ಕೇರಳ ನಮಗೆ ಮಾದರಿಯಾಗಬಾರದೇಕೆ? ಕುಮಾರಸ್ವಾಮಿ ಪ್ರಶ್ನೆ
Team Udayavani, Mar 20, 2020, 1:27 PM IST
ಬೆಂಗಳೂರು: ಕೋವಿಡ್-19ನಿಂದ ಹದಗೆಟ್ಟಿರುವ ಆರ್ಥಿಕತೆಗೆ ಚೈತನ್ಯ ನೀಡಲು ಕೇರಳ ಅಲ್ಲಿನ ಜನರಿಗೆ ₹20,000 ಕೋಟಿ ಪ್ಯಾಕೇಜ್ ಘೋಷಿಸಿದೆ. ಕೇರಳ ಸರಕಾರದ ಈ ನಡೆ ನಮಗೆ ಮಾದರಿಯಾಗಬಾರದೇಕೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
ಟ್ವೀಟರ್ ನಲ್ಲಿ ಸರಣಿ ಟ್ವೀಟ್ ಮಾಡಿರುವ ಎಚ್ ಡಿ ಕುಮಾರಸ್ವಾಮಿ, ಕೋವಿಡ್ 19 ರಾಜ್ಯದ ಆರ್ಥಿಕತೆಗೂ ಪೆಟ್ಟು ನೀಡುತ್ತಿದೆ. ಇದು ಬಡ ವರ್ಗದ ಮೇಲೆ ಇದು ನೇರ ಪರಿಣಾಮ ಬೀರುತ್ತಿದೆ ಎಂದಿದ್ದಾರೆ.
ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಮಾಡಿರುವ ಸರಣಿ ಟ್ವಿಟ್ ಗಳು ಇಲ್ಲಿದೆ.
#coronavirus ನಿಂದ ಹದಗೆಟ್ಟಿರುವ ಆರ್ಥಿಕತೆಗೆ ಚೈತನ್ಯ ನೀಡಲು ಕೇರಳ ಅಲ್ಲಿನ ಜನರಿಗೆ ₹20,000 ಕೋಟಿ ಪ್ಯಾಕೇಜ್ ಘೋಷಿಸಿದೆ. ಇದರಲ್ಲಿ, ಆರೋಗ್ಯ ಸೇವೆ, ಸಾಲಕ್ಕೆ ನೆರವು, ಮಾಸಾಶನ, MGNREGSಗೆ ಅನುದಾನ, ಉಚಿತ ದಿನಸಿ, ಕಡಿಮೆ ದರದಲ್ಲಿ ಊಟ, ಬಾಕಿ ಮರುಪಾವತಿ, ಪರಿಹಾರ ಮೊತ್ತಗಳು ಸೇರಿವೆ. ಕೇರಳದ ಈ ನಡೆ ನಮಗೆ ಮಾದರಿಯಾಗಬಾರದೇಕೆ?
(1/4)— H D Kumaraswamy (@hd_kumaraswamy) March 20, 2020
ಕೇರಳದಲ್ಲಿ 26 ಕೊರೊನಾ ಪ್ರಕರಣ ವರದಿಯಾಗಿದ್ದರೆ ಕರ್ನಾಟಕದಲ್ಲಿ 15 ಪ್ರಕರಣಗಳು ವರದಿಯಾಗಿವೆ. ಅಂದರೆ ರಾಜ್ಯದಲ್ಲಿ ಮಹಾಮಾರಿಯ ಬಗೆಗಿನ ಆತಂಕ, ಭೀತಿ ಕೇರಳಕ್ಕಿಂತಲೂ ಭಿನ್ನವೇನಲ್ಲ.ಇದು ರಾಜ್ಯದ ಆರ್ಥಿಕತೆಗೂ ಪೆಟ್ಟು ನೀಡುತ್ತಿದೆ. ಸದ್ಯ ಬಡ ವರ್ಗದ ಮೇಲೆ ಇದು ನೇರ ಪರಿಣಾಮ ಬೀರುತ್ತಿದೆ.ರಾಜ್ಯವೂ ಕೇರಳ ಮಾದರಿಯ ನಿರ್ಧಾರಕ್ಕೆ ಬರಬೇಕು.
(2/4)— H D Kumaraswamy (@hd_kumaraswamy) March 20, 2020
ಆರೋಗ್ಯ ಸೇವೆಗೆ ಹೆಚ್ಚಿನ ಹಣ, ಬ್ಯಾಂಕ್ ಸಾಲಗಳ ತಿಂಗಳ ಕಂತು ಮುಂದೂಡಿಕೆ, ಬಡ್ಡಿ ಮನ್ನ, ಮಾಸಾಶನ, MGNREGSಗೆ ಅನುದಾನ, ಪರಿಹಾರ ಘೋಷಣೆಯಂಥ ನಿರ್ಧಾರಗಳನ್ನು ನಾವೂ ಕೈಗೊಳ್ಳಬೇಕು. ಆರ್ಥಿಕ ದುರ್ಬಲರಿಗೆ ನೆರವಾಗುವ ಮೂಲಕ ಆರ್ಥಿಕತೆಗೆ ಚೈತನ್ಯ ತುಂಬಬೇಕು. ಜೊತೆಗೆ ಕೊರೋನಾ ವೈರಸ್ ವಿರುದ್ಧದ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಬೇಕು.
(3/4)— H D Kumaraswamy (@hd_kumaraswamy) March 20, 2020
ಕೊರೊನಾ ವೈರಸ್ನಿಂದ ಎದುರಾದ ನಿರ್ಬಂಧಗಳಿಂದಾಗಿ ದಿನಗೂಲಿ ನೌಕರರು, ಬೀದಿ ಬದಿ ವ್ಯಾಪಾರಿಗಳು ಹೆಚ್ಚು ಬಾಧಿತರಾಗಿದ್ದಾರೆ. 2 ತಿಂಗಳ ಅವರ ಬದುಕಿಗೆ ನೆರವಾಗುವಂತೆ ಸರ್ಕಾರ ಕಾರ್ಯಕ್ರಮ ರೂಪಿಸಬೇಕು. ಆಟೋ, ಕ್ಯಾಬ್ ಚಾಲಕರ ಬ್ಯಾಂಕ್ ಲೋನ್ ಕಂತು ಪಾವತಿಗೆ 2 ತಿಂಗಳ ವಿನಾಯಿತಿ ಕಲ್ಪಿಸಬೇಕು. ಈ ಮೂಲಕ ಸರ್ಕಾರ ಬಡವರ ಪರ ನಿಲುವು ತಾಳಬೇಕು.
(4/4)— H D Kumaraswamy (@hd_kumaraswamy) March 20, 2020
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
Kollur; ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !
Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.