iPhone: ಹ್ಯಾಕ್ ವಿವಾದ- ಆ್ಯಪಲ್‌ಗೆ ಸಂಸದೀಯ ಸಮಿತಿ ಸಮನ್ಸ್?
ಸಂಸತ್‌ನ ಸ್ಥಾಯಿ ಸಮಿತಿ ಮುಖ್ಯಸ್ಥರ ಸುಳಿವು
Team Udayavani, Nov 1, 2023, 8:53 PM IST
ನವದೆಹಲಿ: ಪ್ರತಿಪಕ್ಷಗಳ ಮುಖಂಡ ಪೈಕಿ ಕೆಲವರ ಆ್ಯಪಲ್‌ಫೋನ್‌ಗಳ ಮೇಲೆ ಕೇಂದ್ರ ಸರ್ಕಾರ ನಿಗಾ ವಹಿಸಿದೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಆ್ಯಪಲ್‌ಗೆ ಸಮನ್ಸ್ ನೀಡುವ ಸಾಧ್ಯತೆಗಳು ಇವೆ. ಈ ಬಗ್ಗೆ “ನ್ಯೂಸ್18 ಚಾನೆಲ್ ಜತೆಗೆ ಮಾತನಾಡಿದ ಮಾಹಿತಿ ತಂತ್ರಜ್ಞಾನಕ್ಕಾಗಿನ ಸಂಸದೀಯ ಸ್ಥಾಯಿ ಸಮಿತಿ ಮುಖ್ಯಸ್ಥ ಪ್ರತಾಪ್‌ರಾವ್ ಜಾಧವ್ ಎಚ್ಚರಿಕೆ ಸಂದೇಶಗಳ ವಾಸ್ತವಂಶ ತಿಳಿದುಕೊಳ್ಳಲು ಆ್ಯಪಲ್ ಪ್ರತಿನಿಧಿಗಳನ್ನೇ ಪ್ರಶ್ನಿಸುವುದಕ್ಕಾಗಿ ಸಂಸ್ಥೆಗೆ ನೋಟಿಸ್ ಜಾರಿಗೊಳಿಸುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ ಆದರೆ ಇನ್ನೂ ಯಾವುದೇ ನಿರ್ಣಯ ತೆಗೆದುಕೊಳ್ಳಲಾಗಿಲ್ಲ ಎಂದಿದ್ದಾರೆ.
ಸಂಸದ ಕಾರ್ತಿ ಚಿದಂಬರಂ ಸಂಸದೀಯ ಸ್ಥಾಯಿ ಸಮಿತಿಗೆ ಪತ್ರ ಬರೆದು ಎಚ್ಚರಿಕೆ ಬಂದಿರುವವರೆಲ್ಲರನ್ನೂ ಒಗ್ಗೂಡಿಸಿ ಸಭೆ ನಡೆಸಬೇಕೆಂದು ಆಗ್ರಹಿಸಿದ್ದಾರೆ. ಇತ್ತ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಲೋಕಸಭೆ ಸ್ಪೀಕರ್‌ಗೆ ಪತ್ರ ಬರೆದು ಇದು ಸರ್ಕಾರವು ವಿಪಕ್ಷನಾಯಕರ ಮೇಲೆ ನಡೆಸಿರುವ ರಹಸ್ಯ ಕಣ್ಗಾವಲಿನ ದುಷ್ಪರಿಣಾಮ. ಹೀಗಾಗಿ, ರಕ್ಷಣೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನಾಯಕ ಶಶಿತರೂರ್, ಕೆ.ಸಿ.ವೇಣುಗೋಪಾಲ್ ಸೇರಿದಂತೆ ಹಲವು ನಾಯಕರ ಆ್ಯಪಲ್‌ಫೋನ್‌ಗಳಿಗೆ ಎಚ್ಚರಿಕೆ ಸಂದೇಶ ರವಾನೆಯಾಗಿತ್ತು. ಈ ಹಿನ್ನೆಲೆಯಲ್ಲಿ ಮಂಗಳವಾರ ಕೇಂದ್ರಸರ್ಕಾರ ತನಿಖೆಗೆ ಆದೇಶ ನೀಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
MUST WATCH
ಹೊಸ ಸೇರ್ಪಡೆ
Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ
BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ
Udupi: ಉದ್ಘಾಟನೆ ಕಾಣದ ಸರಕಾರಿ ಕಟ್ಟಡಗಳು
Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ
BGT: ಆಸೀಸ್ ಮಾಧ್ಯಮದ ವಿರುದ್ದ ವಿರಾಟ್ ಗರಂ: ಏರ್‌ಪೋರ್ಟ್ ನಲ್ಲಿ ವರದಿಗಾರ್ತಿ ಜತೆ ಜಗಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.