ಕೇರಳಕ್ಕೆ ಅಕ್ರಮವಾಗಿ ಹಸು ಸಾಗಾಟ: ಇಬ್ಬರ ಬಂಧನ
Team Udayavani, Jun 25, 2023, 8:49 AM IST
ಗುಂಡ್ಲುಪೇಟೆ(ಚಾಮರಾಜನಗರ): ಹಸುವೊಂದನ್ನು ಪಿಕ್ ಅಪ್ ವಾಹನದಲ್ಲಿ ಕೇರಳಕ್ಕೆ ಅಕ್ರಮವಾಗಿ ತೆಗೆದುಕೊಂಡು ಹೋಗುತ್ತಿದ್ದ ವೇಳೆ ಗುಂಡ್ಲುಪೇಟೆ ಠಾಣೆ ಪೊಲೀಸರು ದಾಳಿ ನಡೆಸಿ ಜಾನುವಾರು ಸಮೇತ ಇಬ್ಬರನ್ನು ಬಂಧಿಸಿರುವ ಘಟನೆ ತಾಲೂಕಿನ ಮದ್ದೂರು ಚೆಕ್ ಪೋಸ್ಟ್ ಬಳಿ ಜೂ.24ರ ಶನಿವಾರ ತಡರಾತ್ರಿ ನಡೆದಿದೆ.
ಕೇರಳ ಮೂಲದ ಹರಿಕುಮಾರ್ ಮತ್ತು ಬಾಲು ಬಂಧಿತರು.
ಇವರು ಅಕ್ರಮವಾಗಿ ಹಸುವನ್ನು ಪಿಕ್ ಅಪ್ ಮೂಲಕ ಕೇರಳ ರಾಜ್ಯಕ್ಕೆ ತೆಗೆದುಕೊಂಡು ಹೋಗುತ್ತಿದ್ದ ಖಚಿತ ಮಾಹಿತಿ ಮೇರೆಗೆ ಪೊಲೀಸ್ ಇನ್ಸ್ ಪೆಕ್ಟರ್ ಮುದ್ದುರಾಜ್ ನೇತೃತ್ವದಲ್ಲಿ ದಾಳಿ ನಡೆಸಿ ವಾಹನ, ಜಾನುವಾರು ಸಮೇತ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಜಾನುವಾರನ್ನು ಕನಕಗಿರಿಯ ಪಿಂಜರಾಪೋಲಿಗೆ ಕಳುಹಿಸಲಾಗಿದೆ.
ಈ ಕುರಿತು ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾರ್ಯಾಚರಣೆಯಲ್ಲಿ ಪೊಲೀಸ್ ಪೇದೆಗಳಾದ ಶಶಿಧರ್ ಮೂರ್ತಿ, ಕುಮಾರ್, ಕೃಷ್ಣ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ
22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?
Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್
Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ
H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.