Kerala: ಕೇರಳ ಮತಾಂತರ ಪ್ರಕರಣದಲ್ಲಿ ಸುದ್ದಿಯಾಗಿದ್ದ ಹದಿಯಾ ನಾಪತ್ತೆ!
Team Udayavani, Dec 10, 2023, 11:55 PM IST
ಕೊಚ್ಚಿ: ಪ್ರೀತಿಸಿದ ಹುಡುಗನಿಗಾಗಿ ಇಸ್ಲಾಂಗೆ ಮತಾಂತರಗೊಂಡು ಕೇರಳದಲ್ಲಿ ಭಾರೀ ಸುದ್ದಿಯಾಗಿದ್ದ “ಹದಿಯಾ ಪ್ರಕರಣ’ಕ್ಕೆ ಈಗ ಹೊಸ ತಿರುವು ಸಿಕ್ಕಿದೆ. ತಮ್ಮ ಪುತ್ರಿ ನಾಪತ್ತೆಯಾಗಿದ್ದಾಳೆ ಎಂದು ಆರೋಪಿಸಿ ಹದಿಯಾಳ ಅಪ್ಪ ಅಶೋಕನ್ ಕೆ.ಎಂ. ಕೇರಳ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಭಾಗವಾಗಿರುವ ಕೆಲವು ವ್ಯಕ್ತಿಗಳು ಹಾಗೂ ಆಕೆಯ ಪತಿಯೇ ಹದಿಯಾಳನ್ನು ಅಕ್ರಮವಾಗಿ ಕೂಡಿಹಾಕಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ಮಂಗಳವಾರ ಈ ಪ್ರಕರಣದ ವಿಚಾರಣೆ ನಡೆಯುವ ಸಾಧ್ಯತೆಯಿದೆ.
ಕಳೆದ ಒಂದು ತಿಂಗಳಿಂದ ಹದಿಯಾ ಕಾಣಿಸುತ್ತಿಲ್ಲ, ಆಕೆಯ ಫೋನ್ ಕೂಡ ಸ್ವಿಚ್ ಆಫ್ ಆಗಿದೆ ಎಂದು ಅವರು ಹೇಳಿದ್ದಾರೆ. ಇತ್ತೀಚೆಗೆ ತಮ್ಮ ಪುತ್ರಿ ಮಲಪ್ಪುರಂನಲ್ಲಿ ಹೋಮಿಯೋಪಥಿ ಕ್ಲಿನಿಕ್ ತೆರೆದಿದ್ದಳು. ಅದು ಕೂಡ ಮುಚ್ಚಿದೆ. ತಾನು ತನ್ನ ಪತಿಯಿಂದ ದೂರವಾಗಿ, ಬೇರೊಬ್ಬನನ್ನು ವಿವಾಹವಾಗಿದ್ದಾಗಿ ಆಕೆ ನಮ್ಮೊಂದಿಗೆ ಹೇಳಿಕೊಂಡಿದ್ದಳು ಎಂದೂ ಅಶೋಕನ್ ಹೇಳಿದ್ದಾರೆ. ಇನ್ನೊಂದೆಡೆ ಇತ್ತೀಚೆಗೆ ಟಿವಿ ಚಾನೆಲ್ವೊಂದರಲ್ಲಿ ಮಾತನಾಡಿದ್ದ ಹದಿಯಾ, “ನಾನು ನನ್ನ ಹೆತ್ತವರೊಂದಿಗೆ ಸಂಪರ್ಕದಲ್ಲಿದ್ದೇನೆ. ಆದರೂ ಅವರು ನನಗೆ ತೊಂದರೆ ಕೊಡುತ್ತಿದ್ದಾರೆ. ಸಂಘ ಪರಿವಾರವು ನನ್ನ ಅಪ್ಪನನ್ನು ಅಸ್ತ್ರವಾಗಿ ಬಳಸಿಕೊಳ್ಳುತ್ತಿದೆ’ ಎಂದು ಹೇಳಿದ್ದಳು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು
ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು
Uttarakhand: ಕಂದಕಕ್ಕೆ ಬಿದ್ದ ಬಸ್ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ
Uttar Pradesh: 16 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾ*ಚಾರ; ಇಬ್ಬರ ಬಂಧನ
Atul Subhash Case: ಮೊಮ್ಮಗನನ್ನು ನೀಡದಿದ್ದರೆ ಆತ್ಮಹತ್ಯೆ; ಅತುಲ್ ತಂದೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ
Bantwal: ತುಂಬೆ ಜಂಕ್ಷನ್; ಸರಣಿ ಅಪಘಾತ
Kasaragod ಅಪರಾಧ ಸುದ್ದಿಗಳು: ವಿದ್ಯಾರ್ಥಿನಿಯರಿಗೆ ಕಿರುಕುಳ; ಕೇಸು ದಾಖಲು
Brahmavar: ಆರೂರು; ಬೆಂಕಿ ತಗಲಿ ಗಾಯಗೊಂಡಿದ್ದ ಮಹಿಳೆ ಸಾವು
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.