Kannada: ನಾಮಫಲಕದಲ್ಲಿ ಶೇ.60ರಷ್ಟು ಕನ್ನಡ ಬಳಸದಿದ್ದರೆ ಕಠಿನ ಕ್ರಮ: ಶಿವರಾಜ್ ತಂಗಡಗಿ
Team Udayavani, Jan 6, 2024, 9:40 PM IST
ಬೆಂಗಳೂರು: ರಾಜ್ಯಾದ್ಯಂತ ಎಲ್ಲ ವ್ಯಾಪಾರ ಉದ್ದಿಮೆ, ಶಿಕ್ಷಣ ಸಂಸ್ಥೆ, ಅಂಗಡಿ ಮುಂಗಟ್ಟುಗಳ ನಾಮಫಲಕದಲ್ಲಿ ಶೇ.60ರಷ್ಟು ಕನ್ನಡ ಅಳವಡಿಕೆಗೆ ನಿಯಮ ರೂಪಿಸುವ ಸಂಬಂಧ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರು ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ವಿಕಾಸಸೌಧದಲ್ಲಿ ಶನಿವಾರ ಸಭೆ ನಡೆಸಿದರು.
ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ತಿದ್ದುಪಡಿ ಕಾಯ್ದೆಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸುವ ಸಂಬಂಧ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಂಡ ಪ್ರಾಥಮಿಕವಾಗಿ ಸಚಿವರು ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಕಠಿನ ನಿಯಮ ರೂಪಿಸುವ ಸಂಬಂಧ ಸಚಿವರು ಸಭೆಯಲ್ಲಿ ಕೈಗಾರಿಕೆ ಇಲಾಖೆ, ಗೃಹ ಇಲಾಖೆ ಹಾಗೂ ಕಾನೂನು ಇಲಾಖೆ ಅಧಿಕಾರಿಗಳ ಜತೆ ಸುದೀರ್ಘವಾಗಿ ಚರ್ಚಿಸಿದರು.
ಸಭೆ ಬಳಿಕ ಮಾತನಾಡಿದ ಅವರು, ಕೇವಲ ದಂಡ, ನೋಟಿಸ್ ನೀಡಿಕೆ ಮಾತ್ರವಲ್ಲ. ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಬಳಸದವರ ವಿರುದ್ಧ ಕಠಿನ ಕ್ರಮ ಕೈಗೊಳ್ಳುವಂತೆ ನಿಯಮ ಇರಲಿದೆ. ಮುಂದಿನ ಸಭೆ ಬಳಿಕ ಶೀಘ್ರವೇ ನಿಯಮಗಳ ಆದೇಶ ಹೊರಡಿಸಲಾಗುತ್ತದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RSS ಕಚೇರಿ ಟೆಕ್ಕಿಗಳ ಬಳಸಿ ಇವಿಎಂ ಹ್ಯಾಕ್: ವಸಂತ
Honnavar;ಸಮುದ್ರದಲ್ಲಿ ಮುಳುಗುತ್ತಿದ್ದ ಮೂವರು ಯುವತಿಯರ ರಕ್ಷಣೆ
Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.