ಗುರ್ಮೆ ಗೋ ವಿಹಾರ ಲೋಕಾರ್ಪಣೆ


Team Udayavani, Feb 21, 2022, 5:00 AM IST

ಗುರ್ಮೆ ಗೋ ವಿಹಾರ ಲೋಕಾರ್ಪಣೆ

ಕಾಪು: ದಿ| ಪದ್ಮಾವತಿ ಪಿ. ಶೆಟ್ಟಿ ಗುರ್ಮೆ ಅವರ ಸ್ಮರಣಾರ್ಥ ಗುರ್ಮೆ ಫೌಂಡೇಶನ್‌ ವತಿಯಿಂದ ನಿರ್ಮಿಸಲಾದ ಗುರ್ಮೆ ಗೋ ವಿಹಾರ ಕೇಂದ್ರದ ಲೋಕಾರ್ಪಣೆ, ಕೀರ್ತನ – ಸಾಂತ್ವನ – ಯಕ್ಷಗಾನ, ಸಾಧಕರಿಗೆ ಸಮ್ಮಾನ ಮತ್ತು ಅನಾರೋಗ್ಯ ಪೀಡಿತರಿಗೆ ಸಾಂತ್ವನ ಸಹಾಯಧನ ವಿತರಣೆ ಕಾರ್ಯಕ್ರಮವನ್ನು ಉಡುಪಿ ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ರವಿವಾರ ಗುರ್ಮೆಯಲ್ಲಿ ಉದ್ಘಾಟಿಸಿದರು.

ಬಳಿಕ ಆಶೀರ್ವಚನ ನೀಡಿದ ಅವರು, ಮಾತೃ ಸೇವೆ ಮತ್ತು ಗೋ ಸೇವೆಯಿಂದ ಮನುಷ್ಯನಿಗೆ ಅನುಗ್ರಹದ ಜತೆಗೆ ರಕ್ಷಣೆಯೂ ಪ್ರಾಪ್ತವಾಗುತ್ತದೆ ಎಂದರು.

ಗೋ ಸೇವೆ-ಮಾತೃಸೇವೆ
ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಆಶೀರ್ವಚನ ನೀಡಿ, ಮನೆಯನ್ನೇ ಗೋ ಗೃಹವನ್ನಾ ಗಿಸಿ  ಕೊಂಡು, ಅವುಗಳಿಗೆಂದೇ 3 ಎಕರೆ ಪ್ರದೇಶದಲ್ಲಿ ಗೋ ವಿಹಾರ ಕೇಂದ್ರ ನಿರ್ಮಿಸುವ ಮೂಲಕ ಗೋವುಗಳ ಸೇವೆಯಲ್ಲಿ ತಾಯಿಯ ಸೇವೆಗೈಯ್ಯುವ ಅಪರೂಪದ ವ್ಯಕ್ತಿತ್ವವು ಇಂದು ಗುರ್ಮೆಯಲ್ಲಿ ಅನಾವರಣ ಗೊಂಡಿದೆ ಎಂದು ಶ್ಲಾಘಿಸಿದರು.

ಗೌರಿ ಗದ್ದೆ ಸ್ವರ್ಣ ಪೀಠಿಕಾಪುರದ ಅವಧೂತ ಶ್ರೀ ವಿನಯ ಗುರೂಜಿ ಆಶೀರ್ವಚನ ನೀಡಿ, ಸಮಾಜದ ಸೇವೆಯನ್ನೂ ನಡೆಸುತ್ತಿರುವ ಗುರ್ಮೆ ಸಹೋದರರ ಸೇವೆಯಿಂದ ಸಮಾಜ ಸಂತುಷ್ಟ ಗೊಂಡಿದೆ ಎಂದರು.

ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌. ಈಶ್ವರಪ್ಪ ಮಾತನಾಡಿ, ನಮಗೆ ರಕ್ಷಣೆ ನೀಡುವ ಗೋವು, ಮಾರ್ಗದರ್ಶನ ನೀಡುವ ಕಾವಿ ಮತ್ತು ನಮ್ಮನ್ನು ಪೋಷಿಸಿ, ಬೆಳೆಸಿದ ತಾಯಿಗೆ ಸಮಾನ ಗೌರವ ನೀಡುವುದು ನಮ್ಮೆಲ್ಲರ ಕರ್ತವ್ಯ ಎಂದರು.

ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಸುನಿಲ್‌ ಕುಮಾರ್‌, ಸಂಸದ ಬಿ.ವೈ. ರಾಘವೇಂದ್ರ, ಶಾಸಕರಾದ ರಘುಪತಿ ಭಟ್‌, ಲಾಲಾಜಿ ಆರ್‌. ಮೆಂಡನ್‌, ಭರತ್‌ ಶೆಟ್ಟಿ, ಉದ್ಯಮಿ ಕೆ. ಪ್ರಕಾಶ್‌ ಶೆಟ್ಟಿ ಬಂಜಾರ, ಸಂಗೀತ ನಿರ್ದೇಶಕ ಗುರುಕಿರಣ್‌ ಮುಖ್ಯ ಅತಿಥಿಗಳಾಗಿದ್ದರು. ಗುರ್ಮೆ ಫೌಂಡೇಶನ್‌ನ ಟ್ರಸ್ಟಿಗಳಾದ ಹರೀಶ್‌ ಪಿ. ಶೆಟ್ಟಿ ಗುರ್ಮೆ, ಸತೀಶ್‌ ಪಿ. ಶೆಟ್ಟಿ ಗುರ್ಮೆ ಉಪಸ್ಥಿತರಿದ್ದರು.

