Memorial: ಮನಮೋಹನ್ ಸಿಂಗ್ ಸ್ಮಾರಕಕ್ಕೆ ಜಾಗ ನೀಡಲು ಕೇಂದ್ರ ಸರ್ಕಾರದ ಒಪ್ಪಿಗೆ
Kunigal: ನಾಮಫಲಕಕ್ಕೆ ಬಸ್ ಡಿಕ್ಕಿ, ಪಲ್ಟಿ; ಮಂಗಳೂರು ಮೂಲದ ಚಾಲಕ ಸಾವು; 8 ಮಂದಿಗೆ ಗಾಯ
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊ*ಲೆ; ಇಂದು ತೀರ್ಪು; ಭಾರೀ ಬಂದೋಬಸ್ತು
Surathkal: ಸಿಲಿಂಡರ್ ಸ್ಫೋ*ಟ ಪ್ರಕರಣ; ಮತ್ತೋರ್ವ ಮಹಿಳೆಯ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.