ಹಳೆಯಂಗಡಿ : ಮನೆಯ ಮೇಲ್ಛಾವಣಿ ಕುಸಿದು ಬಿದ್ದು ಮಹಿಳೆ ಗಂಭೀರ
Team Udayavani, Sep 4, 2021, 5:56 PM IST
ಹಳೆಯಂಗಡಿ: ಶುಕ್ರವಾರ ರಾತ್ರಿ ಸುರಿದ ಭಾರಿ ಮಳೆಗೆ ಮುಂಜಾನೆ ಮನೆಯೊಂದರ ಮೇಲ್ಛಾವಣಿ ಕುಸಿದು ಬಿದ್ದು ಮಹಿಳೆಯೋರ್ವರು ಗಂಭೀರ ಗಾಯಗೊಂಡ ಘಟನೆ ಹಳೆಯಂಗಡಿ ಬಳಿಯ ಹತ್ತನೇ ತೋಕೂರು ಲೈಟ್ ಹೌಸ್ನ ಬಳಿ ನಡೆದಿದೆ.
ಓಂಕಾರೇಶ್ವರಿ 2ನೇ ಅಡ್ಡರಸ್ತೆಯಲ್ಲಿ ಶೋಭಾ ಎಂಬುವವರ ಮನೆಯಲ್ಲಿ ಮುಂಜಾನೆ ಸುಮಾರು 4:30ರ ವೇಳೆಗೆ ಮನೆ ಮಂದಿ ಮಲಗಿದ್ದ ಸಮಯದಲ್ಲಿ ಮನೆಯ ಹಂಚುಗಳು ಬೀಳುತ್ತಿದ್ದ ಶಬ್ದಗಳಿಗೆ ಎಚ್ಚೆತ್ತು ಬೆಳಕು ಹಾಕಿ ನೋಡುವಾಗ ಮನೆಯ ಹಂಚು- ಪಕ್ಕಾಸುಗಳು ಒಂದೊಂದೇ ಶಿಥಿಲಗೊಂಡು ಕೆಳಗೆ ಬೀಳುತ್ತಿರುವುದನ್ನು ಕಂಡು ಭಯಬೀತರಾದ ಕುಟುಂಬ ತಕ್ಷಣವೇ ಮಕ್ಕಳೂಂದಿಗೆ ಹೊರಗೆ ಬರುತ್ತಿದ್ದ ಸಂದರ್ಭ ಒಂದೇ ಬಾರಿ ಮನೆಯ ಭಾಗಶಃ ಛಾವಣಿ ಕುಸಿದು ಬಿದ್ದಿದ್ದು ಮನೆಮಂದಿಯನ್ನು ರಕ್ಷಿಸುವಷ್ಟರಲ್ಲಿ ಸುಮಾರು 70 ವರ್ಷ ಪ್ರಾಯದ ಉಮ್ಮಕ್ಕ ಅವರ ಮೇಲೆ ಮೇಲ್ಚಾವಣಿ ಕುಸಿದು ಬಿದ್ದು ಅವರು ಗಂಭೀರವಾಗಿ ಗಾಯಗೊಂಡರು.
ಗಾಯಗೊಂಡ ಮಹಿಳೆಯನ್ನು ಸ್ಥಳೀಯರು ತಕ್ಷಣವೇ ಮೂಲ್ಕಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಆ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ವೆನ್ಲಾಕ್ಗೆ ದಾಖಲಿಸಲಾಯಿತು. ಅವರ ಕಾಲಿಗೆ ಗಂಭೀರ ಗಾಯವಾಗಿದೆ.
ಇದನ್ನೂ ಓದಿ :ರಾಜಸ್ಥಾನ್ ಸ್ಥಳೀಯ ಚುನಾವಣೆ;598 ಸ್ಥಾನಗಳಲ್ಲಿ ಕೈ ಗೆಲುವು, 490 ಸ್ಥಾನಗಳಲ್ಲಿ ಬಿಜೆಪಿಗೆ ಜಯ
ಅವಘಡದಿಂದಾಗಿ ಸುಮಾರು ನಾಲ್ಕು ಲಕ್ಷಕ್ಕೂ ಅಧಿಕ ನಷ್ಟ ಸಂಭವಿಸಿದೆ ಎಂದು ತಿಳಿದು ಬಂದಿದೆ. ಗ್ರಾಮಕರಣಿಕ ಮೋಹನ್ ಸಹಾಯಕ ಪುರುಷೋತ್ತಮ್ ಅವರು ಸ್ಥಳಕ್ಕಾಗಮಿಸಿ ವರದಿ ಸಂಗ್ರಹಿಸಿದ್ದಾರೆ. ಪಡುಪಣಂಬೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಮಂಜುಳಾ, ಸದಸ್ಯರುಗಳಾದ ಮೋಹನ್ದಾಸ್, ಅನಿಲ್ ಸೀತಾರಾಮ್, ಜ್ಯೋತಿ ಕುಲಾಲ್, ವಿನೋದ್ ಎಸ್. ಸಾಲ್ಯಾನ್ ಅವರು ಸ್ಥಳೀಯರೊಂದಿಗೆ ತಾತ್ಕಾಲಿಕ ಪರಿಹಾರ ನೀಡಲು ಶ್ರಮಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ವೆನ್ಲಾಕ್ನಲ್ಲಿ ಅಪರಿಚಿತ ಶವ
Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Ullala: ಗ್ಯಾಸ್ ಸಿಲಿಂಡರ್ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ
Mangaluru: ಪದವು ಜಂಕ್ಷನ್- ಶರ್ಬತ್ ಕಟ್ಟೆ ರಸ್ತೆಗೆ ಅಗತ್ಯವಿದೆ ಫುಟ್ಪಾತ್
Padil: ಡಿಸಿ ಕಚೇರಿ ಸಂಕೀರ್ಣಕ್ಕೆ ಚಿನ್ನದ ಬಣ್ಣದ ರಾಷ್ಟ್ರ ಲಾಂಛನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.