ಯಕ್ಷಗಾನ-ಸಮ್ಮಾನ
600 ಮಂದಿ ಅನಾರೋಗ್ಯ ಪೀಡಿತರಿಗೆ ಧನ ಸಹಾಯ ವಿತರಣೆ, ಕೊರೊನಾ ವಾರಿಯರ್ಸ್‌ ಮತ್ತು ಪೌರ ಕಾರ್ಮಿಕರಿಗೆ ಗೌರವಾರ್ಪಣೆ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಜಾನಪದ ವಿದ್ವಾಂಸ ಬನ್ನಂಜೆ ಬಾಬು ಅಮೀನ್‌, ಮುಂಬಯಿಯ ಸಾಹಿತಿ ಡಾ| ಭರತ್‌ ಕುಮಾರ್‌ ಪೊಲಿಪು, ಸೂರಿ ಶೆಟ್ಟಿ ಕಾಪು, ಕಿಶೋರ್‌ ಕುಮಾರ್‌ ಗುರ್ಮೆ ದಂಪತಿ ಮತ್ತು ಸಂತೋಷ್‌ ಪಿ. ಶೆಟ್ಟಿ ತೆಂಕರಗುತ್ತು ದಂಪತಿಯನ್ನು ಸಮ್ಮಾನಿಸಲಾಯಿತು. ಕೀರ್ತನ ಮತ್ತು ಯಕ್ಷಗಾನ ಕಾರ್ಯಕ್ರಮ ನಡೆಯಿತು. ಗುರ್ಮೆ ಫೌಂಡೇಶನ್‌ ಅಧ್ಯಕ್ಷ ಸುರೇಶ್‌ ಪಿ. ಶೆಟ್ಟಿ ಗುರ್ಮೆ ಪ್ರಸ್ತಾವನೆಗೈದು ಸ್ವಾಗತಿಸಿದರು. ಪೈಯ್ನಾರು ಶಿವರಾಮ ಶೆಟ್ಟಿ ವಂದಿಸಿದರು. ದಾಮೋದರ ಶರ್ಮಾ ಮತ್ತು ನಿತೇಶ್‌ ಶೆಟ್ಟಿ ಎಕ್ಕಾರು ನಿರ್ವಹಿಸಿದರು.

ಗೋವುಗಳ ರಕ್ಷಣೆ: ಪ್ರತಿಜ್ಞೆ ಸ್ವೀಕರಿಸೋಣ
ವಯಸ್ಸಾದ ತಂದೆ-ತಾಯಿಯರನ್ನು ಹೇಗೆ ಮಮತೆಯಿಂದ ಸಾಕಿ ಸಲಹುತ್ತೇವೆಯೋ ಅದೇ ರೀತಿಯಲ್ಲಿ ಗೋವುಗಳನ್ನೂ ಪ್ರೀತಿಯಿಂದ ಪೋಷಣೆ ಮಾಡುವುದು ನಮ್ಮೆಲ್ಲರ ಕರ್ತವ್ಯ. ಗೋವುಗಳ ರಕ್ಷಣೆಗಾಗಿ ನಮ್ಮ ದೇಶ ಮತ್ತು ರಾಜ್ಯದಲ್ಲಿ ಗೋಹತ್ಯಾ ನಿಷೇಧದ ಪ್ರಬಲ ಕಾನೂನು ಜಾರಿಗೆ ಬರುವ ಅಗತ್ಯವಿದೆ. ಈ ಬಗ್ಗೆ ಪ್ರತಿಯೊಬ್ಬರೂ ಪ್ರತಿಜ್ಞೆ ಸ್ವೀಕರಿಸೋಣ.
– ಕೆ.ಎಸ್‌. ಈಶ್ವರಪ್ಪ , ಸಚಿವ

ಟಾಪ್ ನ್ಯೂಸ್

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

mohan bhagwat

Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Malpe: ಮನೆ ಮನೆಗಳಲ್ಲಿ ಕ್ಯಾರೋಲ್‌ ಗಾಯನ

death

Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು

accident

Udupi: ಆಟೋರಿಕ್ಷಾ ಢಿಕ್ಕಿ; ವೃದ್ಧನಿಗೆ ಗಾಯ

Belapu

ಬೆಳಪು ಸಹಕಾರಿ ಸಂಘ: ಡಾ.ದೇವಿಪ್ರಸಾದ್ ಶೆಟ್ಟಿ ನೇತೃತ್ವದ ತಂಡಕ್ಕೆ 8ನೇ ಬಾರಿ ಚುಕ್ಕಾಣಿ

Have you updated your Aadhar Card?: Then you must read this news!

Aadhar Card: ಆಧಾರ್‌ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

mohan bhagwat

Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.