Gundlupete: ಕಳಚಿದ ಚಲಿಸುತ್ತಿದ್ದ ಬಸ್ಸಿನ ಮುಂಬದಿ ಚಕ್ರ: ಪ್ರಯಾಣಿಕರು ಪಾರು
Team Udayavani, Aug 29, 2024, 7:16 PM IST
ಗುಂಡ್ಲುಪೇಟೆ: ಚಲಿಸುತ್ತಿದ್ದ ಕೆಎಸ್‍ಆರ್‍ಟಿಸಿ ಬಸ್ ನ ಮುಂಬದಿ ಚಕ್ರ ಕಳಚಿ ಬಿದ್ದಿರುವ ಘಟನೆ ತಾಲೂಕಿನ ಕೋಡಹಳ್ಳಿ ಗ್ರಾಮದ ಸಮೀಪದಲ್ಲಿ ನಡೆದಿದ್ದು, ಅದೃಷ್ಟವಶಾತ್ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.
ಗುಂಡ್ಲುಪೇಟೆ-ಚಾಚಹಳ್ಳಿ ಮಾರ್ಗವಾಗಿ ಪ್ರಯಾಣಿಕರನ್ನು ತುಂಬಿಕೊಂಡು ಸಂಚರಿಸುತ್ತಿದ್ದ ಕೆಎಸ್‍ಆರ್‍ಟಿಸಿ ಬಸ್ ನ ಮುಂಬದಿ ಚಕ್ರದ ರಾಡ್ ಹಠಾತ್ ತುಂಡಾಗಿದೆ. ಈ ವೇಳೆ ಬಸ್ ರಸ್ತೆಗೆ ಅಪ್ಪಳಿಸಿದ್ದು, ವಾಹನದ ವೇಗ ಕಡಿಮೆಯಿದ್ದ ಕಾರಣ ಯಾವುದೇ ಅಪಾಯ ಸಂಭವಿಸಿಲ್ಲ. ಬಸ್ ನಲ್ಲಿ ವಿದ್ಯಾರ್ಥಿಗಳು, ಪ್ರಯಾಣಿಕರು ಸೇರಿ 55ಕ್ಕೂ ಅಧಿಕ ಮಂದಿ ಇದ್ದರು ಎನ್ನಲಾಗುತ್ತಿದ್ದು, ಸದ್ಯ ಎಲ್ಲರೂ ಪಾರಾಗಿದ್ದಾರೆ.
ಡಿಪೋ ವ್ಯವಸ್ಥಾಪಕರ ವಿರುದ್ಧ ಆಕ್ರೋಶ: ತಾಲೂಕಿನ ಗ್ರಾಮೀಣ ಪ್ರದೇಶಗಳೊಳಗೆ ಸಂಚರಿಸುವ ಅನೇಕ ಸಾರಿಗೆ ಬಸ್‍ಗಳು ಸುಸ್ಥಿತಿಯಲ್ಲಿಲ್ಲ. ಈ ಕಾರಣದಿಂದ ಹಿಂದೆಯೂ ಕೂಡ ಹಲವು ಘಟನೆಗಳು ಸಂಭವಿಸಿವೆ. ಇದಕ್ಕೆ ಡಿಪೋ ವ್ಯವಸ್ಥಾಪಕರ ನಿರ್ಲಕ್ಷ್ಯವೇ ಕಾರಣ. ಕೂಡಲೇ ಎಚ್ಚೇತ್ತುಕೊಳ್ಳದಿದ್ದರೆ ಮುಂದೆ ಜರುಗುವ ಘಟನೆಗಳಿಗೆ ಅವರೇ ನೇರ ಹೊಣೆಯಾಗುತ್ತಾರೆ ಎಂದು ಪ್ರಯಾಣಿಕರು ಅಸಮಾಧಾನ ಹೊರ ಹಾಕಿದ್ದಾರೆ.
ಹಳೇ ಬಸ್ ಕಾರಣದಿಂದ ಅವಾಂತರ: ಗುಂಡ್ಲುಪೇಟೆ ಕೆಎಸ್‍ಆರ್‍ಟಿಸಿ ಬಸ್ ಗಳನ್ನು ನಿರ್ವಹಣೆ ಮಾಡುವಲ್ಲಿ ಸಿಬ್ಬಂದಿ ವರ್ಗದವರು ನಿರ್ಲಕ್ಷ್ಯ ವಹಿಸಿದ್ದಾರೆ. ಗುಂಡ್ಲುಪೇಟೆ-ಚಾಚಹಳ್ಳಿ ಮಾರ್ಗವಾಗಿ ಚಲಿಸುತ್ತಿದ್ದ ಬಸ್ ಕೂಡ ಹಳೆಯದಾದ ಕಾರಣ ಅವಘಡ ಸಂಭವಿಸಿದೆ. ಆದ್ದರಿಂದ ಇಂತಹ ಘಟನೆಗಳು ಮುಂದಿನ ದಿನಗಳಲ್ಲಿ ಮರುಕಳಿದಂತೆ ಮುನ್ನೆಚ್ಚರಿಕೆ ವಹಿಸಬೇಕೆಂದು ಶಾಸಕ ಎಚ್.ಎಂ.ಗಣೇಶಪ್ರಸಾದ್ ಕ್ರಮವಹಿಸಿ, ಡಿಪೋ ವ್ಯವಸ್ಥಾಪಕರಿಗೆ ಖಡಕ್ ಸೂಚನೆ ನೀಡಬೇಕೆಂದು ಪ್ರಯಾಣಿಕರು ಹಾಗೂ ಸ್ಥಳೀಯರು ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minister K.J. George: ಒಂದೇ ದಿನದಲ್ಲಿ 2500 ಲೈನ್‌ಮ್ಯಾನ್ ನೇಮಕ ಸಂದರ್ಶನ
Bandipur: ಸಫಾರಿಯಲ್ಲಿ ಪ್ರವಾಸಿಗರ ಮುಂದೆಯೇ ಜಿಂಕೆ ಬೇಟೆಯಾಡಿದ ಚಿರತೆ
Birla Opus Paints: ಚಾಮರಾಜನಗರದಲ್ಲಿ ಬಿರ್ಲಾ ಒಪಸ್ ಪೇಂಟ್ಸ್ 4ನೇ ಕಾರ್ಖಾನೆ ಆರಂಭ
Gundlupet: ಜಿಂಕೆ ಮಾಂಸ ಸಾಗಾಣೆ: ಐವರ ಬಂಧಿಸಿದ ಅರಣ್ಯಾಧಿಕಾರಿಗಳು
Kollegala: ಎತ್ತಿನಗಾಡಿಗೆ ಸಾಮ್ರಾಟ್ ಟರ್ಬೇ ವಾಹನ ಡಿಕ್ಕಿ; ಎತ್ತು ಸಾವು
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.